Saturday, March 14, 2026
Flats for sale
Homeರಾಜ್ಯಬೆಂಗಳೂರು : ಕೋಟ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ ಉಪಚುನಾವಣೆಗೆ ಡೇಟ್ ಫಿಕ್ಸ್...

ಬೆಂಗಳೂರು : ಕೋಟ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ ಉಪಚುನಾವಣೆಗೆ ಡೇಟ್ ಫಿಕ್ಸ್ .!

ಬೆಂಗಳೂರು : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳನ್ನು ಒಳಗೊಂಡಿರುವ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಲಿರುವ ವಿಧಾನ ಪರಿಷತ್‌ ಉಪ ಚುನಾವಣೆಗೆ ಚುನಾವಣಾ ಆಯೋಗ ಇಂದು ದಿನಾಂಕ ಘೋಷಿಸಿದೆ. ಕೋಟ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ ಉಪಚುನಾವಣೆಗೆ ಡೇಟ್ ಫಿಕ್ಸ್ ಆಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕೆ ಕಸರತ್ತು ನಡೆಯುತ್ತಿದ್ದು ಅಕ್ಟೋಬರ್‌ 21 ರಂದು ಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್‌ 26ರಿಂದಲೇ ಅಧಿಸೂಚನೆ ಜಾರಿಗೆ ಬರಲಿದೆ.

ಸೆಪ್ಟೆಂಬರ್ 26ರಿಂದ ಅಧಿಸೂಚನೆ ಜಾರಿಯಾಗಲಿದೆ. ಅಕ್ಟೋಬರ್ 3ರಂದು ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದೆ. ಅಕ್ಟೋಬರ್ 4ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 7 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಅಕ್ಟೋಬರ್ 21ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ.ಉಪಚುನಾವಣೆಯ ಮತದಾನ ಅಕ್ಟೋಬರ್ 21ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದ್ದು, ಅಕ್ಟೋಬರ್ 24ರಂದು ಮತಎಣಿಕೆ ಕಾರ್ಯ ನಡೆಯಲಿದೆ. ಗ್ರಾಮ ಪಂಚಾಯತ್‌, ತಾಲೂಕು ಪಂಚಾಯತ್‌, ಜಿಲ್ಲಾ ಪಂಚಾಯತ್‌ಗಳಿಂದ ಆಯ್ಕೆಯಾಗಿರುವ ಜನಪ್ರತಿನಿಧಿಗಳು ಈ ಚುನಾವಣೆಯಲ್ಲಿ ಹಕ್ಕು ಚಲಾಯಿಸಬಹುದಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular