Friday, March 13, 2026
Flats for sale
Homeರಾಜ್ಯಬೆಂಗಳೂರು : ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ: ಆಕ್ರೋಶಗೊಂಡ ವಿಪಕ್ಷ ,ಮುದ್ರಣ ದೋಷ ಎಂದು...

ಬೆಂಗಳೂರು : ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ: ಆಕ್ರೋಶಗೊಂಡ ವಿಪಕ್ಷ ,ಮುದ್ರಣ ದೋಷ ಎಂದು ಕೈತೊಳೆದುಕೊಂಡ ತಂಗಡಗಿ.

ಬೆಂಗಳೂರು : ರಾಜ್ಯದ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬ ಸರ್ಕಾರದ ಸುತ್ತೋಲೆ ವಿವಾದಕ್ಕೆ ಕಾರಣವಾಗಿದೆ. ಈ ವಿವಾದ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊAಡ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸುವ ಭರವಸೆಯ ಜತೆಗೆ ಆದೇಶದಲ್ಲಿ ಲೋಪವೆಸಗಿರುವ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ತಿಳಿಸಿದೆ.

ಸದನದ ಒಳಗೆ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಈ ಬಗ್ಗೆ ಸ್ಪಷ್ಟನೆ ನೀಡಿದರೆ, ಸದನದ ಹೊರಗೆ ಮುದ್ರಣ ಲೋಪದೋಷದಿಂದ ಆಗಿರುವ ತಪ್ಪನ್ನು ಸರಿಪಡಿಸಿ ಮತ್ತೊಮ್ಮೆ ಸುತ್ತೋಲೆ ಹೊರಡಿಸುವುದಾಗಿ ಸ್ಪಷ್ಟಪಡಿಸಿದರು.

ರಾಜ್ಯದ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಕಳೆದ ಫೆಬ್ರವರಿ ೧೬ ರಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಇದು ವಿವಾದಕ್ಕೆ ಕಾರಣವಾಗಿ ಸರ್ಕಾರದ ಆದೇಶದ ವಿರುದ್ಧ ವಿಪಕ್ಷಗಳು ಆಕ್ರೋಶ ಹೊರ ಹಾಕಿವೆ.

ರಾಷ್ಟ್ರಕವಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿ ಕುವೆಂಪುರವರ ಜಯಭಾರತ ಜನನಿಯ ತನುಜಾತೆ ಕವಿತೆಯನ್ನು ನಾಡಗೀತೆಯಾಗಿ ಸರ್ಕಾರಿ ಇಲಾಖೆಗಳು, ನಿಗಮ ಮಂಡಳಿ,ಪ್ರಾಧಿಕಾರಗಳು ಆಯೋಜಿಸುವ ಕಾರ್ಯಕ್ರಮದಲ್ಲೂ ಆರಂಭದಲ್ಲಿ ಹಾಡುವುದನ್ನು ಕಡ್ಡಾಯ ಮಾಡಲಾಗಿತ್ತು. ಆದರೆ ಸರ್ಕಾರದ ವಿವಾದಿತ ಸುತ್ತೋಲೆಯಲ್ಲಿ ಖಾಸಗಿ ಶಾಲೆಗಳು ಎಂಬ ಉಲ್ಲೇಖ ಇರದೆ ಸರ್ಕಾರಿ ಶಾಲೆಗಳು ಮತ್ತು ಖಾಸಗಿ ಶಾಲೆಗಳು ಎಂದು ಉಲ್ಲೇಖಿಸಲಾಗಿತ್ತು. ಇದರಿಂದ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬ ಅರ್ಥ ಬಂದಿತ್ತು. ಈ ಆದೇಶದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯ ಮಾಡಬೇಕು ಎಂಬ ಒತ್ತಾಯವೂ ಕೇಳಿ ಬಂದಿತ್ತು.

ಸರ್ಕಾರದ ಈ ಸುತ್ತೋಲೆಯ ವಿರುದ್ಧ ಬಿಜೆಪಿ ಟೀಕೆ ಮಾಡಿದ್ದು, ವಿಪಕ್ಷ ನಾಯಕ ಆರ್. ಅಶೋಕ್ ನಾಡಗೀತೆಯನ್ನು ಈ ಶಾಲೆಗಳಲ್ಲಿ ಹಾಡುವುದು ಕಡ್ಡಾಯವಲ್ಲ ಎಂಬ ಆದೇಶ ಹೊರಡಿಸುವ ಮೂಲಕ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮತ್ತೊಮ್ಮೆ ತನ್ನ ಕನ್ನಡ ವಿರೋಧಿ ಧೋರಣೆ ತೋರಿದೆ ಎಂದು ಟ್ವೀಟ್ ಮಾಡಿದ್ದಾರೆ.

ಎರಡು ದಿನದ ಹಿಂದಷ್ಟೇ ಕುವೆಂಬಪು ರವರ ಜ್ಞಾನದೇಗುಲವಿದುಮುಗಿದು ಒಳ ಬನ್ನಿ ಎಂಬ ಘೋಷವಾಕ್ಯವನ್ನು ಬದಲಿಸುವ ಹುನ್ನಾರ ಬಯಲಾದ ಬೆನ್ನಲ್ಲೆ ಈಗ ನಾಡಗೀತೆ ಕಡ್ಡಾಯವಲ್ಲ ಎನ್ನುವ ಮೂಲಕ ಮತ್ತೊಮ್ಮೆ ರಾಷ್ಟ್ರಕವಿ ಕುವೆಂಪು ರವರಿಗೆ ಮತ್ತು ಕನ್ನಡಾಂಬೆಗೆ ಅಪಮಾನ ಎಸಗಿದ್ದಾರೆ ಎಂದು ಟೀಕಿಸಿದ್ದಾರೆ. ಅಶ್ವತ್ಥನಾರಾಯಣ್ ಟೀಕೆ ರಾಜ್ಯ ಸರ್ಕಾರ ಅಧಿಕಾರಿಗಳ ಸರ್ಕಾರವಾಗಿದೆ. ಅಧಿಕಾರಿಗಳು ಮನಬಂದAತೆ ತೀರ್ಮಾನ ಮಾಡುತ್ತಿದ್ದಾರೆ. ಕನ್ನಡದ ಅಸ್ಮಿತೆ ಎನಿಸಿರುವ ನಾಡಗೀತೆಯನ್ನು ಖಾಸಗಿ ಶಾಲೆಗಳಲ್ಲಿ ಹಾಡುವಂತಿಲ್ಲ ಎಂಬ ಸರ್ಕಾರದ ಸುತ್ತೋಲೆ ಸರಿಯಲ್ಲಎಂದು ಮಾಜಿ ಸಚಿವ ಡಾ. ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರ ರಾಷ್ಟçಕವಿ ಕುವೆಂಪುರವರಿಗೆ ಅವಮಾನ ಮಾಡುತ್ತಿದೆ. ಈ ಹಿಂದೆ ಜ್ಞಾನದೇಗುಲ ವಿಚಾರದಲ್ಲೂ ಇಂತಹದ್ದೇ ತೀರ್ಮಾನ ಮಾಡಲಾಗಿತ್ತು. ಈಗ ನಾಡಗೀತೆ ವಿಚಾರದಲ್ಲೂ ತಪ್ಪು
ಮಾಡಿದ್ದಾರೆ. ಈ ರೀತಿಯ ತಪ್ಪು ಮಾಡಿರುವ ಅಧಿಕಾರಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular