ಬೆಂಗಳೂರು : ಆಂಧ್ರಪ್ರದೇಶದ ತಿರುಮಲದಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ಭಕ್ತರಿಗೆ ಅರ್ಪಿಸುವ ಹೆಸರಾಂತ ತಿರುಪತಿ ಲಡ್ಡುಗಳಲ್ಲಿ ‘ದನದ ದನ’, ‘ಹಂದಿಯ ಹಂದಿ’ ಮತ್ತು ‘ಮೀನಿನ ಎಣ್ಣೆ’ ಇರುವುದು ಪತ್ತೆ ಹಿನ್ನೆಲೆ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ತಯಾರಾಗುವ ವಿವಿಧ ಕಂಪನಿಯ ತುಪ್ಪವನ್ನು ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಿದೆ. ಇಲ್ಲಿ ತಯಾರಾಗುವ ಮತ್ತು ಮಾರಾಟ ಮಾಡುತ್ತಿರುವ ವಿವಿಧ ಕಂಪನಿಯ ತುಪ್ಪಗಳನ್ನು ಪರೀಕ್ಷೆ ನಡೆಸುವಂತೆ ಸಚಿವ ದಿನೇಶ್ ಗುಂಡೂರಾವ್ ರಾಜ್ಯ ಆಹಾರ ಸುರಕ್ಷಿತ ಹಾಗೂ ಗುಣಮಟ್ಟ ಇಲಾಖೆಗೆ ಆದೇಶಿಸಿದ್ದಾರೆ.
ದೇವಸ್ಥಾನಗಳಲ್ಲಿ ತುಪ್ಪದಿಂದ ತಯಾರಾಗುವ ಪ್ರಸಾದಗಳ ಮಾದರಿಯನ್ನೂ ಆಹಾರ ಇಲಾಖೆ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲು ತಯಾರಿ ನಡೆಸಿದೆ. ರಾಜ್ಯದ ದೇವಸ್ಥಾನಗಳಲ್ಲಿ ತುಪ್ಪದಿಂದ ತಯಾರಾಗುವ ಪ್ರಸಾದಗಳ ಮಾದರಿಯನ್ನೂ ಆಹಾರ ಇಲಾಖೆ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲು ತಯಾರಿ ನಡೆಸಿದೆ.ಸಚಿವರ ಆದೇಶ ಬೆನ್ನಲ್ಲೇ ವಿವಿಧ ಕಂಪನಿಗಳ ತುಪ್ಪದ ಮಾದರಿಗಳನ್ನು ಅಧಿಕಾರಿಗಳು ಸಂಗ್ರಹಿಸಿದ್ದು ವಿವಿಧ ಕಂಪನಿಗಳ ತುಪ್ಪದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲು ತಯಾರಿನಡೆಸುತ್ತಿದ್ದಾರೆ.
ಇದೀಗ ಕಡಿಮೆ ಬೆಲೆಯ ತುಪ್ಪ ಬಳಸಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೂ ದಕ್ಕೆ ಉಂಟಾಗಿದ್ದು ಮಾಜಿ ಮುಖ್ಯಮಂತ್ರಿ ಜಗಮೋಹನ್ ರೆಡ್ಡಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಎಚ್ಚೆತ್ತಿರುವ ಟಿಟಿಡಿ ಈಗ ಮತ್ತೆ ಕರ್ನಾಟಕ ಹಾಲು ಒಕ್ಕೂಟ ಕೆಎಂಎಫ್ ನೊಂದಿಗೆ ಒಪ್ಪಂದ ಮಾಡಿಕೊಂಡು ಪ್ರತಿ ತಿಂಗಳು 4000 ಟನ್ ತುಪ್ಪ ಕಳಿಸುವಂತೆ ಒಪ್ಪಂದ ಮಾಡಿಕೊಂಡಿದ್ದು ಕರ್ನಾಟಕದಿಂದ ಕಳಿಸುವ ತುಪ್ಪದ ಶೇ30ರಷ್ಟು ತುಪ್ಪವನ್ನೂ ಕೋಲಾರ ಹಾಲು ಒಕ್ಕೂಟದಿಂದಲೇ ಕಳಿಸಲು ಸೂಚಿಸಿದೆ ಒಟ್ಟಿನಲ್ಲಿ ಧಾರ್ಮಿಕ ದತ್ತಿ ಇಲಾಖೆಯಲ್ಲಿ ಇತರ ಧರ್ಮದವರಿಗೆ ಅಧಿಕಾರ ನೀಡಿದರೆ ಇಂತಹ ಘಟನೆ ಸಂಭವಿಸುವುದು ಸಹಜವೆಂದು ಭಕ್ತಾದಿಗಳು ಚಕಾರವೆತ್ತಿದ್ದಾರೆ.


