ಬೆಂಗಳೂರು ; ಬಹು ನಿರೀಕ್ಷಿತ ದ್ವಿತೀಯ ಪಿಯು ಫಲಿತಾಂಶ ಶುಕ್ರವಾರ ಏಪ್ರಿಲ್ 21 ರಂದು ಪ್ರಕಟವಾಗಿದೆ.
ದಕ್ಷಿಣ ಕನ್ನಡ (ದ.ಕ) ಶೇ.95.33ರಷ್ಟು ಉತ್ತೀರ್ಣತೆಯೊಂದಿಗೆ ಟಾಪರ್ ಆಗಿ ಹೊರಹೊಮ್ಮಿದರೆ, ಉಡುಪಿ ಶೇ.95.24ರಷ್ಟು ಫಲಿತಾಂಶ ಪಡೆದಿದೆ. ಶೇ.90.55ರಷ್ಟು ಉತ್ತೀರ್ಣರಾಗುವ ಮೂಲಕ ಕೊಡಗು ಜಿಲ್ಲೆ ಮೂರನೇ ಸ್ಥಾನ ಪಡೆದುಕೊಂಡಿದೆ.
ಮೂಡುಬಿದಿರೆಯ ಆಳ್ವಾಸ್ ಕಾಲೇಜು ಅನನ್ಯಾ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ.
ಪರೀಕ್ಷೆ ಬರೆದ 7.26 ಲಕ್ಷ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಹೊರಬಿದ್ದಿದೆ. ಫಲಿತಾಂಶಗಳನ್ನು https://karrresults.nic.in ನಲ್ಲಿ ವೀಕ್ಷಿಸಬಹುದು.
ಮಾರ್ಚ್ 9 ರಿಂದ 29 ರವರೆಗೆ ದ್ವಿತೀಯ ಪಿಯು ಪರೀಕ್ಷೆಗಳು ನಡೆದಿದ್ದು, ಈ ವರ್ಷ ವಿದ್ಯಾರ್ಥಿಗಳಿಗೆ ಬಹು ಆಯ್ಕೆಯ ಪ್ರಶ್ನೆಗಳನ್ನು ನೀಡುವ ಮೂಲಕ ಪ್ರಶ್ನೆ ಪತ್ರಿಕೆಗಳನ್ನು ಸರಳಗೊಳಿಸಲಾಗಿದೆ.