ಬೆಂಗಳೂರು : ದೇವರ ವಿಗ್ರಹ ವಿರೂಪಗೊಳಿಸಿದ ಆರೋಪದ ಮೇಲೆ ಬಾಂಗ್ಲಾದೇಶ ಮೂಲದ ವ್ಯಕ್ತಿಯನ್ನು ಮಾರತ್ತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಬೀರ್ ಮೊಂಡಲ್(32) ಬಂಧಿತ. ಆರೋಪಿ ಮಂಗಳವಾರ ಮಧ್ಯಾಹ್ನ ಸುಮಾರು 3 ಗಂಟೆಗೆ ದೇವರಬೀಸನಹಳ್ಳಿಯ ವೇಣುಗೋಪಾಲಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿರುವ ದ್ವಾರಪಾಲಕ ವಿಗ್ರಹಗಳನ್ನು ಕಲ್ಲು ಮತ್ತು ಕಬ್ಬಿಣದ ವಸ್ತುವಿನಿಂದ ಹೊಡೆದು ವಿರೂಪಗೊಳಿಸಿದ್ದ. ಈ ವೇಳೆ ಸ್ಥಳೀಯರು ಆರೋಪಿಯನ್ನು ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಸಂಬAಧ ಸ್ಥಳೀಯರು ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುವ ಪೊಲೀಸರು ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ದೇವಸ್ಥಾನಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಆರೋಪಿ ಕಬೀರ್ ಮೊಂಡಲ್ 2 ವರ್ಷಗಳ ಹಿಂದೆ ಪಶ್ಚಿಮ ಬಂಗಾಳ ಮಾರ್ಗವಾಗಿ ಬೆಂಗಳೂರು ಬಂದು ಕೂಲಿ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದಾನೆ. ಮದ್ಯದ ಅಮಲ್ಲಿನ ದೇವಸ್ಥಾನ ಮುಂಭಾಗದ ವಿಗ್ರಹಗಳನ್ನು ವಿರೂಪಗೊಳಿಸಿದ್ದಾನೆ ಎಂದು ತಿಳಿದು ಬಂದಿದೆ. ಈ ಸಂಬAಧ ಮಾರತ್ತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.


