Saturday, November 23, 2024
Flats for sale
Homeರಾಜ್ಯಬೆಂಗಳೂರು : ಜೈಲಿನಲ್ಲಿ ರೇವಣ್ಣನ ಫಸ್ಟ್ ನೈಟ್ ಹೇಗಿತ್ತು .!

ಬೆಂಗಳೂರು : ಜೈಲಿನಲ್ಲಿ ರೇವಣ್ಣನ ಫಸ್ಟ್ ನೈಟ್ ಹೇಗಿತ್ತು .!

ಬೆಂಗಳೂರು : ಮಾಡಿದುಣ್ಣು ಮಾರಾಯ ಅನ್ನೋದು ಗಾದೆ ಸುಳ್ಳಲ್ಲ .ಅದರಂತೆಯೇ ರಾಜಕೀಯದಲ್ಲಿ ಯಾರ್ಯಾರು ಆಟ ಆಡ್ತಾರೋ ಅವರೆಲ್ಲಾ ಅನುಭವಿಸುದಂತೂ ನಿಜವಾದ ವಿಚಾರ .

ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ನಿನ್ನೆ ರಾತ್ರಿ ಎಲ್ಲ ಕೈದಿಗಳಂತೆ ಜೈಲಿನ ಊಟ ಸೇವಿಸಿದ್ದ ರೇವಣ್ಣ ನಿದ್ರಿಸದೆ ಮೌನಕ್ಕೆ ಶರಣಾಗಿದ್ದಾರೆ.

ಜೈಲಿಗೆ ಬರುವ ಎಲ್ಲಾ ಆರೋಪಿಗಳಿಗೆ ಎಂಟ್ರಿ ನಂಬರ್ ನೀಡಲಾಗುತ್ತದೆ. ಅದರಂತೆಯೇ ರೇವಣ್ಣಗೆ ವಿಚಾರಣಾಧೀನ ಬಂಧಿ 4567 ನಂಬರ್ ನೀಡಲಾಗಿದೆ. ಜೈಲಿನಲ್ಲಿ ಎಲ್ಲ ಕೈದಿಗಳಿಗೆ ನೀಡುವ ಊಟ ಸವಿಯಬೇಕಾದ ಪರಿಸ್ಥಿತಿ ಅವರದ್ದಾಗಿದೆ.

ಜೈಲಿನ ಮೆನುವಿನಂತೆಯೇ ಅಧಿಕಾರಿಗಳು ರಾತ್ರಿ ಚಪಾತಿ, ಪಲ್ಯ, ಮುದ್ದೆ, ಅನ್ನ, ಸಾಂಬಾರ್ ಊಟ ನೀಡಿದ್ದಾರೆ. ಕೋರ್ಟ್ ಅನುಮತಿ ಇದ್ದರೆ ಮಾತ್ರ ಹೊರಗಿನ ಊಟ ತರಿಸಲು ಅವಕಾಶವಿದೆ. ಆದರೆ ರೇವಣ್ಣಗೆ ಹೊರಗಿನ ಊಟಕ್ಕೆ ಯಾವುದೇ ಅನುಮತಿ ಇಲ್ಲ. ಆದರೆ ರಾತ್ರಿ ಊಟ ನೀಡಿ ಒಂದು ಗಂಟೆ ಕಳೆದರೂ ಊಟ ಮಾಡದೆ ರೇವಣ್ಣ ಮೌನಕ್ಕೆ ಜಾರಿದ್ದಾರೆ ಎಂದು ತಿಳಿದುಬಂದಿದೆ.

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ ಸಚಿವರಾಗಿ ಇಡೀ ಆಡಳಿತ ವ್ಯವಸ್ಥೆಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದ ರೇವಣ್ಣ ಐಷಾರಾಮಿ ಜೀವನ ನಡೆಸಿದವರು,ಆದರೆ ನಿನ್ನೆ ರಾತ್ರಿಯನ್ನು ಸಾಮಾನ್ಯ ಕೈದಿಗಳಂತೆ ಜೈಲಿನಲ್ಲಿ ಕಳೆದಿದ್ದು, ರಾತ್ರಿ ನೀಡಿದ್ದ ಮುದ್ದೆ, ಚಪಾತಿ, ರೈಸ್ ಸಾಂಬಾರ್ ತಡವಾಗಿ ತಿಂದಿದ್ದಾರೆ.

ಮನೆಯವರು ತಂದು ಕೊಟ್ಟಿರುವ ಬಟ್ಟೆ ಪಡೆದಿದ್ದಾರೆ. ರಾತ್ರಿ ಒಂದು ಗAಟೆಯವರೆಗೂ ನಿದ್ರೆ ಮಾಡದೆ ಯೋಚಿಸುತ್ತಿದ್ದರು ಎನ್ನಲಾಗಿದೆ. ರೇವಣ್ಣ ಆರೋಗ್ಯ ಸರಿ ಇಲ್ಲದ ಕಾರಣ ಜೈಲಾಧಿಕಾರಿಗಳು ಹೆಚ್ಚು ನಿಗಾ ಇಟ್ಟಿದ್ದಾರೆ. ರೇವಣ್ಣ ಇರುವ ಕೊಠಡಿ ಬಳಿ ಒಬ್ಬ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇಂದು ಬೆಳಿಗ್ಗೆ ೫.೩೦ಕ್ಕೆ ನಿದ್ರೆಯಿಂದ ಎದ್ದ ರೇವಣ್ಣ ಅವರಿಗೆ ಕಾಫಿಟೀ ನೀಡಲಾಗಿದೆ. ಕೈದಿಗಳಿಗೆ ಟಿವಿ ವ್ಯವಸ್ಥೆ ಇಲ್ಲ. ಹೊರಗಿನ ಸುದ್ದಿ ತಿಳಿಯಲು ನ್ಯೂಸ್ ಪೇಪರ್ ವ್ಯವಸ್ಥೆ ಮಾಡಲಾಗಿದೆ. ರೇವಣ್ಣಗೆ ಓದಲು ಕನ್ನಡ-ಇಂಗ್ಲೀಷ್ ಪೇಪರ್ ನೀಡಲಾಗಿದೆ. ಪೇಪರ್ ಕಡೆ ಕಣ್ಣಾಡಿಸಿ ನಿನ್ನೆಯ ವಿದ್ಯಮಾನಗಳನ್ನು ರೇವಣ್ಣ ಓದಿದ್ದಾರೆ. ಜೈಲಿನ ಮೆನುವಿನಂತೆ ರೇವಣ್ಣಗೆ ಇಂದು ಬೆಳಗ್ಗಿನ ತಿಂಡಿಗೆ ಪುಳಿಯೋಗರೆ ನೀಡಲಾಗಿದೆ.

ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿ14 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ

RELATED ARTICLES

LEAVE A REPLY

Please enter your comment!
Please enter your name here

Most Popular