ಬೆಂಗಳೂರು : ಮಾಜಿ ಮುಖ್ಯಮಂತ್ರಿ ,ರೇಲ್ವೆ ಸಚಿವರಾದ ಸದಾನಂದಗೌಡ ರವರು ಚುನಾವಣಾ ರಾಜಕೀಯಕ್ಕೆ ಗುಡ್ಬೈ ಹೇಳಿದ್ದಾರೆ. ಕಳೆದ 10 ವರ್ಷಗಳಿಂದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿರುವ ಡಿ.ವಿ. ಅವರು 2 ಬಾರಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಜಿ ಸಿಎಂ ಡಿ.ವಿ ಸದಾನಂದಗೌಡ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಮಿಸ್ ಆಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಕರೆ ಮಾಡಿ ಡಿವಿಎಸ್ ಜೊತೆ ಮಾತುಕತೆ ನಡೆಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಘೋಷಣೆಗೂ ಮುನ್ನ ಡಿ.ವಿ ಸದಾನಂದಗೌಡರ ಟೆಕೆಟ್ ಇಲ್ಲ ಅನ್ನೋದನ್ನ ಖುದ್ದು ಅವರೇ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು ಸಂಸದರಾಗಿ ಆಯ್ಕೆ ಮಾಡಿದ ಮತದಾರರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಪ್ರೀತಿಯ ಬಂಧುಗಳೇ, ನನಗೆ ಕಳೆದ ಹತ್ತು ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸ ಮಾಡುವ ಅವಕಾಶವನ್ನು ಮಾಡಿಕೊಟ್ಟು ಆಶೀರ್ವಾದವನ್ನು ಮಾಡಿದ್ದೀರಿ. ನಾನು ನನ್ನ ಶಕ್ತಿಮೀರಿ ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ. ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜೊತೆಯಲ್ಲಿ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ನಿಮ್ಮ ಜೊತೆಗೆ ಇನ್ನು ಮುಂದೆಯೂ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು . ಇಂತಿ ನಿಮ್ಮವನೇ ಆದ ಡಿ.ವಿ. ಸದಾನಂದ ಗೌಡ’ ಎಂದು ಹಂಚಿಕೊಂಡಿದ್ದಾರೆ.