Thursday, November 21, 2024
Flats for sale
Homeದೇಶಬೆಂಗಳೂರು : ಪೊಲೀಸರ ಕಾರ್ಯಾಚರಣೆ : ಪಾಕಿಸ್ತಾನ ಪ್ರಜೆಗಳ ಬಂಧನ, ಬಂಧಿತರ ಸಂಖ್ಯೆ 22 ಕ್ಕೆ...

ಬೆಂಗಳೂರು : ಪೊಲೀಸರ ಕಾರ್ಯಾಚರಣೆ : ಪಾಕಿಸ್ತಾನ ಪ್ರಜೆಗಳ ಬಂಧನ, ಬಂಧಿತರ ಸಂಖ್ಯೆ 22 ಕ್ಕೆ ಏರಿಕೆ ..!

ಬೆಂಗಳೂರು : ಕೆಲ ದಿನಗಳ ಹಿಂದೆ ಆನೇಕಲ್‌ನ ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆ ಬಂಧನ ಬೆನ್ನಲ್ಲೆ
ಇದೀಗ ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದ 14 ಪಾಕ್ ಪ್ರಜೆಗಳನ್ನು ಬಂಧಿಸಲಾಗಿದೆ. ಜಿಗಣಿಯ ಪಾಕಿಸ್ತಾನದ ಪ್ರಜೆಗಳ ಬಂಧನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಳ್ಳುತ್ತಿದ್ದು, ಜಿಗಣಿ ಪೊಲೀಸರು ಕಾರ್ಯಾಚರಣೆ ನಡೆಸಿ ಇಂದು 14 ಮಂದಿ ಪಾಕಿಸ್ತಾನಿಯರನ್ನು ಬಂಧಿಸಿದ್ದು, ಇದರೊAದಿಗೆ ಇದುವರೆಗೂ ಬಂಧಿತ ಪಾಕ್ ಪ್ರಜೆಗಳ ಒಟ್ಟು ಸಂಖ್ಯೆ 22 ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಭಾರತದಲ್ಲಿ ಕಾರ್ಯಾಚರಿಸುತ್ತಿರುವ ಪಾಕ್ ಪ್ರಜೆಗಳ ಜಾಲ ಇನ್ನಷ್ಟು ವಿಸ್ತರಣೆಯಾಗಿರುವ ಆತಂಕ ಎದುರಾಗಿದೆ.

ಈ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸಿದ್ದು, ಬಂಧಿತರ
ವಿಚಾರಣೆಯಿAದ ಇನ್ನಷ್ಟು ಸ್ಪೋಟಕ ಮಾಹಿತಿಗಳು ಹೊರ ಬರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇವರೆಲ್ಲಾ ದೇಶದ ನಾನಾ ಭಾಗಗಳಲ್ಲಿ ಅಡಗಿ ಕುಳಿತಿದ್ದರು. ಪ್ರಕರಣದ ಕಿಂಗ್‌ಪಿನ್ ಪರ್ವೇಜ್ ಬಂಧನದ ಬೆನ್ನಲ್ಲೇ ಇನ್ನಿತರರು ಪೊಲೀಸರು ಎಡೆಮುರಿ ಕಟ್ಟಿದ್ದಾರೆ.

ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆಗಳ ಬಂಧನದ ಬೆನ್ನಲ್ಲೇ ಹೆಚ್ಚಿನ ತನಿಖೆಗಾಗಿ 4 ಪೊಲೀಸರ ತಂಡಗಳನ್ನು ರಚನೆ ಮಾಡಿ ವಿವಿಧ ರಾಜ್ಯಗಳಿಗೆ ಕಳುಹಿಸಿಕೊಡಲಾಗಿತ್ತು.ಚೆನ್ನೈ , ದೆಹಲಿ, ಹೈದರಾಬಾದ್‌ಗೆ ತೆರಳಿದ್ದ ಪೊಲೀಸರ ತಂಡ ಮೆಹದಿ ಫೌಂಡೇಷನ್ ಸಂಪರ್ಕದಲ್ಲಿದ್ದ ಒಟ್ಟು22 ಮಂದಿಯನ್ನು ಬಂಧಿಸಿದೆ. ಬAಧಿತ ಪಾಕ್ ಪ್ರಜೆಗಳೆಲ್ಲ ಧರ್ಮ ಪ್ರಚಾರಕ್ಕಾಗಿ ಭಾರತಕ್ಕೆ ನುಸುಳಿದ್ದಲ್ಲದೆ, ವಿವಿಧ ರಾಜ್ಯಗಳಲ್ಲಿ ಅಕ್ರಮವಾಗಿ ನೆಲೆಯೂರಿದ್ದ ಅಂಶ ಬೆಳಕಿಗೆ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಮುಂದುವರಿದ ತನಿಖೆ:
ಪೀಣ್ಯದಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳ ಬಂಧನ ಪ್ರಕರಣ ಸಂಬAಧ ನಗರ ಪೊಲೀಸರಿಂದಲೂ ಹೆಚ್ಚಿನತನಿಖೆ ನಡೆಯುತ್ತಿದೆ. ಪೊಲೀಸರು ಬಂಧಿತ ದಂಪತಿಯ ಸಂಪೂರ್ಣ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ದಂಪತಿ ಕಳೆದ ಮೂರು ವರ್ಷಗಳಿಂದ ಪೀಣ್ಯದ ಅಂದ್ರಹಳ್ಳಿ ಮುಖ್ಯರಸ್ತೆಯ ಮನೆಯಲ್ಲಿ ನಿಗೂಢವಾಗಿ ನೆಲೆಸಿದ್ದರು ಎಂಬುದು ಗೊತ್ತಾಗಿದೆ. ಮನೆಯಿಂದ ಹೊರ ಬಾರದೆ ಒಳಗಡೆಯೇ ನೆಲೆಸಿದ್ದರು ಎನ್ನಲಾಗಿದೆ. ಪಾಕ್ ಮೂಲದ ಸೈಯದ್, ಆತನ ಪತ್ನಿ ಹಾಗೂ ಮಗಳು ಹೆಸರು ಬದಲಿಸಿಕೊಂಡು ಬೆಂಗಳೂರಿನಲ್ಲಿ ನೆಲೆಸಿದ್ದರು. ಹೊರ ಜಗತ್ತಿನ ಸಂಪರ್ಕ ಇಲ್ಲದೆ ಗೌಪ್ಯವಾಗಿ ನೆಲೆಸಿದ್ದ ಮಾಹಿತಿ ಪೊಲೀಸರ ತನಿಖೆ ವೇಳೆ ಬಹಿರಂಗವಾಗಿದೆ.

ಯೂಟ್ಯೂಬ್‌ನಲ್ಲಿ ಪ್ರಚಾರ:
2019ರಲ್ಲಿ ನಗರಕ್ಕೆ ಬಂದಿದ್ದ ಸೈಯದ್ ಮತ್ತು ಕುಟುಂಬ ಅಂದಿನಿAದ ಧರ್ಮ ಪ್ರಚೋದಕರಾಗಿ ಕೆಲಸ ಮಾಡುತ್ತಿದ್ದರು. ಯೂಟ್ಯೂಬ್‌ನಲ್ಲಿ ಪ್ರಚಾರ ಕಾರ್ಯ ಮಾಡುತ್ತಾ ಇದ್ದರು. ಇವರು ಭಾರತಕ್ಕೆ 2014 ರಲ್ಲೇ ಬಂದಿದ್ದರು. ನಕಲಿ ಹೆಸರಲ್ಲಿ ಆಧಾರ್ ಮಾಡಿಸಿಕೊಂಡಿದ್ದ ಅಂಶವೂ ಪೊಲೀಸ್ ಮೂಲಗಳಿಂದ ತಿಳಿದುಬAದಿದೆ. ಈ ಮಧ್ಯೆ, ಪಾಕಿಸ್ತಾನಿ ಪ್ರಜೆಗಳ ಬಂಧನ ವಿಚಾರ ರಾಜಕೀಯ ಆರೋಪಕ್ಕೂ ಕಾರಣವಾಗಿತ್ತು. ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಪರಮೇಶ್ವರ್, ಪಾಕಿಸ್ತಾನ ಪ್ರಜೆಗಳ ಕುಟುಂಬ ಬೆಂಗಳೂರಿನಲ್ಲಿ ವಾಸವಾಗಿರುವ ವಿಷಯ ತಿಳಿದ ಕೂಡಲೇ ನಮ್ಮ ಪೊಲೀಸರು ಅವರನ್ನು ಬಂಧಿಸಿದ್ದಾರೆ. ನಮ್ಮ ಪೊಲೀಸರು ಸಮರ್ಥರಿದ್ದಾರೆ, ಉಳಿದವರನ್ನು ಪತ್ತೆ ಹಚ್ಚುತ್ತೇವೆ. ಕೇಂದ್ರದ ಗುಪ್ತಚರ
ಇಲಾಖೆ ವಿಫಲವಾಗಿದೆ ಎಂದಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular