Friday, November 22, 2024
Flats for sale
Homeಕ್ರೀಡೆಬೆಂಗಳೂರು : ಜಿದ್ದಾಜಿದ್ದಿನ ಪಂದ್ಯದಲ್ಲಿ ಕೊನೆಗೂ ಟಿ20 ವಿಶ್ವಕಪ್ ನ್ನು ಗೆದ್ದುಬೀಗಿದ ಭಾರತ,ಮೈದಾನದಲ್ಲಿ ಆಟಗಾರರ ಕಣ್ಣೀರು,...

ಬೆಂಗಳೂರು : ಜಿದ್ದಾಜಿದ್ದಿನ ಪಂದ್ಯದಲ್ಲಿ ಕೊನೆಗೂ ಟಿ20 ವಿಶ್ವಕಪ್ ನ್ನು ಗೆದ್ದುಬೀಗಿದ ಭಾರತ,ಮೈದಾನದಲ್ಲಿ ಆಟಗಾರರ ಕಣ್ಣೀರು, T20I ಕ್ರಿಕೆಟ್​ಗೆ ವಿರಾಟ್ ಕೊಹ್ಲಿ – ರೋಹಿತ್ ಶರ್ಮಾ ವಿದಾಯ.

ಬೆಂಗಳೂರು : ವೆಸ್ಟ್​ಇಂಡೀಸ್​ನ ಬಾರ್ಬಡೋಸ್​ನಲ್ಲಿ ಜೂನ್ 29 ರಂದು ನಡೆದ ಐಸಿಸಿ ಪುರುಷರ ವಿಶ್ವಕಪ್ 2024 ರ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಏಡೆನ್ ಮಾರ್ಕ್ರಮ್ ನೇತೃತ್ವದ ದಕ್ಷಿಣ ಆಫ್ರಿಕಾವನ್ನು ಏಳು ರನ್​ಗಳಿಂದ ಸೋಲಿಸಿ ಚಾಂಪಿಯನ್ ಆಯಿತು. ಇದರೊಂದಿಗೆ ಭಾರತವು 13 ವರ್ಷಗಳ ವಿಶ್ವ ಕಪ್ ಹಾಗೂ 17 ವರ್ಷಗಳ ಟಿ20 ವಿಶ್ವ ಕಪ್​ ಕೊರತೆಯನ್ನು ನೀಗಿಸಿತು. ಅಂದ ಹಾಗೆ ಭಾರತ ತಂಡ ಈ ಬಾರಿಯ ಟ್ರೋಫಿಯನ್ನು ಅಜೇಯವಾಗಿ ಗೆದ್ದಿದೆ. ಟೂರ್ನಿಯುದ್ದಕ್ಕೂ ಪಂದ್ಯಾವಳಿಯುದ್ದಕ್ಕೂ ಎಲ್ಲಾ ಪಂದ್ಯಗಳನ್ನು ಗೆದ್ದು ಟ್ರೋಫಿ ಗೆದ್ದ ಮೊದಲ ತಂಡ ಎಂಬ ಇತಿಹಾಸ ಬರೆದಿದೆ.

ಬಾರ್ಬಡೋಸ್‌ನಲ್ಲಿ ನಡೆದ ಫೈನಲ್‌ನಲ್ಲಿ ಟೀಂ ಇಂಡಿಯಾ ರೋಚಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್‌ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಭಾರತ ತನ್ನ 11 ವರ್ಷಗಳ ಐಸಿಸಿ ಟ್ರೋಫಿಯ ಬರವನ್ನು ಕೊನೆಗೊಳಿಸಿತು. ಭಾರತ ಈ ಹಿಂದೆ 2013ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದಿತ್ತು. ಅದೇ ಸಮಯದಲ್ಲಿ ಭಾರತ 17 ವರ್ಷಗಳ ನಂತರ ಟಿ20 ವಿಶ್ವಕಪ್ ಗೆದ್ದ ಸಾಧನೆ ಮಾಡಿದೆ. ಆದರೆ ಗೆಲುವಿನ ಖುಷಿಯಲ್ಲಿ ಟೀಂ ಇಂಡಿಯಾಕ್ಕೆ ಆಘಾತ ಎದುರಾಗಿದೆ. ತಂಡದ ಮಾಜಿ ನಾಯಕ, ರನ್ ಮಷಿನ್ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ಕೊಹ್ಲಿ, ತಮ್ಮ ನಿವೃತ್ತಿಯ ಬಗ್ಗೆ ಅಧಿಕೃತ ಘೋಷಣೆ ಮಾಡಿದರು.

ಟಿ20 ವಿಶ್ವಕಪ್​ ಗೆದ್ದ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದರೊಂದಿಗೆ ಭಾರತದ ಇಬ್ಬರು ದಿಗ್ಗಜರ ಟಿ20ಐ ಕೆರಿಯರ್ ಅಂತ್ಯವಾದಂತಾಗಿದೆ.ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಈ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಕಿಂಗ್ ಕೊಹ್ಲಿ ಇದುವೇ ನನ್ನ ಕೊನೆಯ ಟಿ20 ವಿಶ್ವಕಪ್ ಟೂರ್ನಿ. ಈ ಗೆಲುವಿನೊಂದಿಗೆ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಲು ಬಯಸಿದ್ದೇನೆ ಎಂದು ತಿಳಿಸಿದರು.

