Thursday, July 23, 2026
Homeರಾಜ್ಯಬೆಂಗಳೂರು : ರಾಜ್ಯದಲ್ಲಿ ಕಾಟನ್ ಕ್ಯಾಂಡಿ ಬ್ಯಾನ್, ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣಗಳನ್ನು ಬಳಸುವಂತಿಲ್ಲ: ಆರೋಗ್ಯ...

ಬೆಂಗಳೂರು : ರಾಜ್ಯದಲ್ಲಿ ಕಾಟನ್ ಕ್ಯಾಂಡಿ ಬ್ಯಾನ್, ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣಗಳನ್ನು ಬಳಸುವಂತಿಲ್ಲ: ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್.

ಬೆಂಗಳೂರು : ಕೃತಕ ಬಣ್ಣ ಬೆರೆಸಿದ ಗೋಬಿ ಮಂಚೂರಿ ನಿಷೇಧ ಎಂದು ಆರೋಗ್ಯ ಇಲಾಖೆಸ್ಪಷ್ಟಪಡಿಸಿದೆ. ಹಲವು ಜಿಲ್ಲೆಗಳಿಂದ ಮಾದರಿ ಸಂಗ್ರಹಿಸಿ ಟೆಸ್ಟ್ ಕಳುಹಿಸಲು ಸೂಚನೆ ನೀಡಿತ್ತು. ಅದರಂತೆ ರಾಜ್ಯದ 121ಕ್ಕೂ ಹೆಚ್ಚು ಕಡೆ ಗೋಬಿ ಮಂಚೂರಿ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 100 ಕ್ಕೂ ಹೆಚ್ಚು ಕಡೆ ಗೋಬಿ ಮಂಚೂರಿಗಳು ಅಸುರಕ್ಷಿತ ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾಗಿ ತಿಳಿದು ಬಂದಿದೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೊರಗಡೆ ಆಹಾರ ಸೇವನೆ ಮಾಡುತ್ತಾರೆ. ಇದರಿಂದ ಕ್ಯಾನ್ಸರ್ ಹಾಗೂ ಅಸಾಂಕ್ರಮಿಕ ಖಾಯಿಲೆ ಏರಿಕೆಯಾಗುತ್ತಿದೆ. ಇದರಿಂದಾಗಿ ಬಾಂಬೆ ಮಿಠಾಯಿ ಮತ್ತು ಗೋಬಿ ಮಂಚೂರಿಯನ್ನು ಕ್ಯಾನ್ಸರ್​ಕಾರಕ ಅಂಶಗಳು ಪತ್ತೆಯಾಗಿರುವುದು ಗೋಬಿ ಪ್ರಿಯರನ್ನ ಆತಂಕಕ್ಕೆ ತಳ್ಳಿದೆ.ಈ ವಿಚಾರ ಸರ್ಕಾರದ ಗಮನಕ್ಕೂ ಬಂದಿದ್ದು ದೊಡ್ಡಮಟ್ಟದಲ್ಲಿ ಚರ್ಚೆ ನಡೆದಿದೆ . ಸಭೆ ನಡೆಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. 171 ತರಹದ ಗೋಬಿ ಮಂಚೂರಿ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ಮಾಡಿದ್ದೇವೆ. ಇದರಲ್ಲಿ 107 ಮಾದರಿಯಲ್ಲಿ ಕೃತಕ ಬಣ್ಣ ಕಂಡು ಬಂದಿದೆ. 64 ಸುರಕ್ಷಿತವಾದ ಮಾದರಿಗಳು ಕಂಡು ಬಂದಿದೆ. ಟಾರ್ಟ್ರಾಜಿನ್, ಸನ್​ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್​ನಂತ ಕೃತಕ ಬಣ್ಣಗಳನ್ನು ಬಳಸಲಾಗಿದೆ ಇವು ಆರೋಗ್ಯಕ್ಕೆ ತುಂಬಾ ಅಪಾಯಕಾರಿ ಎಂದು ತಿಳಿಸಿದರು,ಸಭೆ ಬಳಿಕ ಮಾಧ್ಯಮಗೋಷ್ಠಿ ನಡೆಸಿ ಸರ್ಕಾರ ತೆಗೆದುಕೊಂಡಿರುವ ನಿರ್ಧಾರಗಳನ್ನ ತಿಳಿಸಿದರು.

2011ರ ನಿಯಮದ ಪ್ರಕಾರ ಗೋಬಿ ಮಂಚೂರಿ ತಯಾರಿಕೆಯಲ್ಲಿ ಬಣ್ಣ ಬಳಸುವಂತಿಲ್ಲ ಕಾಟನ್ ಕ್ಯಾಂಡಿ ಯಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಕೃತಕ ಬಣ್ಣ ಬಳಸುವಂತಿಲ್ಲ.ಈ ಪೈಕಿ 107 ಮಾದರಿಯಲ್ಲಿ ಕೃತಕ ಬಣ್ಣಗಳು ಕಂಡು ಬಂದಿವೆ,ಗೋಬಿ ಮಂಚೂರಿ ತಯಾರಿಕೆಯಲ್ಲಿ ಕೃತಕ ಬಣ್ಣ ಬಳಕೆ ನಿಷೇದಿಸಲಾಗಿದೆ. ಕಲರ್ ಹಾಕಿರುವ ಕಾಟನ್ ಕ್ಯಾಂಡಿ ನಿಷೇಧ ಮಾಡುತ್ತಿದ್ದೇವೆ ಕಲರ್ ಇಲ್ಲದ ಕಾಟನ್ ಕ್ಯಾಂಡಿ ಮಾರಾಟಕ್ಕೆ ಅವಕಾಶ ಇದೆ ಕೃತಕ ಬಣ್ಣ ಹಾಕಿ ಗೋಬಿ ಮಂಚೂರಿ ಮಾರಾಟ ನಿರ್ಬಂಧ ನಿಯಮ ಉಲ್ಲಂಘಿಸಿದ್ರೆ 10 ಲಕ್ಷ ಹಾಗೂ 7 ವರ್ಷ ಜೀವಾವಧಿ ಶಿಕ್ಷೆ 2006 ನಿಯಮ 59ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular