ಬೆಂಗಳೂರು : ಕಾಂಗ್ರೆಸ್ ಸರ್ಕಾರದಿAದ ಲ್ಯಾಂಡ್ ಜಿಹಾದ್ ಆರಂಭವಾಗಿದೆ ಎಂದು ಕಿಡಿಕಾರಿರುವ ಪ್ರತಿಪಕ್ಷ ನಾಯಕ ಆರ್. ಅಶೋಕ್, ವಿಜಯಪುರದ ರೈತರ ಜಮೀನನ್ನು ವಕ್ಫ್ ಬೋರ್ಡ್ ವಶಪಡಿಸಿಕೊಳ್ಳಲು ಮುಂದಾಗಿರುವ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಬಡ ರೈತರ ಜಮೀನನ್ನು ಕಬಳಿಸಲು ಎಲ್ಲ ಬಗೆಯ ಪ್ರಯತ್ನ ನಡೆಯುತ್ತಿದೆ. ವಕ್ಫ್ ಆಸ್ತಿಗಳ ಬಗ್ಗೆ ಗೊಂದಲವಿದ್ದರೆ ಜAಟಿ ಸಂಸದೀಯ ಸಮಿತಿಯಲ್ಲಿ ಚರ್ಚಿಸಲಿ. ಸ್ವತಂತ್ರವಾಗಿ ಕ್ರಮ ಕೈಗೊಳ್ಳುವ ಅಧಿಕಾರ ಯಾರಿಗೂ ಇಲ್ಲ ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಕರ್ನಾಟಕ ಒಂದೇ ಸಮುದಾಯಕ್ಕೆ ಸೇರಿದ್ದು ಎಂಬಂತೆ ಭಾಸವಾಗುತ್ತಿದೆ. ಕಾಂಗ್ರೆಸ್‌ನ ತುಷ್ಟೀಕರಣದಿಂದಾಗಿ ಹಿಂದೂಗಳ ಮೇಲೆ ಹಲ್ಲೆಯಾಗುತ್ತಿದೆ, ಗಣೇಶ ವಿಸರ್ಜನೆಗೂ ಅವಕಾಶವಿಲ್ಲ ಎಂಬಂತಹ ಪರಿಸ್ಥಿತಿ ಸೃಷ್ಟಿಯಾಗಿದ್ದು, ಜೈ ಶ್ರೀರಾಮ್ ಎಂದು ಘೋಷಣೆ ಕೂಗುವಂತಿಲ್ಲ. ಹಿಂದೂಗಳಿಗೆ ಭದ್ರತೆ ಇಲ್ಲದಂತಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ವಿಜಯಪುರದ ವನವಾಡ ಗ್ರಾಮದಲ್ಲಿ ಸುಮಾರು 15 ಸಾವಿರ ಎಕರೆ ಭೂಮಿಯನ್ನು ಕಬಳಿಸಲು ವಕ್ಫ್ ಬೋರ್ಡ್ ಯೋಜನೆ ರೂಪಿಸಿದೆ. ಈ ಸಂಬಂಧ 139 ರೈತರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಇದು ಸರ್ಕಾರದಿಂದ ನಡೆಯುತ್ತಿರುವ ಲ್ಯಾಂಡ್ ಜಿಹಾದ್ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಲವ್ ಜಿಹಾದ್‌ನಿಂದ ಹಿಂದೂ ಯುವತಿಯರು ಸಾವನ್ನಪ್ಪುತ್ತಿದ್ದಾರೆ ಈಗ ಲ್ಯಾಂಡ್
ಜಿಹಾದ್ ಆರಂಭವಾಗಿದೆ. ಕಳೆದ ತಿಂಗಳು ವಿಜಯಪುರ ಜಿಲ್ಲೆಗೆ ಬಂದಿದ್ದ ಸಚಿವ ಜಮೀರ್ ಅಹಮದ್ ಗೆಜೆಟ್ ಆಗಿರುವ ಆಸ್ತಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲು ಮೌಖಿಕ ಆದೇಶ ಮಾಡಿದ್ದಾರೆ. ಈ ಮೂಲಕ ಸರ್ಕಾರದಿಂದ ಅಧಿಕೃತವಾಗಿ ಒತ್ತುವರಿ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.