ಇದು ಕೊಹ್ಲಿಯ ಕೊನೆಯ ಪಂದ್ಯವಾಗಿದ್ದರೂ ಸಹ, ಅವರು ಟೀಂ ಇಂಡಿಯಾಕ್ಕಾಗಿ ಅನೇಕ ದಾಖಲೆಗಳೊಂದಿಗೆ ತಮ್ಮ ಟಿ20 ಅಂತರರಾಷ್ಟ್ರೀಯ ವೃತ್ತಿಜೀವನವನ್ನು ಕೊನೆಗೊಳಿಸಿದರು. ಕೊಹ್ಲಿ 12 ಜೂನ್ 2010 ರಂದು ಟೀಂ ಇಂಡಿಯಾ ಪರ ಚೊಚ್ಚಲ ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನು ಆಡಿದ್ದರು. ಇದೀಗ ಬರೋಬ್ಬರಿ 14 ವರ್ಷಗಳ ನಂತರ ತಮ್ಮ ಕೊನೆಯ ಪಂದ್ಯವನ್ನು ಆಡಿದ ಕೊಹ್ಲಿ ಇದುವರೆಗೆ 125 ಟಿ20 ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಅವರು 48.69 ರ ಸರಾಸರಿಯಲ್ಲಿ 4188 ರನ್ ಕಲೆಹಾಕಿದ್ದಾರೆ. ಕೊಹ್ಲಿ ತಮ್ಮ ಟಿ20 ವೃತ್ತಿಜೀವನದಲ್ಲಿ 1 ಶತಕ ಮತ್ತು 38 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಇಷ್ಟೇ ಅಲ್ಲ, ಟಿ20 ವಿಶ್ವಕಪ್ ಇತಿಹಾಸದಲ್ಲೇ ಗರಿಷ್ಠ 1292 ರನ್ ಗಳಿಸುವ ಮೂಲಕ ಕೊಹ್ಲಿ ತಮ್ಮ ಪ್ರಯಾಣವನ್ನು ಅಂತ್ಯಗೊಳಿಸಿದ್ದಾರೆ. ಅವರ ಹೆಸರಿನಲ್ಲಿ ಗರಿಷ್ಠ 15 ಅರ್ಧ ಶತಕಗಳು ದಾಖಲಾಗಿವೆ.

ಭಾರತ-ದಕ್ಷಿಣ ಆಫ್ರಿಕಾ ಫೈನಲ್ ಪಂದ್ಯ ಹೀಗಿತ್ತು
ಮೊದಲು ಬ್ಯಾಟಿಂಗ್ ಮಾಡಿದ ಭಾರತ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿ ದಕ್ಷಿಣ ಆಫ್ರಿಕಾಕ್ಕೆ 177 ರನ್ ಗಳ ಗುರಿ ನೀಡಿತು. ಇದು ಟಿ20 ವಿಶ್ವಕಪ್ ಫೈನಲ್ನಲ್ಲಿ ದಾಖಲಾದ ಗರಿಷ್ಠ ಮೊತ್ತವಾಗಿದೆ. ಭಾರತದ ಪರ ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ 76 ರನ್ ಗಳಿಸಿದರು, ಇದು ಟಿ 20 ವಿಶ್ವಕಪ್ ಫೈನಲ್​​​ನಲ್ಲಿ ಗರಿಷ್ಠ ಆಟಗಾರರೊಬ್ಬರ ವೈಯಕ್ತಿಕ ಸ್ಕೋರ್ ಆಗಿದೆ.

177 ರನ್​ಗಳ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು. ಭಾರತದ ಪರ ಹಾರ್ದಿಕ್ ಪಾಂಡ್ಯ 3, ಜಸ್ಪ್ರೀತ್ ಬುಮ್ರಾ ಹಾಗೂ ಅರ್ಷ್ದೀಪ್ ಸಿಂಗ್ ತಲಾ 2, ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು.

15 ವಿಕೆಟ್ ಕಬಳಿಸಿದ ಜಸ್ಪ್ರೀತ್ ಬುಮ್ರಾ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. 2024 ರ ಟಿ 20 ವಿಶ್ವಕಪ್​​ನಲ್ಲಿ ಬೌಲಿಂಗ್ ಎಕಾನಮಿ 4.17 ಆಗಿತ್ತು/ ಇದು ಟಿ 20 ವಿಶ್ವಕಪ್ ಪಂದ್ಯಾವಳಿಗಳಲ್ಲಿ ಇದುವರೆಗಿನ ಅತ್ಯುತ್ತಮ ಸಾಧನೆಯಅಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular