Saturday, March 14, 2026
Flats for sale
Homeರಾಜಕೀಯಬೆಂಗಳೂರು : ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಸೋಲು,ಕಾಂಗ್ರೆಸ್‌ನ ಪುಟ್ಟಣ್ಣ...

ಬೆಂಗಳೂರು : ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಸೋಲು,ಕಾಂಗ್ರೆಸ್‌ನ ಪುಟ್ಟಣ್ಣ ಗೆಲುವು.

ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಿನಲ್ಲಿ ರಾಜ್ಯದಲ್ಲಿ ವಿಧಾನಪರಿಷತ್ ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಸೋಲಾಗಿದೆ.ಉಪಚುನಾವಣೆಯಲ್ಲಿ ಕಾಂಗ್ರೆಸ್ ನ ಪುಟ್ಟಣ್ಣ 1506 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಸೋಲಾಗಿದೆ.

ಪುಟ್ಟಣ್ಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿ ಕಳೆದ ಮಾರ್ಚ್ ನಲ್ಲಿ ಬಿಜೆಪಿಗೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿದ್ದು ಇದೀಗ ಪುಟ್ಟಣ್ಣ ಅವರೇ ಗೆಲುವು ಸಾಧಿಸಿದ್ದಾರೆ. ಬೆಂಗಳೂರಿನ ಸರ್ಕಾರಿ ಆರ್ಟ್ಸ್ ಕಾಲೇಜ್‌ನಲ್ಲಿ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಫಲಿತಾಂಶವನ್ನು ಘೋಷಣೆ ಮಾಡಲಾಗಿದೆ. ಹೀಗಾಗಿ ಕಾಂಗ್ರೆಸ್‌ ಬೆಂಬಲಿಗರು ಕಾಲೇಜಿನ ಮುಂಭಾಗದಲ್ಲಿ ಸಂಭ್ರಮಾಚರಣೆ ನಡೆಸಿದ್ದಾರೆ.

ಒಟ್ಟಿನಲ್ಲಿ ಕಾಂಗ್ರೆಸ್​ನ ಪುಟ್ಟಣ್ಣ ಒಟ್ಟು 8,260 ಮತಗಳನ್ನು ಪಡೆದುಕೊಂಡಿದ್ದರೆ, ಜೆಡಿಎಸ್​-ಬಿಜೆಪಿ ಮೈತ್ರಿ ಅಭ್ಯರ್ಥಿ ಎಪಿ ರಂಗನಾಥ್ ಅವರಿಗೆ ಒಟ್ಟು 6753 ಮತಗಳು ಬಿದ್ದಿವೆ. ಇನ್ನು 1239 ಮತಗಳು ತಿರಸ್ಕೃತಗೊಂಡಿವೆ.

RELATED ARTICLES

LEAVE A REPLY

Please enter your comment!
Please enter your name here

Most Popular