ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಮಾನನಷ್ಟ ಮೊಕದ್ದಮೆಯ ಕಾನೂನು ಸಂಘರ್ಷ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಇದೇ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗಲು ವಿನಾಯಿತಿ ಕೋರಿರುವ ಸಂಸದ ರಾಹುಲ್ಗಾಂಧಿ ಅವರ ಖುದ್ದು ಹಾಜರಾತಿಗೆ ವಿನಾಯಿತಿ ಕೋರಿರುವ ಅರ್ಜಿಯ ಬಗ್ಗೆ ಮಧ್ಯಾಹ್ನ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ.
ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಆಗಿನ ಬಿಜೆಪಿ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿ ಮಾಡಿದೆ. ಶೇ. ೪೦ರಷ್ಟು ಕಮಿಷನ್ ಆರೋಪ ಮಾಡಿ ರಾಜ್ಯದ ಪ್ರಮುಖಪತ್ರಿಕೆಗಳಲ್ಲಿ ಭ್ರಷ್ಟಾಚಾರದ ದರ ಪಟ್ಟಿ ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸಿತ್ತು. ಈ ಬಗ್ಗೆ ಬಿಜೆಪಿ ಮಾನನಷ್ಟ ಮೊಕದ್ದಮೆಯನ್ನು ಹೂಡಿತ್ತು. ಈ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆದಿತ್ತು. ಇಂದು ಮುಖ್ಯಮAತ್ರಿ ಸಿದ್ದರಾಮಯ್ಯ
ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ನಗರದ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಅವರ ಮುಂದೆ ವಿಚಾರಣೆಗೆ ಹಾಜರಾಗಿದ್ದು, ನ್ಯಾಯಾಧೀಶರು ಇವರಿಬ್ಬರಿಗೂ ಜಾಮೀನು ಮಂಜೂರು ಮಾಡಿದರು.
ಈ ಪ್ರಕರಣದಲ್ಲಿ ರಾಹುಲ್ಗಾಂಧಿ ಅವರು ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿಲ್ಲ. ವಿನಾಯಿತಿ ಕೊಡಿ ಎಂದು ರಾಹುಲ್ ಪರ ವಕೀಲ ನಿತೀಶ್ಕುಮಾರ್ಶೆಟ್ಟಿ ಮನವಿ ಮಾಡಿದರು.ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಪರ ವಕೀಲ ವಿನೋದ್ಕುಮಾರ್ ನ್ಯಾಯಾಲಯದ ಮುಂದೆ ಎಲ್ಲರೂ ಸಮಾನರು. ಚುನಾವಣೆ ನೆಪ ಹೇಳಿ ಗೈರಾಗುವಂತಿಲ್ಲ ವಿನಾಯಿತಿ ನೀಡಬೇಡಿ. ೩ನೇ ಬಾರಿ ರಾಹುಲ್ ವಿನಾಯಿತಿ ಕೇಳುತ್ತಿದ್ದಾರೆ ಎಂದು ಹೇಳಿದರು.
ವಾದ- ವಿವಾದಗಳನ್ನು ಆಲಿಸಿದ ನ್ಯಾಯಾಧೀಶರು ಈ ಬಗ್ಗೆ ಮಧ್ಯಾಹ್ನ ತೀರ್ಪು ಪ್ರಕಟಿಸುವುದಾಗಿ ಹೇಳಿದರು. ಆಗಿನ ಬಿಜೆಪಿ ಸರ್ಕಾರದ ವಿರುದ್ಧಆರೋಪ ಮಾಡಿದ್ದ ಕಾಂಗ್ರೆಸ್ ಮುಖAಡರ ವಿರುದ್ಧ ಬಿಜೆಪಿಯ ಆಗಿನ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಕೇಶವ್ಪ್ರಸಾದ್ ಅವರು ಕಾಂಗ್ರೆಸ್ ಮುಖAಡರುಗಳ ವಿರುದ್ಧ ಕಲಂ ೪೯೯, ೫೦೦ ಐಪಿಸಿ ರೀತ್ಯ ಮಾನನಷ್ಟ ಮೊಕ್ಕದ್ದಮೆಯ ಖಾಸಗಿ ದೂರನ್ನು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ದಾಖಲಿಸಿದ್ದರು.
ಈ ಪ್ರಕರಣಕ್ಕೆ ಸಂಬAಧಿಸಿದAತೆ ನ್ಯಾಯಾಲಯ ರಾಹುಲ್ಗಾಂಧಿ, ಮುಖ್ಯಮAತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಶಿವಕುಮಾರ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ನ್ಯಾಯಾಲಯಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಸರ್ಕಾರಿ ಅಭಿಯೋಜಕರ ಕೊಠಡಿಯಲ್ಲಿ ಕುಳಿತಿರಲು ಹೇಳಿತ್ತಾದರೂ ಈ ಇಬ್ಬರು ನಾಯಕರು ಬೇಡ ಎಂದು ಹೇಳಿ ಜನಸಾಮಾನ್ಯರಂತೆ ನ್ಯಾಯಾಲಯದ ಹೊರಗಡೆ ತಮ್ಮ ಹೆಸರು ಕೂಗುವವರೆಗೂ ಕಾದು ಕುಳಿತಿದ್ದು ವಿಶೇಷವಾಗಿತ್ತು.


