ಬೆಂಗಳೂರು : ಕುಡಿಯುವ ನೀರಿಗೆ ತೊಂದರೆ ಯಾದರೆ ಆಯಾ ಡೀಸಿಗಳೇ ಅದಕ್ಕೆ ಹೊಣೆಯಾಗುತ್ತಾರೆ. ಹಾಗಾಗಿ ಕಂದಾಯ,ಪಂಚಾಯತ್ ರಾಜ್
ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸ ಬೇಕು. ರಾಜ್ಯದ ಐದು ಜಿಲ್ಲೆ ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಕ್ರಮಗಳನ್ನು ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.
೨೬ ಜಿಲ್ಲೆಗಳಲ್ಲಿ ಮುಂಗಾರು ಕೊರತೆ: ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ನಡೆದ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒಗಳ ಸಭೆ ನಡೆಸಿದ ಅವರು, ಈ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಬಗ್ಗೆ ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ ತಿಂಗಳಲ್ಲಿ ವಾಡಿಕೆ ಮಳೆಯಾಗುವ ಸಾಧ್ಯತೆಯಿದ್ದು, ಸೆಪ್ಟಂಬರ್ ತಿಂಗಳಲ್ಲಿ ಮಳೆ ಕಡಿಮೆ ನಿರೀಕ್ಷಿಸಲಾಗಿದೆ ಎಂದು ತಿಳಿಸಿದರು.
ಅನುದಾನದ ಕೊರತೆಯಿಲ್ಲ: ಸಾರ್ವಜನಿಕರಿಗೆ ನೆರಳಿನ ವ್ಯವಸ್ಥೆ ಹಾಗೂ ಕುಡಿಯುವ ನೀರು ಪೂರೈಕೆಯನ್ನು ಖಾತ್ರಿಪಡಿಸಲು ಯಾವುದೇ ಅನುದಾನದ ಕೊರತೆಯಿಲ್ಲ. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಈಗಾಗಲೇ 419.50 ಕೋಟಿ ರೂ ಲಭ್ಯವಿದೆ. ವರದಿ ಆಧಾರದಲ್ಲಿ ಹೆಚ್ಚುವರಿ ನೆರವಿಗೆ ಹಣಕಾಸು ಇಲಾಖೆಗೆ ಸೂಚನೆ ನೀಡಲಾಗಿದೆ. ಕುಡಿಯುವ ನೀರಿನ ವಿಚಾರದ ಸಾರ್ವಜನಿಕರ ಅಹವಾಲುಗಳಿಗೆ ತುರ್ತಾಗಿ ಸ್ಪಂದಿಸಬೇಕು. ಎಲ್ಲಾ ಆರ್. ಒ ಘಟಕಗಳಿಗೆ ನಿರಂತರ ವಿದ್ಯುತ್ ಸರಬರಾಕು ಕಲ್ಪಿಸಿ ತಕ್ಷಣದ ದುರಸ್ತಿ ಮಾಡಬೇಕು.ತಾಲೂಕು ಹಾಗೂ ವಾರ್ಡ್ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಬೇಕು. ಜಿಲ್ಲಾ ಮಟ್ಟದ ಕಾರ್ಯಪಡೆ ಸಕ್ರಿಯವಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕೆAದೂ ಮುಖ್ಯಮಂತ್ರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
598 ಗ್ರಾ.ಪಂ.ಗಳಲ್ಲಿ ನೀರಿನ ಸಮಸ್ಯೆ: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಾಗಬಹುದಾದ 213೩ ತಾಲೂಕು ಹಾಗೂ2410 ಗ್ರಾಮ ಪಂಚಾಯತಿಗಳನ್ನು ಗುರುತಿಸಲಾಗಿದೆ. ಪ್ರಸ್ತುತ 114 ತಾಲೂಕುಗಳ 598 ಗ್ರಾಮ ಪಂಗಳಲ್ಲಿಕುಡಿಯುವ ನೀರಿನ ಸಮಸ್ಯೆಯಿದ್ದು, 137 ಗ್ರಾಮಗಳಿಗೆ ಒಟ್ಟು 129 ಟ್ಯಾಂಕರ್‌ಗಳ ಮೂಲಕ ಸರಬರಾಜು ಮಾಡಲಾಗುತ್ತಿದೆ.೫೮೫ ಖಾಸಗಿ ಕೊಳವೆಬಾವಿಗಳನ್ನು 515 ಗ್ರಾಮಗಳಿಗೆ ನೀರು ಪೂರೈಸಲಾಗುತ್ತಿದೆ. ಕಲುಷಿತನೀರು ಪೂರೈಕೆಯಾಗಿ ಆರೋಗ್ಯ ಸಮಸ್ಯೆಯಾಗದಂತೆ ಎಲ್ಲಾ ಜಿಲ್ಲೆಗಳಲ್ಲಿ ಎಚ್ಚರವಹಿಸಬೇಕು. ಈಗಾಗಲೇ ಜಾರಿಗೊಳಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳು ನೋಡಿಕೊಳ್ಳುವಂತೆ ಸಿದ್ದರಾಮಯ್ಯ ಹೇಳಿದರು.


