ಬೆಂಗಳೂರು : ಯೆಮೆನ್‌ಲ್ಲಿ ಮರಣದಂಡನೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ರಕ್ಷಿಸಲು ರಾಜತಾಂತ್ರಿಕ ಮಾರ್ಗಗಳನ್ನು ಬಳಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಬೆಂಗಳೂರಿನ ವಕೀಲ ಹುಸೇನ್ ಉವೈಸ್ ರಾಷ್ಟçಪತಿಗಳಿಗೆ ಪತ್ರ ಬರೆದಿದ್ದಾರೆ.
ನಿಮಿಷಾ ಅವರನ್ನು ಜುಲೈ ೧೬ರಂದು ಗಲ್ಲಿಗೇರಿಸಲು ನಿರ್ಧರಿಸಲಾಗಿದೆ ಎಂದು ಅಲ್ಲಿನ ಜೈಲು ಅಧಿಕಾರಿಗಳು ತಿಳಿಸಿದ್ದಾರೆ.ಆದರೆ, ಯೆಮನ್‌ನ ಶರಿಯತ್ ಕಾನೂನಿನ ಪ್ರಕಾರ ಮೃತರ ಸಂಬAಧಿಕರು ಕ್ಷಮೆ ನೀಡಲು ಒಪ್ಪಿಕೊಂಡರೆ ಅಪರಾಧಿ ಶಿಕ್ಷೆಯಿಂದ ಪಾರಾಗುತ್ತಾರೆ. ಹೀಗಾಗಿ, ನಿಮಿಷಾ ಪ್ರಿಯಾ ಅವರನ್ನು ರಕ್ಷಿಸಲು ರಾಜತಾಂತ್ರಿಕ ಮಾರ್ಗಗಳನ್ನು ಬಳಸುವಂತೆ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಅವರು ಕೋರಿದ್ದಾರೆ.
2017ರ ಜುಲೈನಲ್ಲಿ ಯೆಮನ್ ಪ್ರಜೆ ತಲಾಲ್ ಅಬ್ದೋ ಮಹದಿ ಎಂಬಾತನನ್ನು ಹತ್ಯೆಗೈದ ಪ್ರಕರಣದಲ್ಲಿ ಕೇರಳದ ಪಾಲಕ್ಕಾಡ್ ಜಿಲ್ಲೆಯವರಾದ ನಿಮಿಷಾ ಪ್ರಿಯಾ ಮರಣದಂಡನೆಗೆ ಗುರಿಯಾಗಿದ್ದಾರೆ. 2017ರಿಂದ ನಿಮಿಷ ಅವರು ಯೆಮನ್‌ನ ರಾಜಧಾನಿ ಸನಾದ ಜೈಲಿನಲ್ಲಿದ್ದಾರೆ.
ನಿಮಿಷಾ ಪ್ರಿಯಾ ಅವರಿಗೆ ಕಾನೂನು ನೆರವು ನೀಡುವ ‘ಸೇವ್ ನಿಮಿಷ ಪ್ರಿಯಾ – ಇಂಟರ್‌ನ್ಯಾಷನಲ್ ಆಕ್ಷನ್ ಕೌನ್ಸಿಲ್’ ಎಂಬ ಸಂಸ್ಥೆ ಈ ಅರ್ಜಿಯನ್ನು ಸಲ್ಲಿಸಿದೆ.