ಬೆಂಗಳೂರು : ಮಂಡ್ಯ ನಾಗಮಂಗಲ ಗಣಪತಿ ವಿಸರ್ಜನೆ ವೇಳೆ ಗಲಭೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು ಸಮಗ್ರ ತನಿಖೆ ನಡೆಯುವಂತೆ ಆಕ್ರೋಶಹೊರಹಾಕಿದ್ದರು.
ಈ ಹಿನ್ನೆಲೆ ಕೋಮುಗಲಭೆಗೆ ಸಂಬಂಧಿಸಿದ ವಿಡಿಯೋ, ಫೋಟೋ ಪೋಸ್ಟ್ ಮಾಡುವ ಮೂಲಕ ದೊಂಬಿ ಗಲಭೆಗೆ ಪ್ರಚೋದನೆ ಆರೋಪಡಿ ನಾಗಮಂಗಲ ಟೌನ್ ಠಾಣೆಯಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಫ್ಐಆರ್ ದಾಖಲಾಗಿದೆ.
ನಾಗಮಂಗಲ ಘಟನೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಪೋಸ್ಟ್ ಹಾಕಿದ್ದು ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಲ್ಲು ತೂರಿ, ಬೆಂಕಿ ಹಚ್ಚಿದವರನ್ನ ರಕ್ಷಿಸಿ, ಗಣೇಶನನ್ನ ಬಂಧಿಸಲಾಗಿದೆ ಎಂದುಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು ಈ ಬಗ್ಗೆ ಕೋಮುಗಲಭೆ ಸಂಬಂಧ ಸುಳ್ಳು ಮಾಹಿತಿ ಅಂಚಿಕೆ ಆರೋಪದಡಿ ಇಬ್ಬರ ವಿರುದ್ದು ಫರ್ ದಾಖಲಿಸಲಾಗಿದೆ.