ಬೆಂಗಳೂರು : ಎಣ್ಣೆ ಪ್ರಿಯರಿಗೆ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದ್ದು, ಬಿಯರ್ ದರ ಪುನಃ ಏರಿಕೆಗೊಳ್ಳುವ ಸಾಧ್ಯತೆ ಹೆಚ್ಚಿದೆ.
ಬಿಯರ್‌ನ ಆಲ್ಕೋಹಾಲ್ ಅಂಶದ ಆಧಾರದ ಮೇಲೆ ಅಬಕಾರಿ ಸುಂಕ ಹೆಚ್ಚಿಸಲು ಪ್ರಸ್ತಾಪಿಸುವ
ಹೊಸ ಅಧಿಸೂಚನೆಯನ್ನು ಸರ್ಕಾರ ಸಿದ್ಧಪಡಿಸಿದೆ. ಈ ಕಾರಣದಿಂದ ರಾಜ್ಯದಲ್ಲಿ ಸ್ಟ್ರಾಂಗ್ ಬಿಯರ್ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ. ಬಿಯರ್ ತಯಾರಕರಿಗೆ ತೊಂದರೆ ಉಂಟಾಗುವ ಕಾರಣ ಕರಡು ಅಧಿಸೂಚನೆ ಹಿಂತೆಗೆದುಕೊಳ್ಳುವAತೆ ಬಿಯರ್ ಅಸೋಸಿಯೇಷನ್ ಆಫ್ ಇಂಡಿಯಾ (ಬಿಎಐ) ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.
ಕರಡು ಅಧಿಸೂಚನೆಯ ಪ್ರಕಾರ, ಹೆಚ್ಚಿನ ಆಲ್ಕೋಹಾಲ್ ಹೊಂದಿರುವ ಬಿಯರ್‌ಗಳ ಮೇಲೆ ಶೇ.೧೦ ರಿಂದ ೨೦ರಷ್ಟು ಬೆಲೆ ಹೆಚ್ಚಳಕ್ಕೆ ಪ್ರಸ್ತಾಪ ಮಾಡಲಾಗಿದೆ. ಗ್ರಾಹಕರಿಗೆ ಬಿಯರ್‌ಗಳಲ್ಲಿ ಸಕ್ಕರೆ ಅಂಶದ ಪ್ರಮಾಣವನ್ನು ಘೋಷಿಸುವಂತೆ ಸರ್ಕಾರವು ರಾಜ್ಯದ ಬಿಯರ್ ತಯಾರಕರನ್ನು ಸೂಚಿಸಿದೆ. ಆದರೆ ಬಿಎಐ ಈ ಕ್ರಮವನ್ನು ವಿರೋಧಿಸಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಅತಿ ಹೆಚ್ಚು ಮದ್ಯದ ಬೆಲೆ ಹೊಂದಿರುವ ಕರ್ನಾಟಕ, ಕಳೆದ 2 ವರ್ಷಗಳಲ್ಲಿ2 ಬಾರಿ ಮದ್ಯದ ಬೆಲೆಯನ್ನು ಪರಿಷ್ಕರಿಸಿದೆ. ಇದೀಗ ಮೂರನೇ ಬಾರಿಗೆ ಬೆಲೆ ಹೆಚ್ಚಳಕ್ಕೆ ಮುಂದಾಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ.