ಬೆಂಗಳೂರು : ಬೆಂಗಳೂರಿನಲ್ಲಿರುವ ಪ್ರಧಾನಿ ನರೇಂದ್ರಮೋದಿ ಅವರು ಬೆಂಗಳೂರು- ಬೆಳಗಾವಿ ನಡುವಿನ ವಂದೇ ಭಾರತ್ ರೈಲು ಸೇರಿದಂತೆ ಮೂರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿ ಬೆಂಗಳೂರು ನಾಗರಿಕರ ಬಹುದಿನದ ನಿರೀಕ್ಷೆಯಾಗಿದ್ದ ನಮ್ಮ ಮೆಟ್ರೊ ಹಳದಿ ಮಾರ್ಗವನ್ನು ಲೋಕಾರ್ಪಣೆಗೊಳಿಸಿ ೩ನೇ ಹಂತದ ಬೆಂಗಳೂರು ಮೆಟ್ರೊಗೂ ಶಂಕುಸ್ಥಾಪನೆ ನೆರವೇರಿಸಿದರು. ಆಧುನಿಕ ನಗರಕ್ಕೆ ನವಪೀಳಿಗೆಯ ಸಂಚಾರ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಇಂದು ಬೆಳಿಗ್ಗೆ ಬೆಂಗಳೂರಿಗೆ ಬAದಿಳಿದ ಪ್ರಧಾನಿ ನರೇಂದ್ರಮೋದಿ ಅವರು ಬಿಜೆಪಿ ಕಾರ್ಯಕರ್ತರ ಭವ್ಯ ಸ್ವಾಗತದ ನಡುವೆಯೇ ಮೆಜೆಸ್ಟಿಕ್‌ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ತೆರಳಿದ್ದಾರೆ.
ಬೆಂಗಳೂರು-ಬೆಳಗಾವಿ-ವAದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿ ವರ್ಚುಯಲ್ ಮೂಲಕ ಅಮೃತಸರ-ಶ್ರೀಮಾತಾ ವೈಷ್ಣೋದೇವಿ ಖತ್ರಾ, ನಾಗ್ಪುರ-ಪುಣೆ ವಂದೇ ಭಾರತ್ ರೈಲು ಸಂಚಾರವನ್ನು ಉದ್ಘಾಟಿಸಿದರು. ವAದೇ ಭಾರತ್ ರೈಲನ್ನು ಅದ್ಧೂರಿಯಾಗಿ ಹೂವಿನಿಂದ ಸಿAಗರಿಸಲಾಗಿತ್ತು. ಪ್ರಧಾನಿ ಮೋದಿ ಅವರು ರೈಲಿನ ಒಳ ಹೋಗಿ ರೈಲು ಪ್ರಯಾಣಿಕರು ಹಾಗೂ ಮಕ್ಕಳೊಂದಿಗೆ ಕೆಲಕಾಲ ಸಂವಾದ ನಡೆಸಿ, ಅವರಿಂದ ರೈಲಿನ ಪ್ರಯಾಣದ ಅನುಭವದ ಮಾಹಿತಿಗಳನ್ನು ಪಡೆದುಕೊಂಡರು.
ನಾಳೆಯಿAದ ಬೆಳಗಾವಿ-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಆರಂಭವಾಗಲಿದ್ದು, ಬುಧವಾರ ಹೊರತುಪಡಿಸಿ ವಾರದ ೬ ದಿನ ರೈಲಿನ ಸಂಚಾರ ಇರಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರಮೋದಿ ಅವರ ಜತೆ ರಾಜ್ಯಪಾಲ ಥಾವರ್‌ಚಂದ್‌ಗೆಲ್ಹೋಟ್, ಮುಖ್ಯಮAತ್ರಿ ಸಿದ್ದರಾಮಯ್ಯ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ರಾಜ್ಯಸಚಿವ ಎಚ್.ಡಿ ಕುಮಾರಸ್ವಾಮಿ, ಕೇಂದ್ರದ ನಗರಾಭಿವೃದ್ಧಿ ಸಚಿವ ಮನೋಹರ್‌ಲಾಲ್ ಖಟ್ಟರ್, ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ರಾಜ್ಯಸಚಿವ ವಿ. ಸೋಮಣ್ಣ, ಕೇಂದ್ರದ ಸಣ್ಣ ಕೈಗಾರಿಕಾ ರಾಜ್ಯ ಸಚಿವೆ ಶೋಭಾಕರಂದ್ಲಾಜೆ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಆರೋಗ್ಯ ಸಚಿವ ದಿನೇಶ್‌ಗುಂಡೂರಾವ್, ಸAಸದ ತೇಜಸ್ವಿ ಸೂರ್ಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಗಣ್ಯರು ಭಾಗಿಯಾದರು.
