ಬೆಂಗಳೂರು : ಕೇಂದ್ರ ಸರ್ಕಾರವು ಸೆ.22 ರಿಂದ ಜಾರಿಗೆ ಬರುವಂತೆ ಜಿಎಸ್‌ಟಿಯನ್ನು ಪರಿಷ್ಕರಣೆ ಮಾಡಿದ್ದು, ಇದ ರಿಂದಾಗಿ ಕೆಎಂಎಫ್ ಹಾಲಿನ ಉತ್ಪನ್ನಗಳ ಮೇಲಿನ ಜಿಎಸ್‌ಟಿಯನ್ನು ಶೇ.18ರಿಂದ ಶೇ.5 ಕ್ಕೆ ಇಳಿಯಲಿದೆ. ಹೀಗಾಗಿ ನಂದಿನಿಯ ಕೆಲ ಉತ್ಪನ್ನಗಳು ಅಗ್ಗವಾಗಲಿದೆ.
ಮೊಸರು, ತುಪ್ಪ, ಬೆಣ್ಣೆ, ಲಸ್ಸಿ ಸೇರಿದಂತೆ ವಿವಿಧ ಉತ್ಪನ್ನಗಳು ಅಗ್ಗವಾಗಲಿದೆ. ಮೊಸರು ಲೀಟರ್‌ಗೆ 4 ರೂ. ವರೆಗೆ ಕಡಿಮೆಯಾಗುವ ನಿರೀಕ್ಷೆ ಇದೆ. ಶನಿವಾರ ಇಳಿಕೆ ಪ್ರಮಾಣವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ಸೋಮವಾರದಿಂದಲೇ ಪರಿಷ್ಕೃತ ದರ ಜಾರಿಗೊಳಿಸುವಂತೆ ಮಾರಾಟಗಾರರಿಗೆ ಸೂಚಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.


