ಬೆಂಗಳೂರು : ದೇಶದಲ್ಲಿ ನರೇಂದ್ರ ಮೋದಿ ಸರಕಾರ ಬಂದಾಗಿನಿಂದ ಉಗ್ರರ ಉಪಟಳ ಕಡಿಮೆಯಾಗಿದ್ದು ಇದೀಗ ಚುನಾವಣೆಯ ಸಮಯದಲ್ಲೇ ವಿಧ್ವಂಸಕ ಕೃತ್ಯ ನಡೆಸಲು ತಯಾರಿಯಲ್ಲಿದ್ದಾರೆಂದು ಮಾಹಿತಿ ಬಯಲಾಗಿದೆ. ವೈಟ್‌ಫೀಲ್ಡ್ನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟದ ಬಾಂಬರ್ ಸೇರಿ ಬಂಧಿತ ಇಬ್ಬರು ಶಂಕಿತ ಉಗ್ರರು ರಾಜ್ಯವಲ್ಲದೇ ದೇಶದ ಹಲವೆಡೆ ಭೀಕರ ಸ್ಫೋಟಕಗಳನ್ನು ನಡೆಸಲು ತಯಾರಿ ನಡೆಸಿದ್ಧ ಆತಂಕಕಾರಿ ಸಂಗತಿ ನ್ನು ಬಾಯ್ಬಿಟ್ಟಿದ್ದಾರೆ.
ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಇನ್ನೂ ಹಲವು ರಾಜ್ಯಗಳಲ್ಲಿ ಮತ್ತಷ್ಟು ಬಾಂಬ್ ಸ್ಫೋಟಿಸುವ ಯೋಜನೆಯನ್ನು ಬಂಧಿತ ಶಂಕಿತ ಉಗ್ರರು ರೂಪಿಸಿ ಬಾಂಬ್ ತಯಾರಿಕೆ ಬಗ್ಗೆ ತರಬೇತಿ, ತಪ್ಪಿಸಿಕೊಳ್ಳುವ ಕಲೆ, ಪ್ರಯಾಣದ ಮ್ಯಾಪ್ ಮೊದಲೇ ಸಿದ್ಧ ಮಾಡಿಕೊಂಡಿರುವುದನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಅಧಿಕಾರಿಗಳ ವಿಚಾರಣೆ ತಿಳಿಸಿದ್ದಾರೆ
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿ ರಾಜ್ಯದಿಂದ ರಾಜ್ಯಕ್ಕೆ ಪರಾರಿಯಾಗುತ್ತಾ 43 ದಿನಗಳ ಕಾಲ ತಲೆ ತಲೆಮರೆಸಿಕೊಂಡು ನಿನ್ನೆ ಮುಂಜಾನೆ ಸಿಕ್ಕಿಬಿದ್ದಿರುವ ಶಂಕಿತ ಉಗ್ರರಾದ ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್ ಅಹಮದ್ ತಾಹಾ ಹಲವೆಡೆ ಸ್ಫೋಟಕ್ಕೆ ಸಂಚು ಮಾಡಿರುವುದನ್ನು ಬಾಯ್ಬಿಟ್ಟಿದ್ದಾರೆ.
ಶಂಕಿತ ಉಗ್ರರು ಬಾಂಬ್ ತಯಾರಿಸಿದ ಸ್ಥಳ ಯಾವುದು, ಸಹಾಯ ಮಾಡಿದವರು ಯಾರು, ರಾಮೇಶ್ವರಂ ಕೆಫೆಯನ್ನೇ ಯಾಕೆ ಆಯ್ಕೆ ಮಾಡಿಕೊಳ್ಳಲಾಗಿತ್ತು, ಇನ್ನಷ್ಟು ಸ್ಫೋಟಗಳನ್ನು ಎಲ್ಲಿ ಮಾಡಲು ಉದ್ದೇಶಿಸಲಾಗಿತ್ತು, ಎಷ್ಟು ತೀವ್ರತೆಯ ಸ್ಫೋಟಕ ಎನ್ನುವುದರ ಕುರಿತು ಎನ್‌ಐಎ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ನಕಲಿ ಆಧಾರ್ ಕಾರ್ಡ್ ಬಳಕೆದಾರರ ಸಂಖ್ಯೆ ಹೆಚ್ಚಿದೆ. ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರು ಹೆಚ್ಚಾಗಿ ನಕಲಿ ಆಧಾರ್ ಕಾರ್ಡ್ ಬಳಸುತ್ತಿದ್ದು, ಇದು ವ್ಯಾಪಕವಾಗಿದೆ. ಹೀಗಾಗಿ ಇವರು ಇದೇ ಭಾಗಗಳಲ್ಲಿ ಇರಬಹುದು ಎನ್ನುವ ಶಂಕೆ ಇತ್ತು. ಇದೇ ಶಂಕೆಯ ಆಧಾರದಲ್ಲಿ ಎನ್‌ಐಎ ಕಾರ್ಯಾಚರಣೆ ಮುಂದುವರಸಿತ್ತು.
ಕಳೆದ 12 ದಿನಗಳಿಂದ ಕೋಲ್ಕತ್ತಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು, ಅಲ್ಲೂ ಒಂದೇ ಕಡೆ ಇರದೆ ಲಾಡ್ಜ್ ಗಳನ್ನೂ ಬದಲಿಸುತ್ತಿದ್ದರು. ಕೋಲ್ಕತ್ತಾದ ಮಿಧಿನಾಪುರದ ಹಲವು ಲಾಡ್ಜ್ಗಳಲ್ಲಿ ತಂಗಿದ್ದ ಆರೋಪಿಗಳು ಪ್ರತಿ ಎರಡು ಮೂರು ದಿನಗಳಿಗೊಮ್ಮೆ ವಾಸ್ತವ್ಯ ಬದಲಿಸುತ್ತಿದ್ದರು. ಎರಡು ದಿನಗಳ ಹಿಂದೆಯಷ್ಟೆ ಮಿಡ್ನಾಪುರ ದೀಘಾ ಬಳಿ ಲಾಡ್ಜ್ ಬದಲಾಯಿಸಿದ್ದ ಆರೋಪಿಗಳು ಕೋಲ್ಕತ್ತಾದ ಹೊಟೇಲ್ ಪ್ಯಾರಡೈಸ್, ಲೇನಿನ್ ಸೇರಾನಿ
ಸೇರಿ ಹಲವು ಹೊಟೇಲ್‌ಗಳಲ್ಲಿ ತಂಗಿದ್ದರು.
ಸಂಜಯ್ ಅಗರವಾಲ್, ಉದಯ್ ದಾಸ್, ಯಶು ಪಟೇಲ್, ವಿಘ್ನೇಶ ಹೀಗೆ ನಾನಾ ನಕಲಿ ಹೆಸರುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಮುಸಾವೀರ್ ಹುಸೇನ್ ಮಹಾರಾಷ್ಟದ ಪಾಲ್ಘಾರ್ ಜಿಲ್ಲೆಯ ನಕಲಿ ಆಧಾರ್ ಕಾರ್ಡ್ ನೀಡಿದ್ದ. ಕರ್ನಾಟಕದ ವಿಘ್ನೇಶ್ ಹಾಗೂ ಅಮೋಲ್ ಕುಲಕರ್ಣಿ ಹೆಸರಿನಲ್ಲಿ ಮತೀನ್ ತಾಹ ನಕಲಿ ದಾಖಲಾತಿ ನೀಡಿದ್ದ. ಹೊಟೇಲ್ ಸಿಬ್ಬಂದಿ ಬಳಿ ತಮ್ಮ ಹೆಸರುಗಳು ಸಂಜಯ್ ಅಗರ್‌ವಾಲ್ ಹಾಗು ಉದಯ್ ದಾಸ್ ಎಂದು, ತಾವು ಜಾರ್ಖಂಡ್ ಹಾಗು ತ್ರಿಪುರಾ ಮೂಲದವರು ಎಂದು ಹೇಳಿಕೊAಡಿದ್ದರು.
ರಾಮೇಶ್ವರಂ ಕೆಫೆ ಬಾಂಬ್ ತಯಾರಿಸಿದ್ದು ಅಬ್ದುಲ್ ಮತೀನ್ ತಾಹಾ ಎಂಬುದು ಗೊತ್ತಾಗಿದೆ. ಎಂಜಿನಿಯರಿAಗ್ ಪದವೀಧರನಾಗಿದ್ದ ಅಬ್ದುಲ್ ತಾಹಾ, ಬಾಂಬ್ ತಯಾರಿಕೆ ಮಾಹಿತಿ ಹೊಂದಿದ್ದ. ಈತ ಇತರರಿಗೂ ಈ ವಿಷಯದಲ್ಲಿ ತರಬೇತಿ ನೀಡುತ್ತಿದ್ದ. ತಾಹಾ ತಯಾರಿ ಮಾಡಿಕೊಟ್ಟ ಬಾಂಬನ್ನೇ ರಾಮೇಶ್ವರಂ ಕೆಫೆಯಲ್ಲಿ ಮುಸಾವೀರ್ ಇಟ್ಟಿದ್ದ ಎಂದು ಗೊತ್ತಾಗಿದೆ.
