ಬೆಂಗಳೂರು : ಈ ಕಾಂಗ್ರೆಸ್ ನ ನಾಯಕರಿಗೆ ಪಾಕಿಸ್ತಾನ ಹೆಸರು ಕೇಳಿದರೆ ಏನೋ ಒಂದು ಖುಷಿ.
ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ಬಿಜೆಪಿಗೆ ಪಾಕಿಸ್ತಾನ ಶತ್ರು ರಾಷ್ಟ್ರ ಇರಬಹುದು. ಆದರೆ, ನಮಗಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಪಾಕಿಸ್ತಾನ ದ ಮೇಲೆ ಮತ್ತೊಮ್ಮೆ ಪರವಾಗಿ ಮಾತನಾಡಿದ್ದಾರೆ.ವಿಧಾನ ಪರಿಷತ್ ಕಪಾಲದಲ್ಲಿ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಬಿಕೆ ಹರಿಪ್ರಸಾದ್ ಅವರು ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ಗೆ ಪಾಕಿಸ್ತಾನ ಶತ್ರು ರಾಷ್ಟ್ರವಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ನಾಸೀರ್ ಹುಸೇನ್ ವಿಜಯಶಾಲಿ ಎಂದು ಘೋಷಿಸಿದ ನಂತರ ವಿಧಾನಸೌಧದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಒಬ್ಬ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ್ದ.ಈ ಸಂಬಂಧ ಆರೋಪಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಬುಧವಾರ ಉಭಯ ಸದನಗಳಲ್ಲಿ ಗದ್ದಲ ಸೃಷ್ಟಿಸಿತು.
ಶತ್ರು ದೇಶ ಎಂದರೆ ನಿಮ್ಮ ಬಿಜೆಪಿ ಪ್ರಕಾರ ಅದು ಪಾಕಿಸ್ತಾನ. ಆದರೆ, ನಮಗೆ ಅದು ಶತ್ರು ದೇಶವಲ್ಲ, ನೆರೆಯ ದೇಶ ಮಾತ್ರ ಎಂದಿದ್ದಾರೆ.ಈ ಬಗ್ಗೆ ಸದನದಲ್ಲಿ ಗದ್ದಲ ಉಂಟಾಗಿ ಕಾಂಗ್ರೆಸ್ ಪಾಕಿಸ್ತಾನದ ಬಗ್ಗೆ ಮೃದುತ್ವವನ್ನು ತೋರಿಸುತ್ತಿದೆ ಎಂದು ಆರೋಪಿಸಿದ್ದಾರೆ.