ಬೆಂಗಳೂರು : ಜನರಿಗೆ ಉಚಿತಯೋಜನೆಗಳನ್ನು ನೀಡಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಅಧಿಕಾರದ ಲ್ಲಿರುವ ಹಿಮಾ ಚಲ ಪ್ರದೇ ಶದಲ್ಲಿ ಇದೀಗ ವಿದ್ಯುತ್ ಸಬ್ಸಿ ಡಿ ವಾಪಸ್ ಅಭಿಯಾನ ಆರಂಭ ‘ವಾಗಿದೆ. ಮುಖ್ಯಮಂತ್ರಿ ಸುಖೀಂದರ್ ಸಿಂಗ್ ಸುಖು ಅವರು ತಮ್ಮ ಹೆಸರಿನಲ್ಲಿ ನೋಂದಣಿಯಾಗಿದ್ದ ವಿದ್ಯುತ್ ಸಬ್ಸಿಡಿ ವಾಪಸ್ ನೀಡಿದ್ದಾರೆ. ಅಲ್ಲದೇ ಇತರೆ ಅರ್ಹರಿಗೂ ಸಬ್ಸಿಡಿ ಯೋಜನೆಯಿಂದ ಹಿಂದೆ ಸರಿಯುವಂತೆ ಕರೆ ನೀಡಿದ್ದಾರೆ.
ಸುಖು ಅವರು ತಮ್ಮ ಹೆಸರಿನಲ್ಲಿ ನೋಂದಣಿಯಾಗಿದ್ದ 5 ವಿದ್ಯುತ್ ಸಂಪರ್ಕಗಳಿಗೆ ಸಿಗುತ್ತಿದ್ದ ಸಬ್ಸಿಡಿಯನ್ನುಹಿಂದಿರುಗಿಸಿದ್ದು, ಬಹುವಿದ್ಯುತ್ ಸಂಪರ್ಕವನ್ನು ಹೊಂದಿರುವ ಜನರು, ರಾಜ್ಯದ ಅಭಿವೃದ್ಧಿ ದೃಷ್ಟಿ ಯಿಂದ ಸಬ್ಸಿಡಿಯನ್ನು ವಾಪಸ್ ನೀಡು ವಂತೆ ಕೋರಿದ್ದಾರೆ. ಈಬಗ್ಗೆ ಪ್ರತಿಕಾಗೋಷ್ಠಿಯಲ್ಲಿಮಾತ ನಾಡಿದ ಅವರು, ‘ಸರ್ಕಾರ ವಿದ್ಯುತ್ ಸಬ್ಸಿಡಿಗಾಗಿ ವಾರ್ಷಿಕ 2,200 ಕೋಟಿ ರು. ಖರ್ಚು ಮಾಡುತ್ತದೆ. ವಿದ್ಯುತ್
ಇಲಾಖೆಯ ನೌಕರರ ಸಂಬಳ ಮತ್ತು ಪಿಂಚಣಿಗಾಗಿ ತಿಂಗಳಿಗೆ 200 ಕೋಟಿ ರು. ಖರ್ಚು ಮಾಡುತ್ತಿದೆ. ಸಬ್ಸಿಡಿ ಅಗತ್ಯ ಇರುವವರಿಗೆ ಮೀಸಲು. ಅನು ಕೂಲಸ್ಥರು ರಾಜ್ಯದ ಅಭಿವೃದ್ಧಿಕಾರಣಕ್ಕೆ ವಾಪಸ್ ನೀಡಬೇಕು’ ಎಂದಿದ್ದಾರೆ.
ಆರ್ಥಿಕಸಂಕಷ್ಟದಲ್ಲಿರುವಹಿಮಾಚಲ ಪ್ರದೇಶ ಸರ್ಕಾರ ಪರಿಸ್ಥಿತಿಯನ್ನು ನಿಭಾಯಿಸಲು ಈಗಾಗಲೇ ರಾಜ್ಯದಲ್ಲಿ ಹಲವು ವೆಚ್ಚಗಳಿಗೆ ಕಡಿವಾಣ ಹಾಕಿತ್ತು. ಸಿಎಂ, ಪಕ್ಷದ ಶಾಸಕರು, ಉನ್ನತ ಅಧಿಕಾ ರಿಗಳ ವೇತನ ಪಾವತಿಯಲ್ಲಿ ವಿಳಂಬ ವಾಗಿತ್ತು. ಅಲ್ಲದೇ ಕೆಲ ಸರ್ಕಾರಿ ಹೋಟೆಲ್ ಗಳನ್ನು ಕೂಡ ಮಾರಾಟ ಮಾಡಲಾ ಗಿತ್ತು. ಅನರ್ಹ ಶಾಸಕರಿಗೆ ಪಿಂಚಣಿ ನಿಲ್ಲಿಸುವ ನಿರ್ಧಾರ ಪ್ರಕಟಿಸಿತ್ತು. ಉದ್ಯಮ, ಹೋಟೆಲ್‌ಗಳಿಗೆ ನೀಡುವ ವಿದ್ಯುತ್ ಸಬ್ಸಿಡಿಕಡಿತ ಮಾಡಲಾಗಿತ್ತು.
