ಬೆಂಗಳೂರು : ಹಿರಿಯ ರಾಜಕಾರಣಿ,ಜೆಡಿಎಸ್ ವರಿಷ್ಠ ಅನಾರೋಗ್ಯದ ಕಾರಣ ಮಾಜಿ ಪಿಎಂ ಎಚ್. ಡಿ ದೇವೇಗೌಡ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದೇವೇಗೌಡರಿಗೆ ಇಂದು ಬೆಳಿಗ್ಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡೊ ಹೋಗಲಾಗಿದೆ. ಅಲ್ಲಿನ ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ದಾಖಲಿಸಿಕೊಂಡು ನಿಗಾವಹಿಸಿದ್ದಾರೆ.ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು ಯಾವುದೇ ಪ್ರಾಣಾಪಾಯವಿಲ್ಲವೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
90 ವರ್ಷ ಪ್ರಾಯದ ದೇವೇಗೌಡರು ಲೋಕಸಭೆ ಚುನಾವಣೆಯ ಹಿನ್ನೆಲೆ ಸಕ್ರಿಯ ರಾಜಕಾರಣದಲ್ಲಿದ್ದು, ಸದ್ಯ ಅವರು ಹಲವು ಸಭೆಗಳನ್ನು ನಡೆಸುತ್ತಿದ್ದಾರೆ. ಈ ಇಳಿವಯಸ್ಸಿನಲ್ಲೂ ಸಹ ಅವರು ಅಧಿವೇಶನದಲ್ಲಿ ಭಾಗವಹಿಸಲು ಬೆಂಗಳೂರು ಟು ದೆಹಲಿ ಹಾಗೂ ಲೋಕಸಭಾ ಚುನಾವಣೆ ಸಂಬಂಧ ಬೆಂಗಳೂರಿನಿಂದ ಹಾಸನಕ್ಕೆ ಹೋಗಿದ್ದರು.ಸದ್ಯ ದೇವೇಗೌಡರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯ ಇಲ್ಲ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.