ಬೆಂಗಳೂರು ; ಕೊನೆಗೂ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧಿಸಿದಂತೆ ಮತ್ತೊಬ್ಬ ಉಗ್ರನ ಬಂಧನವಾಗಿದೆ. ಪ್ರಮುಖ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ಖಚಿತ ಮಾಹಿತಿ ಮತ್ತು ಗುಪ್ತಚರ ಇಲಾಖೆಗೆ ದೊರೆತ ಸುಳಿವಿನ ಆಧಾರದಲ್ಲಿ ಎನ್ಐಎ ತಂಡವು ಹಲವಾರು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಭಯೋತ್ಪಾದಕರನ್ನು ಪಶ್ಚಿಮ ಬಂಗಾಳದಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿವೆ.
ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಪತ್ತೆಗೆ ಆತ ಧರಿಸಿದ್ದ ಕ್ಯಾಪ್‌ನ ಸಹಾಯದಿಂದ ಕಾರ್ಯಾಚಣೆ ನಡೆಸಲಾಗಿತ್ತು. ಮತೀನ್ ತಾಹಾನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮುಸ್ಸಾವಿರ್ ಹುಸೇನ್ ಶಾಜಿಬ್ನದ್ದೇ ಕೃತ್ಯ ಎಂಬುದು ದೃಢಪಟ್ಟಿತ್ತು. ನಂತರ ಆತನ ಪತ್ತೆಗೆ ಬಲೆಬೀಸಲಾಗಿತ್ತು. ಶಂಕಿತ ಭಯೋತ್ಪಾದಕ ಕರ್ನಾಟಕ ಮೂಲದವನಾಗಿದ್ದು, ಮಲೆನಾಡು ಪ್ರದೇಶದಲ್ಲಿ ಉಗ್ರಗಾಮಿ ಗುಂಪುಗಳೊಂದಿಗೆ ಸಂಪರ್ಕ ಹೊಂದಿರುವ ಶಂಕೆ ವ್ಯಕ್ತವಾಗಿತ್ತು.
ಮುಸಾಫೀರ್ ಶಾಜೀನ್ ಹುಸೇನ್ನನ್ನು ಉತ್ತರ ಭಾರತದ ರಾಜ್ಯದಲ್ಲಿ ಅರೆಸ್ಟ್ ಮಾಡಲಾಗಿದೆ. ಎನ್ ಐಎ ತಂಡದಿಂದ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.ಮುಸಾಫೀರ್ ಶಾಜೀನ್ ಹುಸೇನ್ ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ಕಡೆ ತಲೆಮರೆಸಿಕೊಂಡಿದ್ದನು. ಕೊನೆಗೂ ಆತನನ್ನು ಎನ್ಐಎ ತಂಡ ಬಂಧಿಸಿದೆ. ಉಗ್ರ ಮುಸಾಮೀರ್ ಶಾಜೀನ್ ಹುಸೇನ್ ಜೊತೆ ಮಾಸ್ಟರ್ ಮೈಂಡ್ ಮತೀನಾ ತಾಹಾ ಉಗ್ರನನ್ನು ಕೂಡ ಬಂಧಿಸಲಾಗಿದೆ.