ಹಿಮಾಚಲ ವಿದ್ಯುತ್ ಸಬ್ಸಿಡಿ ವಾಪಸ್ ಸಂಪನ್ಮೂಲವನ್ನು ಆಧರಿಸಿ ಸಮತೋಲನ ಕಾಯ್ದುಕೊಳ್ಳುವಲ್ಲಿ ವಿಫಲರಾಗಿ ತಾವು ನೀಡುವ ಪೊಳ್ಳು ಭರವಸೆಗಳಿಗೆ ಹಣ ಒದಗಿಸಲಾಗದೆ ಯೋಜನೆಗಳು ಹೇಗೆ ವೈಫಲ್ಯ ಸಾಧಿಸುತ್ತವೆ ಎಂಬುದಕ್ಕೆ ಕಾಂಗ್ರೆಸ್ ಆಡಳಿತದ ಹಿಮಾಚಲ ಸರ್ಕಾರ ಸಾಕ್ಷಿ ಒದಗಿಸಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಕರ್ನಾಟಕದಲ್ಲೂ ಸಹ ಪಂಚ ಗ್ಯಾರಂಟಿಗಳನ್ನು ನಿರ್ವಹಿಸುವಲ್ಲಿ ಗೊಂದಲಗಳನ್ನು ಸೃಷ್ಠಿಸಿಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆಯಲ್ಲಿ ಈಗಾಗಲೇ ನಷ್ಟವನ್ನು ಅನುಭವಿಸಿದ್ದು, ಸಾರಿಗೆ ಇಲಾಖೆಯ 4 ನಿಗಮಗಳಿಗೆ ಬಡ್ಡಿ ರಹಿತವಾಗಿ 2 ಸಾವಿರ ಕೋಟಿ ರೂ. ಸಾಲ ನೀಡಲು ಮುಂದಾಗಿದೆ. ಗೃಹಜ್ಯೋತಿ ಯೋಜನೆಯ ನಷ್ಟವನ್ನು ಸರಿದೂಗಿಸಲು ವಾಣಿಜ್ಯ ಹಾಗೂ ಉತ್ಪಾದಕ ವಲಯದ ಮೇಲೆ ವಿದ್ಯುತ್
ದರ ಹೆಚ್ಚಿಸಿರುವುದರ ಪರಿಣಾಮ ಜನಸಾಮಾನ್ಯರು ಪರೋಕ್ಷವಾಗಿ ಇದರ ಬಿಸಿ ಅನುಭವಿಸುವಂತಾಗಿದೆ ಎAದು ಅವರು ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಹಣ ಹೊಂದಿಸಲಾಗದೆ ಚುನಾವಣಾ ಸಂದರ್ಭದಲ್ಲಿ ಮಾತ್ರ ಉಳಿಸಿಕೊಂಡಿರುವ ಬಾಕಿ ಕಂತುಗಳನ್ನು ಪಾವತಿಸಿ ಯೋಜನೆಯನ್ನು ಮತ ಬ್ಯಾಂಕ್ ಸೃಷ್ಠಿಸಿಕೊಳ್ಳಲು ಮಾತ್ರ ಬಳಸಿಕೊಳ್ಳಲಾಗುತ್ತಿದೆ ಎಂದು ದೂರಿರುವ ಅವರು. ಯುವನಿಧಿ ಯೋಜನೆ ಯುವಜನರ ಪಾಲಿಗೆ ಗಗನಕುಸುಮವಾಗಿಯೇ ಉಳಿದಿದೆ ಎಂದು ಟೀಕಿಸಿದ್ದಾರೆ.
ಸಮಾಜದ ಹಾಗೂ ನಾಡನ್ನು ಕಟ್ಟುವ ಮಾನವ ಸಂಪನ್ಮೂಲದ ಪ್ರಮುಖ ಭಾಗವಾಗಿರುವ ರೈತಾಪಿ ವರ್ಗ, ಶ್ರಮಿಕರು, ಯುವಜನರು, ವಿದ್ಯಾರ್ಥಿಗಳು ಹಾಗೂ ಮಹಿಳೆಯರ ಭವಿಷ್ಯಕ್ಕಾಗಿ ಯಾವುದೇ ಯೋಜನೆ ರೂಪಿಸದೇ ರಾಜ್ಯದ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಶೂನ್ಯ ಆಡಳಿತ ನೀಡುವ ಮೂಲಕ ತನ್ನ ಖಜಾನೆ ಬರಿದು ಮಾಡಿಕೊಂಡಿದೆ. ಇದು ನಾಡಿನ ಜನರಿಗೆ ತಿಳಿಯದ ವಿಷಯವೇನಲ್ಲ. ಇದರ ಪರಿಣಾಮವನ್ನು ತೆರಿಗೆದಾರರು ನಿತ್ಯ ಅನುಭವಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.