Friday, November 22, 2024
Flats for sale
Homeರಾಜ್ಯಬೆಂಗಳೂರು : ಕೇಕ್​ ಪ್ರಿಯರಿಗೆ ಬಿಗ್ ಶಾಕ್ : ಕೇಕ್​​ಗೆ ಬಳಸುವ ಪದಾರ್ಥಗಳಲ್ಲೂ ಕ್ಯಾನ್ಸರ್​​ಕಾರಕ ಅಂಶ...

ಬೆಂಗಳೂರು : ಕೇಕ್​ ಪ್ರಿಯರಿಗೆ ಬಿಗ್ ಶಾಕ್ : ಕೇಕ್​​ಗೆ ಬಳಸುವ ಪದಾರ್ಥಗಳಲ್ಲೂ ಕ್ಯಾನ್ಸರ್​​ಕಾರಕ ಅಂಶ ಪತ್ತೆ, ಆಹಾರ ಸುರಕ್ಷತಾ ಇಲಾಖೆಯ ಸೂಚನೆ ಪಾಲಿಸುವಂತೆ ಕೇಕ್ ತಯಾರಿಕರಿಗೆ ಅಧಿಕಾರಿಗಳಿಂದ ಎಚ್ಚರಿಕೆ..!

ಬೆಂಗಳೂರು : ಇತ್ತೀಚಿಗಷ್ಟೆ ಗೋಬಿ, ಕಾಟನ್‌ ಕ್ಯಾಂಡಿ ಹಾಗೂ ಕಬಾಬ್​ ಮತ್ತು ಪಾನಿಪುರಿ ​ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್​ ಕಾರಕ ಅಂಶಗಳು ಪತ್ತೆಯಾದ ಕಾರಣ ರಾಜ್ಯ ಸರ್ಕಾರ ಅವುಗಳಿಗೆ ಬಳಸುವ ಕೃತಕ ಬಣ್ಣವನ್ನು ಬ್ಯಾನ್​ ಮಾಡಿತ್ತು. ಆದರೆ ಇದೀಗ ಕೇಕ್​ನಲ್ಲೂ ಕೂಡ ಕ್ಯಾನ್ಸರ್​ ಕಾರಕ ಅಂಶ ಪತ್ತೆಯಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ತಿಳಿಸಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗದಲ್ಲಿನ ಕೇಕ್​​ಗೆ ಬಳಸುವ ಪದಾರ್ಥಗಳು ಕಲಬರಿಕೆಯಿಂದ ಕೂಡಿವೆ ಎಂಬ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಕೇಕ್​ ಮಾದರಿಗಳನ್ನು ಸಂಗ್ರಹಿಸಿದರು. ಪರಿಶೀಲನೆಗೆ ಒಳಪಡಿಸಿದಾಗ 12 ಮಾದರಿ ಕೇಕ್​ಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ. ವಿಶೇಷವಾಗಿ ರೆಡ್ ವೆಲ್ವೆಟ್ ಹಾಗೂ ಬ್ಲಾಕ್ ಫಾರೆಸ್ಟ್ ಕೇಕ್​ನಲ್ಲಿ ಹೆಚ್ಚು ಬಣ್ಣ ಬಳಕೆ ಮಾಡುವುದರಿಂದ, ಇದು ಮನುಷ್ಯನ ಆರೋಗ್ಯಕ್ಕೆ ಹಾನಿ ಉಂಟು ಮಾಡುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ. ಹೀಗಾಗಿ ಶೀಘ್ರದಲ್ಲೆ ಕೇಕ್ ಗೆ ಬಳಸುವ ಕ್ಯಾನ್ಸರ್ ಕಾರಕ ಅಂಶಗಳು ಬ್ಯಾನ್ ಮಾಡಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಿರ್ಧರಿಸಿದೆ ಎನ್ನಲಾಗಿದೆ.

ಏಕೆಂದರೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಆತಂಕಕಾರಿ ಅಂಶ ಹೊರಬಿದ್ದಿದೆ. ರುಚಿ ಎನಿಸುವ ಕೇಕ್ ತಿನ್ನುವ ಮುನ್ನ ಎಚ್ಚರಿಕೆ ವಹಿಸಬೇಕಿದು 12 ಮಾದರಿಗಳಲ್ಲಿ ಅಲೂನಾ ರೆಡ್, ಸನ್ ಸೆಟ್ ಯೆಲ್ಲೋ, ಪೊನುಸೆಯಾ 4R , ಕಾರ್ಮಿಯೋಸೆನ್ ಎಂಬ ಅಂಶ ಪತ್ತೆಯಾಗಿದೆ. ಈ ಕೃತಕ ಬಣ್ಣಗಳಿಂದ ಆರೋಗ್ಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ.ಹೀಗಾಗಿ ರೆಡ್ ವೆಲ್ವೆಟ್ ಹಾಗೂ ಬ್ಲಾಕ್ ಫಾರೆಸ್ಟ್ ಕೇಕ್​ಗೆ ಬಣ್ಣ ಬಳಕೆಗೆ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular