ಬೆಂಗಳೂರು : ಪತ್ನಿ ಹಾಗೂ ಮಾವನ ಕಿರುಕುಳಕ್ಕೆ ಬೇಸತ್ತು ಹೆಡ್‌ಕಾನ್ಸ್ಸ್ಟೇಬಲ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನನ್ನ ಸಾವಿಗೆ ಪತ್ನಿ ಮತ್ತು ಮಾವ ಕಾರಣ ಎಂದು ಡೆತ್‌ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ.
ಹೆಚ್.ಸಿ ತಿಪ್ಪಣ್ಣ ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ, ಮೃತದೇಹವನ್ನು ಸಿವಿ ರಾಮನ್ ನಗರ ಆಸ್ಪತ್ರೆಗೆ ರವಾನಿಸಲಾಗಿದೆ. ಆತ್ಮಹತ್ಯೆಗೆ ಶರಣಾದ ತಿಪ್ಪಣ್ಣ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್ಸ್ಸ್ಟೇಬಲ್ ಆಗಿ
ಕಾರ್ಯನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣಕ್ಕೆ ತೆರಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಾನು ನನ್ನ ಪತ್ನಿಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ. ನನ್ನ ಪತ್ನಿಯ ತಂದೆ ಯಮುನಪ್ಪ ನನಗೆ ಜೀವ ಬೆದರಿಕೆ ಹಾಕಿರುತ್ತಾನೆ. ಡಿ.12 ರಂದು ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿರುತ್ತಾನೆ. ಬೆಳಿಗ್ಗೆ ನಾನು ದೂರವಾಣಿ ಮಾಡಿದಾಗಲೂ ಕೂಡ ನೀನು ಸತ್ತು ಹೋಗು ನನ್ನ ಮಗಳು ಚೆನ್ನಾಗಿ ಇರುತ್ತಾಳೆ ಎಂದು ಹೇಳಿ ಅವಾಚ್ಯ ಶಬ್ಧಗಳಿಂದ ಬೈದಿದ್ದಾರೆ ಎಂದು ಡೆತ್‌ನೋಟ್‌ನಲ್ಲಿ ಪೊಲೀಸ್ ಪೇದೆ ಉಲ್ಲೇಖಿಸಿದ್ದಾರೆ. ಪ್ರಕರಣ ಕುರಿತಂತೆ ಬೈಯ್ಯಪ್ಪನ ಹಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.