Thursday, July 23, 2026
Homeರಾಜಕೀಯಬೆಂಗಳೂರು ; ಕೋವಿಡ್ ನಿಯಮ ಉಲ್ಲಂಘನೆ, ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಗೆ ಜಾಮೀನು ರಹಿತ...

ಬೆಂಗಳೂರು ; ಕೋವಿಡ್ ನಿಯಮ ಉಲ್ಲಂಘನೆ, ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಗೆ ಜಾಮೀನು ರಹಿತ ವಾರೆಂಟ್ ಜಾರಿ.

ಬೆಂಗಳೂರು ; ಬಿಜೆಪಿ ಸರ್ಕಾರದ ಅವಧಿಯಲ್ಲಿ, ಕಾಂಗ್ರೆಸ್ ಪಕ್ಷದಿಂದ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪಾದಯಾತ್ರೆಯನ್ನು ನಡೆಸಲಾಗಿತ್ತು. ಕೋವಿಡ್ ಸಂದರ್ಭದಲ್ಲಿಯೇ ಪಾದಯಾತ್ರೆ ಮಾಡಿದ್ದಂತ ಕಾಂಗ್ರೆಸ್ ನಾಯಕರ ವಿರುದ್ಧ ವಿವಿಧ ಠಾಣೆಗಳಲ್ಲಿ ದೂರು ದಾಖಲಾಗಿತ್ತು.

ಮೇಕೆದಾಟು ಪಾದಯಾತ್ರೆ ವೇಳೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಕೋರ್ಟ್ ಗೆ ನಿರಂತರವಾಗಿ ಗೈರಾಗಿದ್ದರ ಹಿನ್ನಲೆಯಲ್ಲಿ, ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಲಾಗಿದೆ.

ಈ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಅವರು ಹಾಜರಾಗದೇ ನಿರಂತರವಾಗಿ ಗೈರಾಗಿದ್ದರು. ಪೊಲೀಸರ ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಬಳಿಕ ಕೋರ್ಟ್ ನಿಂದ ಸಮನ್ಸ್ ಜಾರಿಯಾಗಿತ್ತು. ಆದರೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೋರ್ಟ್ ವಿಚಾರಣೆ ಹಾಜರಾಗಿರಲಿಲ್ಲ.

ಈ ಹಿನ್ನಲೆಯಲ್ಲಿ ರಾಮಲಿಂಗಾರೆಡ್ಡಿ ವಿರುದ್ಧ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರಾದಂತ ಜೆ.ಪ್ರೀತಂ ಅವರು ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿ ಆದೇಶಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular