ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸಗೌಡ ಅವರನ್ನು 8 ವರ್ಷದ ಬಾಲಕಿಯನ್ನು ದತ್ತು ತೆಗೆದುಕೊಳ್ಳುವಲ್ಲಿ ಕಾನೂನು ಉಲ್ಲಂಘಿಸಿರುವ ಆರೋಪ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.ಕಾನೂನು ಬಾಹಿರವಾಗಿ ಅವರು ಮಗುವನ್ನು ದತ್ತು ಪಡೆದಿದ್ದಾರೆ. ಈ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಮಗುವಿನ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.
8 ವರ್ಷದ ಮಗುವನ್ನು ಕಾನೂನು ಬಾಹಿರವಾಗಿ ಅವರು ದತ್ತು ಪಡೆದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ನೀಡಿದ್ದರು. ಜೆ.ಜೆ.ಆ್ಯಕ್ಟ್ ಅಡಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿಕೊಂಡು ಬಂಧಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಸೋನು ಗೌಡ ನಾನು ಅವಳ ಅಮ್ಮನ ಬಳಿ ದತ್ತು ಕೊಡುವಂತೆ ಕೇಳಿದೆ. ಇದನ್ನು ಕೇಳಿ ಅವಳ ತಾಯಿ ರಾಯಚೂರಿಗೆ ಹೋದರು. ಮಗುವಿಗೆ ನಾನಿಲ್ಲದೆ ಜ್ವರ ಬಂದಿತ್ತು. ಫೋನ್ ಮೂಲಕ ಸೇವಂತಿ ಬಳಿ ಮಾತನಾಡಿದೆ. ನಂತರ ಅವಳನ್ನು ಕರೆದುಕೊಂಡು ಬಂದೆ. ಕಾನೂನಾತ್ಮಕವಾಗಿ ದತ್ತು ತೆಗೆದುಕೊಳ್ಳಲು 3 ತಿಂಗಳು ಬೇಕು. ಅವಳ ಅಪ್ಪ ಅಮ್ಮನಿಗೆ ಒಪ್ಪಿಗೆ ಇದೆ. ನನಗೂ ಒಪ್ಪಿಗೆ ಇದೆ. ಕಾನೂನು ಕ್ರಮ ನಡೆಯುತ್ತಿದೆ’ ಎಂದು ಸೋನು ಹೇಳಿದ್ದರು.
ಮಕ್ಕಳನ್ನು ದತ್ತು ತೆಗೆದುಕೊಳ್ಳಬೇಕಾದ್ರೆ ಕೆಲವೊಂದು ನಿಯಮ ಪಾಲಿಸಬೇಕಾಗುತ್ತದೆ. ದತ್ತು ತೆಗೆದುಕೊಳ್ಳುವ ತಾಯಿ ಮತ್ತು ಮಗುವಿಗೆ 25 ವರ್ಷಗಳ ಅಂತರವಿರಬೇಕು. ಸೋನುಗೌಡ ಕೇಸ್ನಲ್ಲಿ ಮಗುವಿಗೆ 8 ವರ್ಷ ಮತ್ತು ಆಕೆಗೆ 23 ವರ್ಷ. ಈ ಮೂಲಕ ಸೋನು ಗೌಡ ನಿಯಮ ಉಲ್ಲಂಘನೆ ಮಾಡಿರೋದು ತಿಳಿಯುತ್ತಿದೆ. ರೀಲ್ಸ್ ಮಾಡುವ ಉದ್ದೇಶದಿಂದ ಮಗುವನ್ನು ತನ್ನಿಷ್ಟ ಬಂದಂತೆ ಬಳಸಿಕೊಂಡಿದ್ದಾರೆಂಬ ಆರೋಪ ಕೂಡ ಇದೆ. CWCಯ ಕೆಲವೊಂದು ನಿಯಮವನ್ನು ಸಹ ಇಲ್ಲ ಉಲ್ಲಂಘನೆ ಮಾಡಿದ್ದಾರೆ ಎನ್ನಲಾಗಿದೆ.