ಬೆಂಗಳೂರು : ಪರಿಷತ್ ಸದಸ್ಯ ರಾಗಿ ಕಿಶೋರ್ ಕುಮಾರ್ ಬೊಟ್ಯಾಡಿ ಪ್ರಮಾಣ ವಚನ ಸ್ವೀಕಾರ..!

0
79

ಬೆಂಗಳೂರು : ವಿಧಾನಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಅವರು ಬುಧವಾರ
ವಿಧಾನಪರಿಷತ್‌ನ ನೂತನ ಸದಸ್ಯರಾಗಿ ಭಗವಂತ ಹಾಗೂ ತಾಯಿ ಭಾರತಾಂಬೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ಶಾಸಕರಾದ ಹರೀಶ್ ಪೂಂಜ, ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ಪ್ರಮುಖರು ಉಪಸ್ಥಿತರಿದ್ದು ಶುಭ ಹಾರೈಸಿದರು.

ಬಿಜೆಪಿ ಕಚೇರಿಗೆ ಭೇಟಿ
ವಿಧಾನಪರಿಷತ್ತಿನ ನೂತನ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಭೇಟಿ ನೀಡಿದರು. ಮಾಜಿ ಸಿಎಂ ಡಿ.ವಿ.ಸದಾನAದಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ಶಾಸಕ ಹರೀಶ್ ಪೂಂಜ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು,ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ, ಸಹ ಸಂಚಾಲಕ ಪ್ರಶಾಂತ ಕೆಡೆಂಜಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here