Wednesday, November 5, 2025
Flats for sale
Homeಜಿಲ್ಲೆಬೆಂಗಳೂರು : ಕಾನೂನಿನ ಅನ್ವಯ ಕೆಂಪುಕಲ್ಲು ಗಣಿಗಾರಿಕೆಗೆ ಅವಕಾಶ ಕಲ್ಪಿಸಲು ವಿಧಾನ ಸೌಧದಲ್ಲಿ ಉನ್ನತ ಮಟ್ಟದ...

ಬೆಂಗಳೂರು : ಕಾನೂನಿನ ಅನ್ವಯ ಕೆಂಪುಕಲ್ಲು ಗಣಿಗಾರಿಕೆಗೆ ಅವಕಾಶ ಕಲ್ಪಿಸಲು ವಿಧಾನ ಸೌಧದಲ್ಲಿ ಉನ್ನತ ಮಟ್ಟದ ಸಭೆ,ಶೀಘ್ರದಲ್ಲೇ ಹೊಸ ನಿಯಮ..!

ಬೆಂಗಳೂರು ; ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನಿನ ಅನ್ವಯ ಅವಕಾಶ ಕಲ್ಪಿಸುವ ಕುರಿತಂತೆ ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ಸ್ಪೀಕರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ನೃತೃತ್ವದಲ್ಲಿ ಉನ್ನತ ಮಟ್ಡದ ಸಭೆ ನಡೆಯಿತು. ಸಭೆಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ, ಗಣಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಸೇರಿದಂತೆ, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಳ ವೈದ್ಯ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಕರಾವಳಿ ಜಿಲ್ಲೆಗಳ ವಿವಿಧ ಕ್ಷೇತ್ರಗಳ ಎಲ್ಲ ಪಕ್ಷಗಳ ಶಾಸಕರು, ಉನ್ಮತ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ, ಕರಾವಳಿ ಭಾಗದಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಇರುವ ಅಡೆತಡೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪೂರ್ವಬಾವಿ ಸಭೆಗಳಲ್ಲಿ ನಡೆದ ಚರ್ಚೆಗಳು, ಹಾಗೂ ಪರಿಷ್ಕೃತ ನಿಯಮ ಜಾರಿಗೆ ತರುವ ನಿಟ್ಟಿನಲ್ಲಿ ಕೈಗೊಳ್ಳುತ್ತಿರುವ ಕ್ರಮಗಳ ಕುರುತಂತೆ ಸಭೆಯಲ್ಲಿ ಗಣಿ ಇಲಾಖೆ ಅಧಿಕಾರಿಗಳಿಗೆ ಸಭೆಗೆ ಮಾಹಿತಿ ಒದಗಿಸಿದರು.

ವಾಣಿಜ್ಯ ಉದ್ದೇಶವಲ್ಲದ ಕೆಂಪುಕಲ್ಲು ಕ್ವಾರಿಗಳಿಗೆ ಅಧಿಕೃತವಾಗಿ ಪರವಾನಿಗೆ ಕೊಡುವ ವ್ಯವಸ್ಥೆಯನ್ನು ಸರಳೀಕರಣ ಮಾಡಲಾಗುವುದು. ಈ ನಿಟ್ಟಿನಲ್ಲಿ SOP ಡ್ರಾಫ್ಟ್ ಅನ್ನ ಸಿದ್ಧಪಡಿಸುತ್ತಿರುವ ಬಗ್ಗೆ ಗಣಿ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದ ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.‌

ಸಭೆಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ಸಮಯ ಮಿತಿಯೊಳಗೆ ಸುಲಭ ರೀತಿಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಪರವಾನಿಗೆಗಳನ್ನು ನೀಡುವ ವ್ಯವಸ್ಥೆ ಕಲ್ಪಿಸಿ ಎಂದು ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.‌ ಜಿಲ್ಲೆಯ ಕಟ್ಟಡ ಕಾಮಗಾರಿಗಳಿಗೆ, ಗೃಹ ನಿರ್ಮಾಣಕ್ಕೆ ಕೆಂಪುಕಲ್ಲು ಅಗತ್ಯವಾಗಿ ಬೇಕಾಗಿದೆ.. ಕೆಂಪುಕಲ್ಲು ಗಣಿಗಾರಿಕೆ ಮಾಡುವವರು ಅರ್ಜಿ ಸಲ್ಲಿಸುವವರಿಗೆ ಶೀಘ್ರದಲ್ಲಿ ಅವಕಾಶ ಕಲ್ಪಿಸಿ, ತಿಂಗಳೊಳಗೆ ಪರವಾನಿಗಳು ದೊರಕಿಸಿಕೊಡುವತ್ತ ಹೆಚ್ಚಿನ ಗಮನ ಹರಿಸುವಂತೆ ಸಚಿವ ದಿನೇಶ್ ಗುಂಡೂರಾವ್ ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ವಿಧಾನ ಸಭಾಧ್ಯಕ್ಷರಾದ ಯು.ಟಿ ಖಾದರ್ ಅವರು, ಮಣ್ಣ ಸಮತಟ್ಟು ಸೇರಿದಂತೆ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಡ್ರಿಲ್ ಮಾಡುವ ಕುರಿತಂತೆ ಇರುವ ಸಮಸ್ಯೆಯನ್ನು ಸರಿಪಡಿಸುವತ್ತ ಗಣಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.‌ ರಾಯಾಲ್ಟಿಯನ್ನ ಕಡಿಮೆಗೊಳಿಸಿಗೆ ನಿಯಮ ಬದ್ಧವಾಗಿ ಕೆಂಪುಕಲ್ಲು ಗಣಿಗಾರಿಗೆಕೆ ಅವಕಾಶ ಕಲ್ಪಿಸುವಂತೆ ಗಣಿ ಅಧಿಕಾರಿಗಳಿಗೆ ಸೂಚನೆ ನೀಡಿದರು.‌.

RELATED ARTICLES

LEAVE A REPLY

Please enter your comment!
Please enter your name here

Most Popular