ಬೆಂಗಳೂರು : ವಂಚನೆ ಪ್ರಕರಣ ಎದುರಿಸುತ್ತಿರುವ ವಿದ್ಯಾರ್ಥಿಯೊಬ್ಬನಿಗೆ ಪೊಲೀಸರು ವಾಟ್ಸ್ಪ್ ಮೂಲಕ ವಿಚಾರಣೆಗೆ ಹಾಜರಾಗುವಂತೆ ನೀಡಿದ್ದ ನೋಟಿಸ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ. ಇತ್ತೀಚೆಗೆ ಸುಪ್ರಿಂಕೋರ್ಟ್ ನೀಡಿರುವ ತೀರ್ಪಿನ ಅನುಸಾರ ಪೊಲೀಸರು ಯಾವುದೇ ಎಲೆಕ್ಟಾçನಿಕ್ ಸಂವಹನ ಮತ್ತು ವಾಟ್ಸ್ಪ್ ಮೂಲಕ ನೋಟಿಸ್ ನೀಡುವಂತಿಲ್ಲವಾದ್ದ ರಿಂದ ಇದನ್ನು ಮಾನ್ಯ ಮಾಡಲಾಗುವುದಿಲ್ಲ ಎಂದು ಹೇಳಿದೆ.
ವಿದ್ಯಾರ್ಥಿಯೊಬ್ಬ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠವು ಶುಕ್ರವಾರ ಈ ಆದೇಶ ನೀಡಿದೆ. ಬಿಎನ್‌ಎಸ್‌ಎಸ್ ಅಥವಾ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಅಡಿಯಲ್ಲಿ ವಾಟ್ಸ್ಪ್ ಮೂಲಕ ನೋಟಿಸ್ ಜಾರಿ ಮಾಡುವುದಕ್ಕೆ ಅವಕಾಶವಿಲ್ಲ ಎಂಬುದಾಗಿ ಪ್ರಕರಣವೊಂದರ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಆದೇಶಿಸಿದೆ ಎಂದು ತಿಳಿಸಿ,ನೋಟಿಸ್ ರದ್ದುಗೊಳಿಸಿ ಆದೇಶಿಸಿದೆ.
ಅಲ್ಲದೇ ಪ್ರಕರಣದಲ್ಲಿ ಹೊಸದಾಗಿ ವಿಚಾರಣಾ ಪ್ರಕ್ರಿಯೆ ಪ್ರಾರಂಭಿಸುವAತೆ ತನಿಖಾಧಿಕಾರಿಗಳಿಗೆ ನ್ಯಾಯಪೀಠ ಸೂಚನೆ ನೀಡಿ ಆದೇಶಿಸಿದೆ. ಆಡುಗೋಡಿಯಲ್ಲಿ ವಾಸವಿರುವ ಶ್ರೀನಿವಾಸ್‌ರಾವ್ಎಂ ಬವರಿಗೆ ಷೇರುಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವಂತೆ ಸಲಹೆ ಬಂದಿತ್ತು. ಅದಕ್ಕಾಗಿ ಒಂದು ವಾಟ್ಸ್ಆ್ಯಪ್ ಗ್ರೂಪ್‌ಗೆ ಸೇರಿದ ಬಳಿಕ ಕೆಲವು ಲಿಂಕ್‌ಗಳನ್ನು ಕಳುಹಿಸಿ ಹಣವನ್ನು ಹೂಡಿಕೆ ಮಾಡುವಂತೆ ತಿಳಿಸಿ ಸುಮಾರು ೪.೩೫ ಲಕ್ಷ ರೂ. ಗಳನ್ನು ತನ್ನ ಖಾತೆಗೆ ವರ್ಗಾವಣೆ ಮಾಡಿಕೊಂಡಿರುವ ಬಗ್ಗೆ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಅವರು ದೂರು ದಾಖಲಿಸಿದ್ದರು.
ದೂರಿನ ತನಿಖೆ ಪ್ರಾರಂಭಿಸಿದ್ದ ಪೊಲೀಸರು, ಇತರರ ಗುರುತು ಕಳವು ಮಾಡಿ ಕಂಪ್ಯೂಟರ್ ಉಪಕರಣಗಳನ್ನು ಬಳಸಿ ಹಣ ಪಡೆದು ವಂಚನೆ ಮಾಡಿದ ತಮಿಳುನಾಡು ಮೂಲದ ವಿದ್ಯಾರ್ಥಿಯ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯಿದೆಯಡಿ ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಈ ಸಂಬAಧ ಫೆಬ್ರವರಿ ೧೪ರಂದು ತಮಿಳುನಾಡು ಮೂಲದ ವಿದ್ಯಾರ್ಥಿಗೆ ವಿಚಾರಣೆಗೆ ಹಾಜರಾಗುವಂತೆ ಆಡುಗೋಡಿ ಪೊಲೀಸ್ ಠಾಣೆ ಅಧಿಕಾರಿಗಳು ವಾಟ್ಸ್ಪ್ ಮೂಲಕ ನೋಟಿಸ್ ಜಾರಿ ಮಾಡಿದ್ದರು. ಇದನ್ನುಪ್ರಶ್ನಿಸಿ ವಿದ್ಯಾರ್ಥಿ ಹೈಕೋರ್ಟ್ ಮೆಟ್ಟಿಲೇರಿದ್ದರು.