Tuesday, July 21, 2026
Homeರಾಜ್ಯಬೆಂಗಳೂರು : ನಿರ್ಮಾಣ ಹಂತದ ಕಟ್ಟಡ ಕುಸಿತ ಮೂವರು ಸಾವು ,ಅವಶೇಷದಡಿ ಹಲವು ಕಾರ್ಮಿಕರು ಸಿಲುಕಿರುವ...

ಬೆಂಗಳೂರು : ನಿರ್ಮಾಣ ಹಂತದ ಕಟ್ಟಡ ಕುಸಿತ ಮೂವರು ಸಾವು ,ಅವಶೇಷದಡಿ ಹಲವು ಕಾರ್ಮಿಕರು ಸಿಲುಕಿರುವ ಶಂಕೆ..!

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವು ಅವಘಡಗಳು ಸಂಭವಿಸುತ್ತಿವೆ. ಹೆಣ್ಣೂರು ಸಮೀಪದ ಬಾಬುಸಾ​ಬ್​ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದೆ. ಇನ್ನು ಕಟ್ಟಡ ಅವಶೇಷಗಳಡಿ 13 ಕಾರ್ಮಿಕರು ಸಿಲುಕಿರಬಹುದು ಕಾರ್ಮಿಕರ ರಕ್ಷಣಾ ಕಾರ್ಯಚರಣೆ ನಡೆದಿದೆ.

ಕೂಲಿ ಕಾರ್ಮಿಕರು ಕಟ್ಟಡದ ಅವಶೇಷಗಳಲ್ಲಿ ಸಿಲುಕಿದ್ದು ಸ್ಥಳಕ್ಕೆ ರಕ್ಷಣಾ ಕಾರ್ಯಾಚರಣೆ ತಂಡ ನೀಡಿ ಅವಶೇಷಗಳನ್ನು ತೆಗೆಯುವ ಕೆಲಸ ನಡೆಸುತ್ತಿದ್ದಾರೆ.ಕಾಮಗಾರಿಯ ವೇಳೆಗೆ 16 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಅವಶೇಷಗಳಡಿಯಲ್ಲಿ ಸಿಲುಕಿದ್ದ ಕಾರ್ಮಿಕನೋರ್ವ ರಕ್ತ ಸಿಕ್ತ ಸ್ಥಿತಿಯಲ್ಲಿ ಆಚೆ ಬಂದಿದ್ದು, ಕಾರ್ಮಿಕನ ತಲೆಗೆ ಪೆಟ್ಟಾಗಿ ರಕ್ತ ಸೋರುತ್ತಿದೆ. ಇನ್ನು ರಕ್ತದ ಮಡುವಿನಲ್ಲೇ ಅಳುತ್ತ ನಮ್ಮವರು ಒಳಗೆ ಸಿಲುಕಿದ್ದಾರೆಂದು ಎಂದು ಮಾಹಿತಿ ನೀಡಿದ್ದಾನೆ. ಕಾರ್ಯಾಚರಣೆ ವೇಳೆ ಅವಶೇಷಗಳಡಿಯಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರ ಶವಗಳನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದಾರೆ. ಅಲ್ಲದೆ ಸಿಬ್ಬಂದಿ ಮೂವರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular