Wednesday, December 4, 2024
Flats for sale
Homeರಾಜ್ಯಬೆಂಗಳೂರು : ದೊಡ್ಡ ಗೌಡರ ಕುಟುಂಬಕ್ಕೆ ಮತ್ತೊಂದು ಆಘಾತ : ಸೂರಜ್ ರೇವಣ್ಣಗೆ 14 ದಿನ...

ಬೆಂಗಳೂರು : ದೊಡ್ಡ ಗೌಡರ ಕುಟುಂಬಕ್ಕೆ ಮತ್ತೊಂದು ಆಘಾತ : ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರಕ್ಕೆ ಶಿಫ್ಟ್.

ಬೆಂಗಳೂರು : ಈ ಬಾರಿ ಸಿನಿಮಾ ನಟ ,ರಾಜಕೀಯ ವ್ಯಕ್ತಿಗಳಿಗೆ ಜೈಲೂಟ ಗ್ಯಾರಂಟಿ ಯಲ್ಲಿ ಒಂದಾಗಿದ್ದು ಒಂದಾದ ಮೇಲೆ ಒಬ್ಬೊಬ್ಬರು ಜೈಲು ಸೇರುತ್ತಿರುವುದು ಸುದ್ದಿಯಾಗುತ್ತಿದೆ. ಅಸಹಜ ಲೈಂಗಿಕ ದೌರ್ಜನ್ಯ ಅಂದ್ರೆ ಸಲಿಂಗ ಕಾಮದ ಆರೋಪದಲ್ಲಿ ಎಂಎಲ್‌ಸಿ ಸೂರಜ್ ರೇವಣ್ಣ ಅವರಿಗೆ ಆಘಾತ ಎದುರಾಗಿದೆ. ಹಾಸನದಲ್ಲಿ ಸೂರಜ್ ರೇವಣ್ಣ ಅವರನ್ನು ಬಂಧಿಸಿದ್ದ ಪೊಲೀಸರು ಬೆಂಗಳೂರಿಗೆ ಕರೆ ತಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

ಇನ್ನು ಸಿಐಡಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.ಗಂಭೀರವಾದ ಆರೋಪ ಪ್ರಕರಣವಾಗಿರುವುದರಿಂದ ಕೂಲಂಕಷವಾಗಿ ತನಿಖೆ ಮಾಡುತ್ತೇವೆ. ಸೂರಜ್ ರೇವಣ್ಣ ದಾಖಲಿಸಿರುವ ಪ್ರತಿ ದೂರಿನ ಬಗ್ಗೆ ಸಹ ಪೊಲೀಸರು ತನಿಖೆ ಮಾಡುತ್ತಾರೆ ಎಂದು ಗೃಹ ಸಚಿವರು ತಿಳಿಸಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ಆರೋಪಿ ಸೂರಜ್ ರೇವಣ್ಣ ಅವರನ್ನು ಬೆಂಗಳೂರಿಗೆ ಕರೆತರಲಾಗಿದ್ದು, ಜನಪ್ರತಿನಿಧಿಗಳ ನ್ಯಾಯಾಲಯದ ಜಡ್ಜ್ ಎದುರು ಹಾಜರುಪಡಿಸಲಾಗಿದೆ.

ಶನಿವಾರ ಸಂಜೆ ಎಂಎಲ್‌ಸಿ ರೇವಣ್ಣ ವಿರುದ್ದ ಅಧಿಕೃತವವಾಗಿ ದೂರು ದಾಖಲಾಗಿತ್ತು, ಸಂತ್ರಸ್ತ ಯುವಕ ಶಿವಕುಮಾರ್ ವಿರುದ್ಧ ಹಾಸನದ ಸೆನ್ ಪೊಲೀಸ್ ಠಾಣೆಗೆ ತೆರಳಿದ್ದ ಸೂರಜ್ ರೇವಣ್ಣ ಅವರರನ್ನು ಅಲ್ಲಿಯೇ ಬಂಧಿಸಲಾಗಿತ್ತು. ಇತ್ತ ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿದೆ. ಇಂದು ಜೈಲಿಗೆ ತಡವಾಗಿ ಆಗಮಿಸಿದ ಹಿನ್ನೆಲೆ ನಾಳೆ ಜೈಲಾಧಿಕಾರಿಗಳು ಸೂರಜ್ ರೇವಣ್ಣಗೆ ವಿಚಾರಣಾಧೀನ ಕೈದಿ ನಂಬರ್ ನೀಡಲಿದ್ದಾರೆ. ನಾಳೆ ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಬಾಡಿ ವಾರೆಂಟ್ ಮೇಲೆ ಸಿಐಡಿ ಅಧಿಕಾರಿಗಳು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.

ಸೂರಜ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಕೇಸ್‌ ಅನ್ನು ಸಿಐಡಿ ತನಿಖೆ ವಹಿಸಿದ ಮೇಲೆ ಆರೋಪಿಯನ್ನು ಹಾಸನದಿಂದ ಬೆಂಗಳೂರಿಗೆ ಕರೆತರಲಾಗಿದೆ. ಸಂತ್ರಸ್ತ ದೂರು ದಾಖಲಿಸುತ್ತಿದ್ದಂತೆ ಅವರ ವಿರುದ್ಧವೇ ಎಫ್‌ಐಆರ್‌ ದಾಖಲಿಸಲಾಗಿತ್ತು. ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಜೂನ್‌ 21ರಂದು ಎಫ್‌ಐಆರ್ ದಾಖಲಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

Most Popular