Wednesday, October 22, 2025
Flats for sale
Homeರಾಜ್ಯಬೆಂಗಳೂರು : ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಭಾರೀ ಬೆಂಕಿ.

ಬೆಂಗಳೂರು : ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಭಾರೀ ಬೆಂಕಿ.

ಬೆಂಗಳೂರು : ಬೆಂಗಳೂರಿನ ಬಾಣಸವಾಡಿಯಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಸೋಮವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮಾಹಿತಿಯ ಪ್ರಕಾರ, ರಾಮಮೂರ್ತಿ ನಗರದಲ್ಲಿ ಘಟನೆ ಸಂಭವಿಸಿದ್ದು, ಕಟ್ಟಡದ ಸುತ್ತಲೂ ಬೆಂಕಿ ಕಾಣಿಸಿಕೊಂಡಿದೆ.

ಅಷ್ಟರಲ್ಲಿ ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ನಡೆದಿದೆ.ಮಾಹಿತಿಯ ಪ್ರಕಾರ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದು ಬಂದಿಂದೆ.

ಹೌದು, ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, ತಡ ರಾತ್ರಿ 12 ಗಂಟೆಗೆ ಈ ಘಟನೆ ನಡೆದಿದೆ. ನೋಡ ನೋಡುತ್ತಿದ್ದಂತೆ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಗುತಿಯಾಗಿದೆ.

ಸದ್ಯ ಭಾರೀ ಅನಾಹುತ ತಪ್ಪಿದ್ದು ಕಟ್ಟಡದಲ್ಲಿ ಸಿಲುಕಿದ್ದ ಇಬ್ಬರು ಸೆಕ್ಯೂರಿಟಿ ಗಾರ್ಡ್​ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೆಕ್ಯೂರಿಟೀಸ್​ಗಳನ್ನ ಅಗ್ನಿಶಾಮಕದಳ ಸಿಬ್ಬಂದಿ ರಕ್ಷಿಸಿದ್ದಾರೆ. ಘಟನೆಯಲ್ಲಿ ಫರ್ನಿಚರ್ ಶಾಪ್, ಕೋಚಿಂಗ್ ಸೆಂಟರ್, ಐಟಿ ಕಂಪನಿ ಸಂಪೂರ್ಣ ಸುಟ್ಟು ಕರಕಲಾಗಿದೆ. ನೆಲ ಹಾಗೂ ಮೊದಲ ಮಹಡಿಯಲ್ಲಿ ಸ್ಟ್ಯಾನ್ಲಿ ಫರ್ನಿಚರ್ಸ್, ಎರಡನೇ ಮಹಡಿಯಲ್ಲಿ ಕಾಮೆಡ್ ಕೋಂಚಿಂಗ್ ಸೆಂಟರ್ ಇದೆ. ಅಲ್ಲದೇ ಮೂರು ಹಾಗೂ ನಾಲ್ಕನೇ ನೇ ಮಹಡಿಯಲ್ಲಿ ಬ್ರೇಕ್ಸ್ ಕಂಟ್ರೋಲ್ಸ್, ಸಾಫ್ಟ್‌ವೇರ್ ಕಂಪನಿ ಇತ್ತು. ಇಡೀ ಕಟ್ಟಡ ಸಂಪೂರ್ಣ ಸುಟ್ಟು ಕರಕಲಾಗಿದೆ. ಇನ್ನೂ ಅಗ್ನಿ ಅವಘಡದ ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular