Sunday, March 16, 2025
Flats for sale
Homeರಾಜ್ಯಬೆಂಗಳೂರು: ಪ್ರತ್ಯೇಕ ಮುಸ್ಲಿಂ ಮಹಿಳಾ ಕಾಲೇಜು ವಕ್ಫ್ ಬೋರ್ಡ್ ಅಧ್ಯಕ್ಷರ ವೈಯಕ್ತಿಕ ಹೇಳಿಕೆಯಷ್ಟೆ ಸರ್ಕಾರದ ಮಟ್ಟದಲ್ಲಿ...

ಬೆಂಗಳೂರು: ಪ್ರತ್ಯೇಕ ಮುಸ್ಲಿಂ ಮಹಿಳಾ ಕಾಲೇಜು ವಕ್ಫ್ ಬೋರ್ಡ್ ಅಧ್ಯಕ್ಷರ ವೈಯಕ್ತಿಕ ಹೇಳಿಕೆಯಷ್ಟೆ ಸರ್ಕಾರದ ಮಟ್ಟದಲ್ಲಿ ಚರ್ಚೆ ಆಗಿಲ್ಲ : ಸಿಎಂ ಬೊಮ್ಮಾಯಿ.

ಬೆಂಗಳೂರು: ರಾಜ್ಯದ 10 ಕಡೆಗಳಲ್ಲಿ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆ ರಾಜ್ಯದಲ್ಲಿ ಮತ್ತೊಂದು ಸುತ್ತಿನ ಧರ್ಮ ದಂಗಲ್ ಆರಂಭವಾಗುವ ಸ್ಪಷ್ಟ ಸೂಚನೆ ಸಿಕ್ಕಿತ್ತು. ಹಿಂದೂ ಸಂಘಟನೆಗಳು ರಾಜ್ಯವ್ಯಾಪಿ ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿದ್ದವು. ಸರ್ಕಾರದ ನಿರ್ಧಾರಕ್ಕೆ ಬಲವಾದ ವಿರೋಧ ವ್ಯಕ್ತಪಡಿಸಿದ್ದವು.

ಈ ಬಗ್ಗೆ ಇಂದು ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಈ ವಿಷಯ ಸರ್ಕಾರದ ಮಟ್ಟದಲ್ಲಿ ಚರ್ಚೆಯೇ ಆಗಿಲ್ಲ, ಇದು ಸರ್ಕಾರದ ನಿಲುವು ಅಲ್ಲ, ಈ ಬಗ್ಗೆ ಚರ್ಚೆ ಆಗಿಲ್ಲ. ವಕ್ಫ್ ಬೋರ್ಡ್ ಅಧ್ಯಕ್ಷರು ಹೇಳಿರುವುದು ಅವರ ವೈಯಕ್ತಿಕ ಹೇಳಿಕೆಯಷ್ಟೇ, ಸರ್ಕಾರ ಏನು ನಿರ್ಧಾರ ಮಾಡುವುದಿದ್ದರೂ ಪರಾಮರ್ಶೆ ಮಾಡಿ ನಿರ್ಧರಿಸುತ್ತದೆ ಎಂಬ ಅಚ್ಚರಿಕೆ ಹೇಳಿಕೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular