Wednesday, November 5, 2025
Flats for sale
Homeರಾಜಕೀಯಬೆಂಗಳೂರು : ಬಿಜೆಪಿ ಶಾಸಕ ಗೋಪಾಲಯ್ಯಗೆ ಕೊಲೆ ಬೆದರಿಕೆ,ವ್ಯಕ್ತಿಯ ಬಂಧನ.

ಬೆಂಗಳೂರು : ಬಿಜೆಪಿ ಶಾಸಕ ಗೋಪಾಲಯ್ಯಗೆ ಕೊಲೆ ಬೆದರಿಕೆ,ವ್ಯಕ್ತಿಯ ಬಂಧನ.

ಬೆಂಗಳೂರು : ಬಿಜೆಪಿ ಶಾಸಕ ಗೋಪಾಲಯ್ಯ ಅವರಿಗೆ ಕೊಲೆ ಬೆದರಿಕೆ ಹಾಕಿರುವ ವ್ಯಕ್ತಿಯನ್ನು ಬಂಧಿಸಲಾಗಿದೆ ಎAದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ವಿಧಾನಸಭೆಯಲ್ಲಿಂದು ತಿಳಿಸಿದರು.

ಶೂನ್ಯ ವೇಳೆಯಲ್ಲಿ ಸಚಿವ ಗೋಪಾಲಯ್ಯ ಅವರಿಗೆ ಕೊಲೆ ಬೆದರಿಕೆ ಹಾಕಿರುವ ವಿಚಾರಪ್ರಸ್ತಾಪವಾಗಿ ಇಡೀ ಸದನ ಅವರ ಬೆನ್ನಿಗೆ ನಿಂತು ಕೊಲೆ ಬೆದರಿಕೆ ಹಾಕಿರುವ ವ್ಯಕ್ತಿಯನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿತು.

ಸಭಾಧ್ಯಕ್ಷ ಯು.ಟಿ. ಖಾದರ್ ಸಹ ಶಾಸಕರಿಗೆ ಕೊಲೆ ಬೆದರಿಕೆ ಗಂಭೀರ ವಿಚಾರ, ಕೊಲೆ ಬೆದರಿಕೆ ಹಾಕಿರುವ ವ್ಯಕ್ತಿಗೆ ಕಠಿಣ ಸಂದೇಶ ಹೋಗಬೇಕು. ಕೂಡಲೇ ಕೊಲೆ ಬೆದರಿಕೆ ಹಾಕಿರುವ ವ್ಯಕ್ತಿಯನ್ನು ಬಂಧಿಸಿ ಇಲ್ಲವೆ ಸಂಬಂಧಪಟ್ಟ ಇನ್ಸ್ಪೆಕ್ಟರನ್ನು ಬಂಧಿಸುವAತೆ ರೂಲಿಂಗ್ ನೀಡಿದರು.

ಶಾಸಕರ ಕೊಲೆ ಬೆದರಿಕೆ ವಿಚಾರ ಕಾವೇರಿದ ಚರ್ಚೆ ನಡೆದ ನಂತರ ಸದನಕ್ಕೆ ಆಗಮಿಸಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು, ಶಾಸಕ ಗೋಪಾಲಯ್ಯ ಅವರಿಗೆ ಕೊಲೆ ಬೆದರಿಕೆ ಹಾಕಿರುವ ಬಿಬಿಎಂಪಿಯ ಮಾಜಿ ಸದಸ್ಯ ಪದ್ಮರಾಜ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಇದಕ್ಕೂ ಮೊದಲು ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಗೋಪಾಲಯ್ಯ, ತಮಗೆ ಕೊಲೆ ಬೆದರಿಕೆ ಹಾಕಿರುವ ವಿಚಾರವನ್ನು ಪ್ರಸ್ತಾಪಿಸಿದ ಬಿಜೆಪಿಯ ಶಾಸಕ ಗೋಪಾಲಯ್ಯ ಅವರು, ನಿನ್ನೆ ರಾತ್ರಿ 11 ಗಂಟೆ 1 ನಿಮಿಷ ಸಮಯದಲ್ಲಿ ಮಾಜಿ ಬಿಬಿಎಂಪಿ ಸದಸ್ಯರಾದ ಪದ್ಮರಾಜ್ ಅವರು ತಮಗೆ ದೂರವಾಣಿ ಕರೆ ಮಾಡಿ ಹಣ ನೀಡುವಂತೆ ಒತ್ತಾಯಿಸಿದರು.ನಾನು ನಿನಗೆ ಹಣ ಕೊಡಲು ನೀನೇನು ನನ್ನ ಚಿಕ್ಕಪ್ಪ, ದೊಡ್ಡಪ್ಪನ ಎಂದು ಹೇಳಿದೆ. ಆಗ ಪದ್ಮರಾಜ್ ನನ್ನ ಬಗ್ಗೆ ಹಾಗೂ ನನ್ನ ಕುಟುಂಬದ ಬಗ್ಗೆ ಅವಾಚ್ಯವಾಗಿ, ಕೆಟ್ಟದಾಗಿ ಮಾತನಾಡಿದರು.ಆ ಶಬ್ದಗಳನ್ನು ಇಲ್ಲಿ ಹೇಳಲು ಸಾಧ್ಯವಿಲ್ಲ. ಹಾಗೆಯೇ ಹುಡುಗರನ್ನು ಕಳುಹಿಸಿ ಮನೆ ಲೂಟಿ ಮಾಡುತ್ತೇನೆ. ಕೊಲೆ ಮಾಡುತ್ತೇನೆ ಎಂದು ಕೊಲೆ ಬೆದರಿಕೆ ಹಾಕಿದ್ದಾರೆ. ಈತನಿಗೆ ಬಸವೇಶ್ವರನಗರದಲ್ಲಿ ಕ್ಲಬ್ ಇದೆ. ಆ ಹಣದಲ್ಲಿ ಕುಡಿದು ಮದ ಏರಿ ಈ ರೀತಿ ಕೊಲೆ ಬೆದರಿಕೆ ಹಾಕಿದ್ದಾನೆ.

ಈತ ನನಗಷ್ಟೇ ಅಲ್ಲ ಹಿಂದೆ ಹಿರಿಯ ಶಾಸಕರಾದ ಸುರೇಶ್‌ಕುಮಾರ್ ಅವರಿಗೂ ಅನೇಕ ಬಾರಿ ಈ ರೀತಿ ಕೆಟ್ಟದ್ದಾಗಿ ಮಾತನಾಡಿದ್ದಾನೆ. ಅವರು ದೂರು ಕೊಟ್ಟಿಲ್ಲ ಅಷ್ಟೇ. ನನಗೆ ಕೊಲೆ ಬೆದರಿಕೆ ಹಾಕಿರುವ ಪದ್ಮರಾಜ್‌ನ್ನು ಗಡಿಪಾರು ಮಾಡಿ ಸಮಾಜಘಾತಕ ಶಕ್ತಿಗಳನ್ನು ಸರ್ಕಾರ ಮಟ್ಟ ಹಾಕಬೇಕು ಎಂದು ಒತ್ತಾಯಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular