ಬೆಂಗಳೂರು : ಕೇಂದ್ರ ಸರ್ಕಾರ ರಾಜ್ಯಕ್ಕೆ ಅತ್ಯಲ್ಪ ಬರ ಪರಿಹಾರವನ್ನು ಬಿಡುಗಡೆ ಮಾಡಿ ಅನ್ಯಾಯ, ತಾರತಮ್ಯವೆಸಗಿರುವುದನ್ನು ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರುಗಳು ಖಾಲಿ ಚೊಂಬು ಹಿಡಿದು ಇಂದು ಪ್ರತಿಭಟನಾ ಧರಣಿ ನಡೆಸಿದರು.
ವಿಧಾನಸೌಧದ ಆವರಣದಲ್ಲಿರುವ ಮಹಾತ್ಮಗಾಂಧಿ ಪ್ರತಿಮೆ ಬಳಿ ನಡೆದ ಈ ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್‌ಸುರ್ಜೇವಾಲಾ, ಉಪಮುಖ್ಯಮAತ್ರಿ ಡಿ.ಕೆ ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕAದಾಯ ಸಚಿವ ಕೃಷ್ಣಬೈರೇಗೌಡ, ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಸೇರಿದಂತೆ ಹಲವು ಸಚಿವರು, ಕಾಂಗ್ರೆಸ್ ಶಾಸಕರು, ಕಾಂಗ್ರೆಸ್ ಮುಖAಡರುಗಳು ಭಾಗಿಯಾಗಿ ಖಾಲಿ ಚೊಂಬನ್ನು ಪ್ರದರ್ಶಿಸಿ ಕರ್ನಾಟಕಕ್ಕೆ ಕೇಂದ್ರದಿAದ ಸಿಕ್ಕಿರುವುದು ಚೊಂಬು ಎಂದು ಕಿಡಿಕಾರಿದರು.
ರಾಜ್ಯದ ೨೨೩ ತಾಲ್ಲೂಕುಗಳಲ್ಲಿ ಭೀಕರ ಬರ ಇದೆ, ಕೇಂದ್ರಸರ್ಕಾರ 3,454ಕೋಟಿ ರೂ.ಗಳನ್ನು ಮಾತ್ರ ಬರ ಪರಿಹಾರವಾಗಿ ಬಿಡುಗಡೆ ಮಾಡಿದೆ. ಇದು ರಾಜ್ಯಸರ್ಕಾರ ಸಲ್ಲಿಸಿದ ಮನವಿಯ ಕಾಲೂ ಭಾಗವೂ ಇಲ್ಲ, ಕೂಡಲೇ ಕೆಂದ್ರ ಸರ್ಕಾರ ಹೆಚ್ಚಿನ ಪರಿಹಾರ ಬಿಡುಗಡೆ ಮಾಡಬೇಕು ಎಂದು ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕರು ಆಗ್ರಹಿಸಿದರು.
ಪೂರ್ಣ ಪ್ರಮಾಣದಲ್ಲಿ ಬರ ಪರಿಹಾರ ಹಣ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ ಕಾಂಗ್ರೆಸ್ ನಾಯಕರು, ಖಾಲಿ ಚೊಂಬು ಕೊಟ್ಟ ಪಾರ್ಟಿ ಬಿಜೆಪಿ, ಚೊಂಬೇಶ್ವರ ಮೋದಿ, ಗೋ ಬ್ಯಾಕ್ ಮೋದಿ ಎಂಬ ಘೋಷಣೆಗಳನ್ನು ಹಾಕಿದರು.
ಕೇಂದ್ರದಿAದ ರಾಜ್ಯಕ್ಕೆ ಮಹಾ ಮೋಸವಾಗಿದೆ. ಪೂರ್ಣ ಪ್ರಮಾಣದ ಹಣ ಬಿಡುಗಡೆ ಮಾಡದೆ ಕನ್ನಡಿಗರನ್ನು ಅವಮಾನಿಸಬೇಡಿ ಎಂಬ ಬಿತ್ತಿಪತ್ರಗಳನ್ನು ಹಿಡಿದು ಮಹಾತ್ಮಗಾಂಧಿ ಪ್ರತಿಮೆಯಿಂದ ದೇವರಾಜ ಅರಸು ಪ್ರತಿಮೆವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಲ್ಲ ನಾಯಕರು ಪಾದಯಾತ್ರೆ ಸಹ ನಡೆಸಿ ಪ್ರತಿಭಟನೆಯನ್ನು ಮುಕ್ತಾಯಗೊಳಿಸಿದರು.