Wednesday, October 22, 2025
Flats for sale
Homeದೇಶಬೆಂಗಳೂರು : ಪಾಕಿಸ್ತಾನಕ್ಕೆರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರನ ಬಂಧನ..!

ಬೆಂಗಳೂರು : ಪಾಕಿಸ್ತಾನಕ್ಕೆರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರನ ಬಂಧನ..!

ಬೆಂಗಳೂರು : ಗುಪ್ತಚರ ಇಲಾಖೆ ಹಾಗೂ ಸೇನಾ ಇಂಟಲಿಜೆನ್ಸ್ ಜಂಟಿಯಾಗಿ ನಡೆಸಿದ ಮಹತ್ವದಕಾರ್ಯಾಚರಣೆಯಲ್ಲಿ ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರನೊಬ್ಬನನ್ನು ನಗರದಲ್ಲಿ ಬಂಧಿಸಲಾಗಿದೆ.

ಉತ್ತರಪ್ರದೇಶದ ಗಾಜಿಯಾಬಾದ್ ಮೂಲದ ನಿವಾಸಿ, ಬಿಇಎಲ್‌ನಲ್ಲಿ ಕೆಲಸ ಮಾಡುತ್ತಿದ್ದ ದೀಪ್ ರಾಜ್ ಚಂದ್ರ ಬಂಧಿತ ಆ ಆರೋಪಿಯಾಗಿದ್ದು, ಆತನನ್ನು ಹೆಚ್ಚಿನ ವಿಚಾರಣೆ ನಡೆಸಲಾಗಿದೆ.

ಆರೋಪಿಯು ಬಿಇಎಲ್‌ನ ಪ್ರಾಡಕ್ಟ್ ಡೆವಲಪ್ಮೆಂಟ್ ಆಂಡ್ ಇನ್ನೋವೇಶನ್ ಸೆಂಟರ್ ವಿಭಾಗದಲ್ಲಿಕೆಲಸ ಮಾಡುತ್ತಿದ್ದು ಮತ್ತಿಕೆರೆ ಬಳಿ ಮನೆ ಮಾಡಿಕೊಂಡು ನೆಲೆಸಿದ್ದ. ಈತ ಬಿಇಎಲ್‌ನಿಂದ ರಕ್ಷಣಾ ವಿಚಾರಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಎಂಬ ಆರೋಪವಿದೆ.

ಕೇಂದ್ರ ಮತ್ತು ರಾಜ್ಯ ಗುಪ್ತಚರ ಅಧಿಕಾರಿಗಳು, ಮಿಲಿಟರಿ ಇಂಟಲಿಜೆನ್ಸ್ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿವೆ

RELATED ARTICLES

LEAVE A REPLY

Please enter your comment!
Please enter your name here

Most Popular