Tuesday, March 17, 2026
Flats for sale
Homeರಾಜ್ಯಬೆಂಗಳೂರು : ಜೂ.1ಕ್ಕೆ 5 ವರ್ಷ 5 ತಿಂಗಳು ಪೂರ್ಣಗೊಂಡಿರುವ ಮಕ್ಕಳನ್ನು 1ನೇ ತರಗತಿ ದಾಖಲಾತಿಗೆ...

ಬೆಂಗಳೂರು : ಜೂ.1ಕ್ಕೆ 5 ವರ್ಷ 5 ತಿಂಗಳು ಪೂರ್ಣಗೊಂಡಿರುವ ಮಕ್ಕಳನ್ನು 1ನೇ ತರಗತಿ ದಾಖಲಾತಿಗೆ ಸರಕಾರ ಆದೇಶ..!

ಬೆಂಗಳೂರು : ಕರ್ನಾಟಕ ಸರ್ಕಾರ ಮಕ್ಕಳನ್ನು ಪ್ರಾಥಮಿಕ ಶಾಲೆಯ 1ನೇ ತರಗತಿಗೆ ದಾಖಲಾತಿ ಮಾಡಲು 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಸಡಿಲಿಕೆ ಮಾಡಿದ್ದು, ಪೂರ್ವ ಪ್ರಾಥಮಿಕ ಶಿಕ್ಷಣ ಪೂರ್ಣ ಗೊಳಿಸಿರುವ ಹಾಗೂ ಜೂ.1ಕ್ಕೆ 5 ವರ್ಷ 5 ತಿಂಗಳು ಪೂರ್ಣಗೊಂಡಿರುವ ಮಕ್ಕಳನ್ನು 2025-26ನೇ ಶೈಕ್ಷಣಿಕ ವರ್ಷಕ್ಕೆ ಮಾತ್ರ ಸೀಮಿತಗೊಳಿಸಿ ಒಂದನೇ ತರಗತಿಗೆ ದಾಖಲು ಮಾಡಿಕೊಳ್ಳಲು ಆದೇಶಿಸಲಾಗಿದೆ.

ಈ ಕುರಿತ ನಿಯಮವನ್ನು ಎಲ್ಲಾ ಶಾಲೆಗಳಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಸಂಬAಧಿಸಿದ ಅಧಿಕಾರಿಗಳಿಗೆ ಹಾಗೂ ಶಾಲಾ ಮುಖ್ಯಸ್ಥರಿಗೆ ತಿಳಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಸುತ್ತೋಲೆ ಹೊರಡಿಸಿದೆ. ಪೋಷಕರ ಒತ್ತಾಯದ ಅನ್ವಯ ಈ ಶೈಕ್ಷಣಿಕ ವರ್ಷಕ್ಕೆ ಮಾತ್ರ ವಯೋಮಿತಿಯನ್ನು ಪರಿಷ್ಕರಣೆ ಮಾಡಲಾಗಿದ್ದು, ಶಾಲೆಗಳಿಗೆ ನಿರ್ದೇಶನಗಳನ್ನು ನೀಡಲಾಗಿದೆ. ಈ ವಿಷಯಾನಯವಾಗಿ ರಾಜ್ಯ ನೀತಿ ಆಯೋಗದ ಶಿಫಾರಸು/ಅಭಿಪ್ರಾಯವನ್ನು ಪರಿಗಣಿಸಿ ಸರ್ಕಾರದ ಆದೇಶದನ್ವಯ ಶೈಕ್ಷಣಿಕ ವರ್ಷದ ಜೂ.೧ಕ್ಕೆ ೬ ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ರುವುದಕ್ಕೆ ಒಂದು ಬಾರಿಯ ಕ್ರಮವಾಗಿ ಸಡಿಲಿಕೆಯನ್ನು ನೀಡಲಾಗಿದೆ.

ಈಗಾಗಲೇ ಎಲ್.ಕೆ.ಜಿ ಪ್ರವೇಶಾತಿಗೆ 4 ವರ್ಷ ಮತ್ತು ಯುಕೆಜಿ ಪ್ರವೇಶಾತಿಗೆ 5 ವರ್ಷಗಳ ಕನಿಷ್ಠ ವಯೋಮಿತಿ ನಿಗದಿಪಡಿಸಲಾಗಿರುತ್ತದೆ. ಅದರಂತೆ 2025-26ನೇ ಶೈಕ್ಷಣಿಕ ವರ್ಷದಿಂದ ಎಲ್.ಕೆ.ಜಿ. ಅಥವಾ ತತ್ಸಮಾನ ದಾಖಲಾತಿಗೆ 4 ವರ್ಷ ಪೂರ್ಣಗೊಂಡಿರುವ ಮತ್ತು ಯು.ಕೆ.ಜಿ ಅಥವಾ ತತ್ಸಮಾನ ದಾಖಲಾತಿಗೆ 5 ವರ್ಷ ಪೂರ್ಣಗೊಂಡಿರುವ ಮಕ್ಕಳನ್ನು ಮಾತ್ರ ದಾಖಲಿಸಿಕೊಳ್ಳತಕ್ಕದ್ದು ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular