ಬೆಂಗಳೂರು : ಒಂದೂವರೆ ದಶಕದ ಹಿಂದಿನ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಆಸ್ತಿಗಳ ಮೇಲೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯದ (ಇ.ಡಿ) ಬೆಂಗಳೂರು ವಲಯದ ಅಧಿಕಾರಿಗಳು 6.75 ಕೆಜಿ ಚಿನ್ನ ಸೇರಿದಂತೆ 1.68 ಕೋಟಿ ನಗದನ್ನು ಜಪ್ತಿ ಮಾಡಿದ್ದಾರೆ.
ಈಗಾಗಲೇ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಶಿಕ್ಷೆಗೊಳಗಾಗಿ ನಂತರ ಹೈಕೋರ್ಟ್ ಶಿಕ್ಷೆ ಅಮಾನತು ಮಾಡಿದ ಹಿನ್ನೆಲೆಯಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಹೊರಬAದಿರುವ ಶಾಸಕ ಸೈಲ್ ಮನೆಯಲ್ಲಿ ಇ.ಡಿ.ಅಧಿಕಾರಿಗಳು ಬುಧವಾರ ಹಾಗೂ ಗುರುವಾರ ತೀವ್ರತಪಾಸಣೆ ನಡೆಸಿದ್ದರು. ಅಕ್ರಮ ಹಣ ವರ್ಗಾವಣೆ ಕಾಯ್ದೆ (ಪಿಎಂಎಲ್‌ಎ) ಪ್ರಕರಣ ದಾಖಲಿಸಿಕೊಂಡಿದ್ದ ಇ.ಡಿ ಅಧಿಕಾರಿಗಳು, ಕಾರವಾರದ ಹೊರವಲಯದಲ್ಲಿರುವ ಶಾಸಕ ಸೈಲ್ ನಿವಾಸ, ಗೋವಾ, ಮುಂಬೈ ಹಾಗೂ ದೆಹಲಿ ಸೇರಿದಂತೆ ದೇಶದ ಹಲವೆಡೆ ಇರುವ ಆಸ್ತಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದರು.
ಪರಿಶೀಲನೆ ವೇಳೆ ಅಕ್ರಮಕ್ಕೆ ಸಂಬAಧಿಸಿದAತೆ ಹಲವು ದಾಖಲಾತಿಗಳು ದೊರೆತಿವೆ. ಇದಕ್ಕೆ ಪೂರಕವಾಗಿ ಇಮೇಲ್ ಮಾಡಿರುವುದು ಗೊತ್ತಾಗಿದೆ.
ತಪಾಸಣೆ ವೇಳೆ 1.68 ಕೋಟಿ ನಗದು, 6.75ಕೆ.ಜಿ ಮೌಲ್ಯದ ಚಿನ್ನದ ಬಿಸ್ಕತ್‌ಗಳು ಹಾಗೂ ಬ್ಯಾಂಕ್ ಖಾತೆಯಲ್ಲಿದ್ದ ಸುಮಾರು 14.13 ಕೋಟಿ
ರೂ. ಹಣವನ್ನ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇ.ಡಿ ಅಧಿಕಾರಿಗಳು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ.
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯವು ಸತೀಶ್ ಸೈಲ್ ದೋಷಿ ಎಂದು ತೀರ್ಪು ನೀಡಿತ್ತು. ಈ ಸಂಬAಧ ಹೈಕೋರ್ಟ್, ಶಿಕ್ಷೆಗೆ ತಡೆಯಾಜ್ಞೆ ನೀಡಿತ್ತು. ಸದ್ಯ ಜಾಮೀನಿನ ಮೇಲೆ ಹೊರಗಿರುವ ಸತೀಶ್ ಅವರ ಮೇಲೆ ಸಿಬಿಐ ಹಾಗೂ ಲೋಕಾಯುಕ್ತ ತನಿಖೆಯ ವಿಚಾರಣೆ ಎದುರಿಸುತ್ತಿದ್ದಾರೆ.