ಬೆಂಗಳೂರು : ಗಂಡ ಹೆಂಡತಿಗಳಿಬ್ಬರು ಸರಕಾರಿ ನೌಕರರಾಗಿದ್ದರೆ ಮಕ್ಕಳ ಭವಿಷ್ಯ ತುಂಬಾನೇ ಕಷ್ಟಕರವಾಗಿರುತ್ತದೆ .ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ರಾಜಾ ಮಾಡಿ ಹೋಗುವ ಪರಿಸ್ಥಿತಿ ಉಂಟು ಹಲವಾರು ಪೊಲೀಸರು ವರ್ಗಾವಣೆಗೆಯಾಗದೆ ತಲೆಬಿಸಿಮಾಡಿಕೊಳ್ಳುತಿದ್ದರು. ಇದೀಗ ಸರಕಾರ ಪೊಲೀಸ್ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ.
ರಾಜ್ಯದಲ್ಲಿ ಪತಿ-ಪತ್ನಿ ಪೊಲೀಸ್ ವರ್ಗಾವಣೆಗೆ ಸಂಬಂಧಿಸಿ ಭಾರಿ ಆಗ್ರಹ ಕೇಳಿಬಂದಿತ್ತು. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸುಮಾರು ಮೂರು ವರ್ಷಗಳಿಂದ ಪತಿ-ಪತ್ನಿ ಯಾವುದೆ ಅಂತರ್ ಜಿಲ್ಲಾ ವರ್ಗಾವಣೆಯಾಗಿಲ್ಲ, ಅಂತರ್ಜಿಲ್ಲಾ ವರ್ಗಾವಣೆ ಕೊಡದೆ ಇದ್ದರೆ ದಯಾ ಮರಣವನ್ನಾದರೂ ಕೊಡಿ ಎಂದೂ ಕೆಲವರು ಮನವಿ ಮಾಡಿದ್ದರು. ಇದೆಲ್ಲ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಿದ ಗೃಹ ಸಚಿವ ಜಿ. ಪರಮೇಶ್ವರ್ ಅವರು ಸೂಚಿಸಿದ್ದಾರೆ.
2022ರಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಪೊಲೀಸ್ ಸಿಬ್ಬಂದಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ನೀಡಲು ತೀರ್ಮಾನಿಸಲಾಗಿತ್ತು.ಆದರೆ ಕೆಲ ಷರತ್ತುಗಳೊಂದಿಗೆ ಪೊಲೀಸ್ ಸಿಬ್ಬಂದಿ ವರ್ಗಾವಣೆಗೆ ಅವಕಾಶ ನೀಡಲಾಗಿತ್ತು.
ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸುಮಾರು ಮೂರು ವರ್ಷಗಳಿಂದ ಪತಿ-ಪತ್ನಿ ಅಂತರ್ ಜಿಲ್ಲಾ ವರ್ಗಾವಣೆ ಆಗಿಲ್ಲ. ಇದರಿಂದ ನಮಗೆ ನೆಮ್ಮದಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಪೊಲೀಸ್ ಸಿಬ್ಬಂದಿಯೊಬ್ಬರು ಇತ್ತೀಚೆಗೆ ದಯಾಮರಣ ಕೋರಿ ಸಿಎಂ ಸಿದ್ದರಾಮಯ್ಯ ಮತ್ತು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದರು. ಈ ವಿಚಾರ ಚರ್ಚೆಗೆ ಒಳಗಾಗುತ್ತಿದ್ದಂತೆಯೇ ಪೊಲೀಸ್ ಇಲಾಖೆ ಮತ್ತು ಸಚಿವ ಪರಮೇಶ್ವರ್ ಎಚ್ಚೆತ್ತು ಈ ಆದೇಶ ಹೊರಡಿಸಿದ್ದಾರೆ.