Thursday, July 23, 2026
Homeಕ್ರೈಂಬೆಂಗಳೂರು : ಕಾಣೆಯಾಗಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಫಾರ್ಮ್ ಹೌಸ್ ಮ್ಯಾನೇಜರ್ ವಿಷ ಸೇವಿಸಿ ಆತ್ಮಹತ್ಯೆ...

ಬೆಂಗಳೂರು : ಕಾಣೆಯಾಗಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಫಾರ್ಮ್ ಹೌಸ್ ಮ್ಯಾನೇಜರ್ ವಿಷ ಸೇವಿಸಿ ಆತ್ಮಹತ್ಯೆ !

ಬೆಂಗಳೂರು ; ರೇಣುಕಾ ಸ್ವಾಮಿ ಕೊಲೆ ಪ್ರಕರಣ ದಿನಕೊಂದು ತಿರುವು ಪಡೆಯುತ್ತಿದ್ದು ಇದೀಗ ಕಾಣೆಯಾಗಿದ್ದ ನಟ ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಶ್ರೀಧರ್‌ ಎಂಬಾತನ ಶವ ಪತ್ತೆಯಾಗಿದ್ದು,‌ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.

ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಶ್ರೀಧರ್‌ ನನ್ನ ಸಾವಿಗೆ ನಾನೇ ಕಾರಣ ಎಂದು ಆತ ಸಾಯುವ ಮುನ್ನ ದೆತ್ತ್ ನೋಟ್ ಬರೆದಿಟ್ಟಿದ್ದು,ಕೀಟನಾಶಕ ಸೇವನೆ ಮಾಡಿ ಶ್ರೀಧರ್‌ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ನಟ ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಶ್ರೀಧರ್‌ (35) ವಿಷ ಸೇವಿಸಿ ಏಪ್ರಿಲ್‌ 17 ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಯುವ ಮುನ್ನ ಬರೆದಿಟ್ಟಿರುವ ಡೆತ್‌ ನೋಟ್‌ ಕೂಡ ಪತ್ತೆಯಾಗಿದ್ದು ಪೊಲೀಸರು ಇಂದು ಸ್ಥಳ ಮಹಜರಿಗಾಗಿ ದರ್ಶನ್‌ ಸೇರಿದಂತೆ ಇತರೆ ಆರೋಪಿಗಳನ್ನು ಮೈಸೂರಿಗೆ ಕರೆದುಕೊಂಡು ಹೋಗಲಾಗುತ್ತಿದೆ ಎಂದು ಮಾಹಿತಿ ದೊರೆತಿದೆ.

ಒಂದು ಡೆತ್‌ ನೋಟನ್ನೂ ಶ್ರೀಧರ್‌ ಬರೆದಿಟ್ಟಿದ್ದಾನೆ. ತಾನು ಮಾನಸಿಕ ಖಿನ್ನತೆಗೊಳಗಾಗಿ ಸೂಸೈಡ್ ಮಾಡಿಕೊಳ್ಳುತ್ತಿರುವುದಾಗಿ ಅದರಲ್ಲಿ ಬರೆದಿದ್ದಾನೆ. “ನನ್ನ ಸಾವಿಗೆ ನಾನೇ ಕಾರಣ. ಒಂಟಿತನ ಕಾಡುತ್ತಿದೆ. ಬದುಕಿದ್ದು ಮನೆ ಕಟ್ಟಬೇಕು ಎಂದು ಆಸೆ ಇತ್ತು. ಆಗಲಿಲ್ಲ. ನಾನು ಸತ್ತಮೇಲೆ ನನ್ನ ಗೋರಿ ಆದರೂ ಕಟ್ಟಿ” ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾನೆ. ಡೆತ್‌ನೋಟನ್ನು ಯಾವುದೇ ಚಿತ್ತು ಕಾಟಿಲ್ಲದೆ ಬರೆದು, ಹೆಸರು ಬರೆದು ಸಹಿ ಹಾಕಿ ಜೊತೆಗೆ ಹೆಬ್ಬೆಟ್ಟು ಗುರುತನ್ನೂ ಒತ್ತಿದ್ದಾನೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ UDR ಪ್ರಕರಣ ದಾಖಲಾಗಿದೆ.

“ನನ್ನ ಸಾವಿಗೆ ಬೇರೆ ಯಾರೂ ಕಾರಣರಲ್ಲ” ಎಂದು ಮತ್ತೆ ಮತ್ತೆ ಡೆತ್‌ನೋಟ್‌ನಲ್ಲಿ ಶ್ರೀಧರ್‌ ಉಲ್ಲೇಖಿಸಿದ್ದಾನೆ. “ನನ್ನ ಅಮ್ಮ ಅಪ್ಪ ಅಕ್ಕಂದಿರು ಯಾರಾದರೂ ನನ್ನ ಸಾವಿನ ಬಗ್ಗೆ ಅನುಮಾನವಿದೆ ಎಂದು ಕಂಪ್ಲೇಂಟ್‌ ಕೊಟ್ಟರೆ ಅದನ್ನು ತಗೋಬೇಡಿ. ನಾನು ತುಂಬಾ ಯೋಚನೆ ಮಾಡಿ ನನ್ನ ಪ್ರಾಣ ಕಳೆದುಕೊಳ್ತಾ ಇದೇನೆ” ಎಂದು ಬರೆದಿದ್ದಾನೆ. ಇದೇ ಈಗ ಅನುಮಾನಕ್ಕೆ ಕಾರಣವಾಗಿದೆ. ದರ್ಶನ್‌ ಹೆಸರನ್ನು ಎಲ್ಲೂ ಈತ ಉಲ್ಲೇಖಿಸಿಲ್ಲ.

RELATED ARTICLES

LEAVE A REPLY

Please enter your comment!
Please enter your name here

Most Popular