ಬೆಂಗಳೂರು : ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರ ಸಂತಸ ಮುಗಿಲು ಮುಟ್ಟಿತ್ತು. ಗೆಲುವು ಸಾಧಿಸಿದ ಕಾಂಗ್ರೆಸ್ನ ಮೂವರು ಸದಸ್ಯರ ಪೈಕಿ ನಾಸಿರ್ ಹುಸೇನ್ ಬೆಂಬಲಿಗರು ಶತ್ರು ರಾಷ್ಟ್ರ ಪಾಕಿಸ್ತಾನ ಪರ ಜೈಕಾರ ಕೂಗಿ ಉದ್ಧಟತನ ಮೆರೆದಿದ್ದರು.ಈ ಪ್ರಕರಣಕ್ಕೆ ಸಂಬಂದಿಸಿದಂತೆ ಮೂವರನ್ನು ಬಂಧಿಸಿದ್ದು ಇದೀಗ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ಮೂವರಿಗೆ ಬೆಂಗಳೂರಿನ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿದೆ.
ಬೆಂಗಳೂರಿನ ಜಯಮಹಲ್ ನಿವಾಸಿ ಡಿ.ಎಸ್ ಮುನಾವರ್ ಅಹ್ಮದ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 39ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ವಿ ವಿಜೇತ್ ಪುರಸ್ಕರಿಸಿ ಜಾಮೀನು ನೀಡಿದೆ . ದೆಹಲಿಯ ಕಿಶನ್ ಗಂಜ್ನ ಮೊಹಮ್ಮದ್ ಇಲ್ತಾಜ್, ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮ್ಮದ್ ಶಫಿ ನಾಶಿಪುಡಿ ಹಾಗೂ ಬೆಂಗಳೂರಿನ ಮುನವರ್ ಬಂಧಿತರು.
ಕಾಂಗ್ರೆಸ್ ನಾಯಕರು ಆರಂಭದಲ್ಲಿ ಇದನ್ನು ನಿರಾಕರಿಸಿದ್ದರೂ ಎಫ್ಎಸ್ಎಲ್ ವರದಿ ಬಂದ ಬಳಿಕ ಮೂವರನ್ನು ಬಂಧಿಸಿದ್ದರು.ಈ ವರದಿಯಲ್ಲಿ ಆರೋಪಿಗಳು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಸಾಬೀತಾಗಿದೆ ಇದೀಗ ದೇಶದ್ರೋಹಿ ಘೋಷಣೆ ಕೂಗಿದ ಇವರಿಗೆ ಜಾಮೀನು ದೊರಕಿದೆ.