ಪ್ರಧಾನಿ ಮೋದಿ ಅವರು ಚಾಲನೆ ನೀಡಿದ ಬೆಳಗಾವಿ-ಬೆಂಗಳೂರು 11ನೇ ವಂದೇ ಭಾರತ್ ಎಕ್ಸ್ಪ್ರಸ್ ರೈಲಾಗಿದೆ. ಮೆಟ್ರೊದಲ್ಲಿ ಸಂಚರಿಸಿ ಹಳದಿ ಮಾರ್ಗಕ್ಕೆ ಚಾಲನೆ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದ ನಂತರ ಪ್ರಧಾನಿ ನರೇಂದ್ರಮೋದಿ ಅವರು ಆರ್‌ವಿ ರಸ್ತೆಯ ರಾಗಿಗುಡ್ಡ ಮೆಟ್ರೊ ನಿಲ್ದಾಣಕ್ಕೆ ತೆರಳಿ ಹಳದಿ ಮಾರ್ಗದ ಮೆಟ್ರೊ ರೈಲಿನಲ್ಲಿ ಎಲೆಕ್ಟಾçನಿಕ್ ಸಿಟಿಯವರೆಗೂ ಪ್ರಯಾಣಿಸಿ ಮೆಟ್ರೊದ ಹಳದಿ ಮಾರ್ಗವನ್ನು ಲೋಕಾರ್ಪಣೆಗೊಳಿಸಿದರು.
ಇದಾದ ನಂತರ ಎಲೆಕ್ಟಾçನಿಕ್ ಸಿಟಿಯ ಐಐಐಟಿ ಕೇಂದ್ರದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರು ಮೆಟ್ರೊ ಹಂತ-3ಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಬೆAಗಳೂರು ಮೆಟ್ರೊ 3ನೇ ಹಂತದ ಈ ಯೋಜನೆ 44.65 ಕಿ.ಮೀ. ಉದ್ದವಿದ್ದು, ಮೆಟ್ರೊ ಹಂತ-3ಕ್ಕೆ ಸುಮಾರು 15 ಸಾವಿರ ಕೋಟಿ ರೂ. ವೆಚ್ಚವಾಗಲಿದೆ.ಮೆಟ್ರೊ ಹಂತ-3 ರಲ್ಲಿ ಜೆಪಿ ನಗರದಿಂದ ಕೆಂಪಾಪುರದವರೆಗೆ ಮತ್ತು ಹೊಸಹಳ್ಳಿಯಿಂದ ಕಡಬಗೆರೆವರೆಗೆ ಮೆಟ್ರೊ ರೈಲು ಮಾರ್ಗ ನಿರ್ಮಾಣವಾಗಲಿದೆ. ಇಂದು ಪ್ರಧಾನಿಯವರು ಲೋಕಾರ್ಪಣೆ ಮಾಡಿದ ಬೆಂಗಳೂರು ಮೆಟ್ರೊ ಹಳದಿ ಮಾರ್ಗ ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ 19.15ಕಿ.ಮೀ ಉದ್ದವಿದ್ದು, ಸುಮಾರು 7,160 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. ಬೆಂಗಳೂರಿನಲ್ಲಿ ಹಳದಿ ಮಾರ್ಗ ಲೋಕಾರ್ಪಣೆಯಿಂದ ಮೆಟ್ರೊ ರೈಲು 96ಕಿ.ಮೀ.ಗಳಿಗೆ ವಿಸ್ತರಣೆಗೊಳ್ಳಲಿದೆ.