ಈ ಹಿಂದೆ ಔರಂಗಜೇಬ್ ಟಿಪ್ಪು ಸುಲ್ತಾನ್‌ನಂತಹ ಮತಾಂಧರು ಹಿAದೂಗಳ ಭೂಮಿ, ಉದ್ಯೋಗ ಬದುಕು ಕಿತ್ತುಕೊಂಡು ಮತಾಂತರ ಮಾಡಿದ್ದರು. ಈಗ ರೈತರ ಭೂಮಿ ಕಿತ್ತುಕೊಳ್ಳಲಾಗುತ್ತಿದೆ ಎಂದು ಅಶೋಕ್ ದೂರಿದ್ದಾರೆ.
ಜಮೀರ್ ಆಧುನಿಕ ಟಿಪ್ಪು ಸುಲ್ತಾನ್ ಸಚಿವ ಜಮೀರ್ ಅಹಮದ್ ಖಾನ್ ಆಧುನಿಕ ಟಿಪ್ಪು ಸುಲ್ತಾನ್ ಆಗಲು ಹೊರಟಿದ್ದಾರೆ, ಇದು ಸರಿಯಲ್ಲ. ಕೂಡಲೇ ಮುಖ್ಯಮಂತ್ರಿಗಳು ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಕಾಂಗ್ರೆಸ್ ಸರ್ಕಾರದ ಈ ದೌರ್ಜನ್ಯ ವಿರೋಧಿ ವಕ್ಫ್ನಿಂದ ಭೂಮಿ ಕಳೆದುಕೊಳ್ಳುವ ಭೀತಿಯಲ್ಲಿರುವ ವಿಜಯಪುರದ ರೈತರು ದೀಪಾವಳಿ ಆಚರಿಸದಿರಲು ನಿರ್ಧರಿಸಿದ್ದಾರೆ. ಸರ್ಕಾರಕ್ಕೆ ಅನ್ನದಾತರ ಶಾಪ ತಟ್ಟದೆ ಇರದು ಎಂದು ಅವರು ಹೇಳಿದರು.
ಕೇಂದ್ರದ ಉದ್ದೇಶಿತ ವಕ್ಫ್ ಕಾಯ್ದೆ ತಿದ್ದುಪಡಿ ಪ್ರಸ್ತಾಪಕ್ಕೆ ರಾಜ್ಯ ವಕ್ಫ್ ಬೋರ್ಡ್ ವಿರೋಧ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರ ಈ ಬಗ್ಗೆ ಜಂಟಿ ಸಂಸದೀಯ ಸಮಿತಿ ರಚಿಸಿದೆ. ಹಳೆಯ ನಿಯಮ ಕಾನೂನುಗಳಿಗೆ ಕೇಂದ್ರ ಸರ್ಕಾರ ಬದಲಾವಣೆ ತರಲಿದೆ ಎಂಬುದನ್ನು ಅರಿತಿರುವ ಸಚಿವ ಜಮೀರ್ ಅಹಮದ್ ಇದಕ್ಕೂ ಮುನ್ನ ಆದಷ್ಟು ಕರ್ನಾಟಕದ ಭೂಮಿ ಕಬಳಿಸಬೇಕು ಎಂದು ಹೊರಟಿದ್ದಾರೆ.
ವಕ್ಫ್ ಸಂಸ್ಥೆ ಸ್ವಾಯತ್ತ ಸಂಸ್ಥೆ ಎಂದು ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ವಕ್ಫ್ ಆಸ್ತಿ ಎಂಬುದು ಒಂದು ರೀತಿ ಲ್ಯಾಂಡ್ ಜಿಹಾದ್ ಇದ್ದ ಹಾಗೆ. ಕಾಂಗ್ರೆಸ್ ಪಕ್ಷ ತನ್ನ ತೃಷ್ಟೀಕರಣ ರಾಜಕಾರಣಕ್ಕೆ ವೋಟ್ ಬ್ಯಾಂಕ್ ರಾಜಕೀಯಕ್ಕೆ ರೈತರ ಕೃಷಿ ಭೂಮಿ ಮಾತ್ರವಲ್ಲದೆ ಮುಂದೊAದು ದಿನ ಇಡೀ ರಾಜ್ಯವನ್ನು ವಕ್ಫ್ ಹೆಸರಿನಲ್ಲಿ ಮುಸ್ಲಿಂರಿಗೆ ಕೊಟ್ಟರೂ ಅಚ್ಚರಿ ಇಲ್ಲ ಎಂದಿದ್ದಾರೆ.