ಬೆಂಗಳೂರು : ಬಿಟ್‌ಕಾಯಿನ್ ಹಗರಣದ ಬಗ್ಗೆ ಹೊಸದಾಗಿ ತನಿಖೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿರುವ ಹಿನ್ನೆಲೆಯಲ್ಲಿ, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮೊಹಮ್ಮದ್ ಶಾರಿಕ್ ವಿದೇಶದಿಂದ ಭಯೋತ್ಪಾದನೆ ಸಂಬಂಧಿತ ಚಟುವಟಿಕೆಗಳಿಗೆ ಕರೆನ್ಸಿ ಕ್ರಿಪ್ಟೋ ರೂಪದಲ್ಲಿ ಲಕ್ಷಾಂತರ ರೂಪಾಯಿ ಪಡೆಯುತ್ತಿದ್ದ ಎಂಬ ಅಂಶ ಬೆಳಕಿಗೆ ಬಂದಿದೆ. ಶಾರಿಕ್ ಮತ್ತು ಇತರ ಐಸಿಸ್ ಹ್ಯಾಂಡ್ಲರ್‌ಗಳು ಡಾರ್ಕ್ ವೆಬ್‌ನಿಂದ ಕ್ರಿಪ್ಟೋ ಕರೆನ್ಸಿ ಮೂಲಕ ಹಣವನ್ನು ಪಡೆಯುತ್ತಿದ್ದರು ಎಂದು ತನಿಖೆಗಳು ಬಹಿರಂಗಪಡಿಸಿವೆ. ಎನ್ ಐಎ ಸಲ್ಲಿಸಿರುವ ಹೆಚ್ಚುವರಿ ಚಾರ್ಜ್ ಶೀಟ್ ನಲ್ಲಿ ಈ ಬಗ್ಗೆ ಉಲ್ಲೇಖವಿದೆ.