ಬಾಂಬ್ ಇಟ್ಟ ಮುಸಾವೀರ್ ಹುಸೇನ್ ಶಾಜೀಬ್ ತೀರ್ಥಹಳ್ಳಿಯ ಮಧ್ಯಮವರ್ಗದ ಕುಟುಂಬವನಾಗಿದ್ದಾನೆ ತೀರ್ಥಹಳ್ಳಿಯಲ್ಲಿ ತಾಯಿ ಮಾತ್ರ ವಾಸವಾಗಿದ್ದು, ಮನೆ ಬಾಡಿಗೆಯೇ ಮುಸಾವೀರ್ ಕುಟುಂಬಕ್ಕೆ ಆಧಾರವಾಗಿದೆ. ಈತ ಸಾಂಪ್ರದಾಯಿಕ ಉದ್ದನೆಯ ಬಿಳಿ ನಿಲುವಂಗಿಯಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ. ಈತ ಸ್ಥಳೀಯರ ಜೊತೆ ಹೆಚ್ಚು ಬೆರೆಯುತ್ತಿರಲಿಲ್ಲ. ಸ್ಥಳೀಯರಿಗೆ ಹೆಚ್ಚು ಪರಿಚಯವಿಲ್ಲದ ಈತ ತನ್ನ ಸಮುದಾಯದವರು ಇರುವ ಒಂದೆರಡು ಸ್ಥಳಗಳಲ್ಲಿ ಮಾತ್ರ ಓಡಾಡುತ್ತಿದ್ದ.
ತಾಹಾ ಮಾಸ್ಟರ್ ಮೈಂಡ್ : ಕೆಫೆ ಬ್ಲಾಸ್ಟ್ ಮಾಸ್ಟರ್ ಮೈಂಡ್ ಆಗಿರುವ ಅಬ್ದುಲ್ ಮತೀನ್ ತಾಹಾನ ತಂದೆ ದೇಶಕ್ಕಾಗಿ ಹೋರಾಡಿದ ಯೋಧರಾಗಿದ್ದವರು. ವರ್ಷದ ಹಿಂದೆ ಅವರು ಮೃತಪಟ್ಟಿದ್ದಾರೆ. ತಾಹ ಅತ್ಯಂತ ಚುರುಕಾದ ಎಂಜಿನಿಯರಿಂಗ್ ಪದವೀಧರನಾಗಿದ್ದು, ತೀರ್ಥಹಳ್ಳಿಯಲ್ಲಿ ಪ್ರೌಢಶಾಲೆ ಮುಗಿಸಿ ಬೆಂಗಳೂರಲ್ಲಿಎಂಜಿನಿಯರಿಂಗ್ ಪದವಿ ಪಡೆದಿದ್ದ.
ಬೆಂಗಳೂರಿಗೆ ಬಂದ ವೇಳೆ ಉಗ್ರರ ಸಂಪರ್ಕಕ್ಕೆ ಬಂದಿದ್ದ. ಪೋಷಕರಿಗೆ ಒಬ್ಬನೇ ಮಗನಾಗಿರುವ ಈತ ಐಇಡಿ ಬಾಂಬ್ ತಯಾರಿಕೆಯ ನಿಷ್ಣಾತನಾಗಿದ್ದ.ಮಂಗಳೂರು ಕುಕ್ಕರ್ ಬ್ಲಾಸ್ಟ್, ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ಗಳ ಮಾಸ್ಟರ್ ಮೈಂಡ್ ಕೂಡ ಆಗಿರುವ ಮತೀನ್ ತಾಹ ಕಳೆದ ನಾಲ್ಕು ವರ್ಷಗಳಿಂದ ನಾಪತ್ತೆಯಾಗಿದ್ದ.
ಈ ಹಿಂದೆ ಎನ್‌ಐಎ ತಾಹನ ಪತ್ತೆಗೆ ಮೂರು ಲಕ್ಷ ರಿವಾರ್ಡ್ ಘೋಷಿಸಿತ್ತು. ರಾಮೇಶ್ವರಂ ಕೆಫೆ ಸ್ಪೋಟದ ಬಳಿಕ ಹತ್ತು ಲಕ್ಷ ಬಹುಮಾನ ಘೋಷಿಸಲಾಗಿದ್ದು, ಮುಸಾವೀರ್ ಜೊತೆಗೆ ಸಿಕ್ಕಿಬಿದ್ದಿದ್ದಾರೆ