ಬೆಂಗಳೂರು ; ಖಾಸಗಿ ಬ್ಯಾಂಕ್ ಸಿಬ್ಬಂದಿಗಳ ಕಿರುಕುಳಕ್ಕೆ ಒಳಗಾಗಿ ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದ 3ನೇ ಹಂತದಲ್ಲಿ ನಡೆದಿದೆ.
ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡವರನ್ನು ತಾಯಿ ಸುಕನ್ಯಾ (48), ಮಕ್ಕಳಾದ ನಿಖಿತ್, ನಿಶಿತ್ (28) ಎಂದು ತಿಳಿದುಬಂದಿದೆ .
ಇತ್ತೀಚೆಗೆ ಫ್ಯಾಕ್ಟರಿ ಲಾಸ್ ಆಗಿ ಕ್ಲೋಸ್ ಮಾಡಿದ್ದು . ಬ್ಯುಸಿನೆಸ್ ಲಾಸ್ ಆದಮೇಲೆ ಸಾಕಷ್ಟು ತೊಂದರೆಯಾಗಿತ್ತು. ಫ್ಯಾಕ್ಟರಿ ಲಾಸ್ ಹಿನ್ನೆಲೆ ಈ ಕುಟುಂಬವು ಸಾಕಷ್ಟು ಸಾಲ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ . ಪತ್ನಿ ಸುಕನ್ಯ ಮನೆಯಲ್ಲಿ ಮಕ್ಕಳಿಗೆ ಟ್ಯೂಷನ್ ತೆಗೆದುಕೊಳ್ಳುತ್ತಿದ್ದರಂತೆ. ಆಕೆಯ ಪತಿ ಜಯಾನಂದ್ ಅವರು ಬ್ಯುಸಿನೆಸ್ ಲಾಸ್ ಆಗಿ ಅನಾರೋಗ್ಯಕ್ಕೆ ತುತ್ತಾಗಿ ಮನೆಯಲ್ಲಿದ್ದರಂತೆ. ಇಬ್ಬರು ಮಕ್ಕಳಲ್ಲಿ ನಿಶ್ಚಿತ್ ಎಂಬಾತ ಹ್ಯಾಂಡಿಕಾಪ್ಟ್ ಆಗಿದ್ದನಂತೆ. ಮನೆಯಿಂದಲೇ ವರ್ಕ್ ಫ್ರಮ್ ಹೋಂ ಮಾಡಿ ದುಡಿಯುತ್ತಿದ್ದ ಎಂದು ತಿಳಿದಿದೆ.
ಉಡುಪಿ ಮೂಲದ ಅಂಬಲಪಾಡಿ ನಿವಾಸಿಗಳಾಗಿರುವ ಕುಟುಂಬ, ಜೆಪಿ ನಗರದಲ್ಲಿ ವಾಸವಾಗಿದ್ದು ನಿನ್ನೆ ಸಂಜೆ ಮನೆಯಲ್ಲಿ ಪತಿ ಇಲ್ಲದ ಸಮಯದಲ್ಲಿ ಮನೆಗೆ ಬಂದ ಬ್ಯಾಂಕ್ ಸಿಬ್ಬಂದಿಗಳು ಸಾಲ ವಾಪಾಸ್ ಕೇಳಿದ್ದರಂತೆ. ಖಾಸಗಿ ಬ್ಯಾಂಕ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಸ್ಥಳೀಯರು ಸಂಬಂಧಿಕರಿಂದ ಮಾಹಿತಿ ಪಡೆಯುತ್ತಿದ್ದು ಘಟನಾ ಸ್ಥಳಕ್ಕೆ ಜೆ.ಪಿ.ನಗರ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸುತ್ತಿದ್ದಾರೆ .


