ಬೆಂಗಳೂರು : ಕಳೆದ ತಿಂಗಳು ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವನನ್ನು ಮಾರಕಾಸ್ತçಗಳಿಂದ ಕೊಚ್ಚಿ ಕೊಲೆ ಮಾಡಲಾಗಿದ್ದ ಪ್ರಕರಣ ಇದೀಗ ಮಾಜಿ ಸಚಿವ ಭೈರತಿ ಬಸವರಾಜ್ ಅವರಿಗೆ ಸಂಕಷ್ಟ ತಂದೊಡ್ಡಿದೆ.
ಈ ಪ್ರಕರಣದಲ್ಲಿ ಭೈರತಿ ಬಸವರಾಜ್ ಅವರನ್ನು ಬಂಧಿಸಿ ವಿಚಾರಣೆ ನಡೆಸುವ ಅಗತ್ಯವಿದೆ ಎಂದು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಭೈರತಿ ಬಸವರಾಜ್‌ಗೆ ನೀಡಲಾದ ರಕ್ಷಣಾ (ಜಾಮೀನು) ಆದೇಶವನ್ನು ತೆರವು ಗೊಳಿಸುವಂತೆ ಕೋರಿ ಸಿಐಡಿ ಪರವಾಗಿ ಅರ್ಜಿ ಸಲ್ಲಿಸಲಾಗಿದೆ. ವಿಚಾರಣೆ ವೇಳೆ ಬಸವರಾಜ್ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಪ್ರಾಸಿಕ್ಯೂಷನ್ ಪರವಾಗಿ ಎಸ್‌ಪಿಪಿ ಬಿ.ಎನ್.ಜಗದೀಶ್ ವಾದ ಮಂಡಿಸಿದರು.
ಈ ಪ್ರಕರಣದಲ್ಲಿ ಹಲವು ಸಾಕ್ಷಿಗಳನ್ನು ಸಂಗ್ರಹಿಸಲಾಗಿದೆ. ಈಗ ಭೈರತಿ ಬಸವರಾಜು ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕಿದೆ ಎಂದು ತಿಳಿಸಿದರು. ಸಿಐಡಿ ಪೊಲೀಸರ ಅರ್ಜಿಗೆ ಬೈರತಿ ಬಸವರಾಜ್ ಅವರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಪೊಲೀಸರು ಕಳೆದ 1 ತಿಂಗಳಿAದ ವಿಚಾರಣೆಗೆ ಕರೆದಿಲ್ಲ. ಈ ಹಿಂದೆ ಪೊಲೀಸರು ಕರೆದಾಗಲೆಲ್ಲ ಭೈರತಿ ಬಸವರಾಜ್ ಅವರು ಸಹಕರಿಸಿದ್ದಾರೆ. ಈಗ ಏಕಾಏಕಿ ಬಂಧನದ ಅಗತ್ಯವಿದೆ ಎಂದು ಹೇಳುತ್ತಿದ್ದಾರೆ ಎಂದು ಹಿರಿಯ ವಕೀಲ ಸಂದೇಶ ಚೌಟ ವಾದ ಮಂಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾ. ಎಂ.ಐ. ಅರುಣ್ ಪೀಠ, ಎಷ್ಟು ದಿನಗಳ ಕಾಲ ಕಸ್ಟಡಿಗೆ ಬೇಕು ಎಂದು ಕೋರ್ಟಿಗೆ ತಿಳಿಸಿ ಎಂದು ವಕೀಲ ಬಿ.ಎನ್ ಜಗದೀಶ್
ಅವರಿಗೆ ಸೂಚಿಸಿತು. ಅಂತಿಮವಾಗಿ, ಈ ಅರ್ಜಿಗೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ಹೈಕೋರ್ಟ್ ಅರ್ಜಿದಾರರಿಗೆ ಅ.೮ರ ಒಳಗೆ ಕಾಲಾವಕಾಶ ನೀಡಿದೆ.