Sunday, March 8, 2026
Flats for sale
Homeರಾಜ್ಯಬೆಂಗಳೂರು : ದೇವಸ್ಥಾನದ ಪ್ರಸಾದ ಸೇವಿಸಿ ಮಹಿಳೆ ಸಾವು,70 ಮಂದಿ ಅಸ್ವಸ್ಥ.

ಬೆಂಗಳೂರು : ದೇವಸ್ಥಾನದ ಪ್ರಸಾದ ಸೇವಿಸಿ ಮಹಿಳೆ ಸಾವು,70 ಮಂದಿ ಅಸ್ವಸ್ಥ.

ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಹೊಸಕೋಟೆಯಲ್ಲಿ ದೇವಸ್ಥಾನದ ಪ್ರಸಾದ ಸೇವಿಸಿ 70 ಜನರು ಅಸ್ವಸ್ಥರಾಗಿದ್ದು ಹಾಗೂ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ನಡೆದಿದೆ.

ಹೊಸಕೋಟೆಯ ಕಾವೇರಿನಗರ ನಿವಾಸಿ ಸಿದ್ದಗಂಗಮ್ಮ (60) ಮೃತದುರ್ದೈವಿ.ಹನುಮ ಜಯಂತಿ ಹಿನ್ನೆಲೆಯಲ್ಲಿ ಹೊಸಕೋಟೆಯ ವೆಂಕಟರಮಣಸ್ವಾಮಿ, ಊರುಬಾಗಿಲು ಆಂಜನೇಯ, ಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಭಕ್ತರು ಪುಲಿಯೋಗರೆ, ಪಾಯಸ,ಲಡ್ಡು ಸೇವಿಸಿದ್ದರು.ಸಿದ್ದಗಂಗಮ್ಮ ಅವರಿಗೆ ಪತಿ ಶಿವಣ್ಣ ಲಾಡು ಪ್ರಸಾದ ತಂದುಕೊಂಟಿದ್ದಾರೆ. ಈ ಪ್ರಸಾದವನ್ನು ತಿಂದ ಸಿದ್ದಗಂಗಮ್ಮ ಅವರು ಬೆಳಿಗ್ಗೆ ವಾಂತಿ ಭೇದಿಯಿಂದ ಬಳಲುತ್ತಿದ್ದರು. ಕೂಡಲೆ ಅವರನ್ನು ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಿದ್ದಗಂಗಮ್ಮ ಮೃತಪಟ್ಟಿದ್ದಾರೆ.

ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇನ್ನೂ 15 ಮಂದಿಯಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.ಆಸ್ಪತ್ರೆಗೆ ದಾಖಲಾದವರಲ್ಲಿ ಕೆಲವರು ಡಿಸ್ಚಾರ್ಜ್ ಆಗಿದ್ದು, ಇನ್ನು ಕೆಲವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.

ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ 30 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀನಿವಾಸ ನರ್ಸಿಂಗ್ ಹೋಮ್​ನಲ್ಲಿ 21 ಜನರಿಗೆ, ಹೊಸಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ 7 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೂ 70ಕ್ಕೂ ಹೆಚ್ಚು ಜನ ಚಿಕಿತ್ಸೆ ಪಡೆದು ವಾಪಸ್​ ಆಗಿದ್ದಾರೆ. ಸಿಲಿಕಾನ್ ಸಿಟಿ ಆಸ್ಪತ್ರೆಗೆ ಹೆಚ್ಚುವರಿ ಎಸ್​ಪಿ ಪುರುಷೋತ್ತಮ್ ಭೇಟಿ ನೀಡಿದ್ದಾರೆ. ಪ್ರಕರಣದ ತನಿಖೆ ಆರಂಭಿಕ ಹಂತದಲ್ಲಿರುವುದರಿಂದ, ಸದ್ಯಕ್ಕೆ ನಿಖರವಾದ ಕಾರಣವನ್ನು ಕಂಡುಹಿಡಿಯಲಾಗುವುದಿಲ್ಲ, ಶನಿವಾರ ಬಹುತೇಕರು ಹೊಸಕೋಟೆ ಪಟ್ಟಣದ ದೇವಸ್ಥಾನಕ್ಕೆ ತೆರಳಿ ಪ್ರಸಾದ ಸೇವಿಸಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular