Friday, March 13, 2026
Flats for sale
Homeರಾಜ್ಯಬೆಂಗಳೂರು : ಬೆಳ್ಳಂಬೆಳಗ್ಗೆ 60 ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ಮನೆಗೆ ಲೋಕಾಯುಕ್ತ ದಾಳಿ.

ಬೆಂಗಳೂರು : ಬೆಳ್ಳಂಬೆಳಗ್ಗೆ 60 ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ಮನೆಗೆ ಲೋಕಾಯುಕ್ತ ದಾಳಿ.

ಬೆಂಗಳೂರು : ಸರಕಾರದಲ್ಲಿ ಭ್ರಷ್ಟ ಅಧಿಕಾರಿ ಇಲ್ಲವೆನ್ನಲು ಸಾಧ್ಯವೇ ಇಲ್ಲ ಯಾಕೆಂದರೆ ಎಲ್ಲ ಜೊಲ್ಲು ಸುರಿಸುತ್ತ ಇರುವವರೇ ಎಂದು ಸರಕಾರಿ ಅಧಿಕಾರಿಗಳೆಂದರೆ ಭ್ರಷ್ಟರೆಂಬುದು ಜನಗಳ ನಾಡಿಮಿಡಿತಗಳಲ್ಲಿ ತಿಳಿದಿದೆ. ಇಂದು ಮುಂಜಾನೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟಾಚಾರದ ಆರೋಪ ಹೊತ್ತಿರುವ ಅಧಿಕಾರಿಗಳ ಮನೆಗಳು ಹಾಗೂ ಕಚೇರಿಗಳಿಗೆ ಭಾರಿ ಪ್ರಮಾಣದ ದಾಳಿ ನಡೆಸಿದ್ದಾರೆ. ರಾಜ್ಯದ 60 ಕಡೆ ಏಕಕಾಲಕ್ಕೆ‌ ದಾಳಿ ನಡೆಸಿ ಪರಿಶೀಲನೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಮಹಾನಗರಪಾಲಿಕೆ ಚೀಫ್‌ ಎಂಜಿನಿಯರ್ ರಂಗನಾಥ್ ಎಸ್‌.ಪಿ ಮನೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬ್ಯಾಟರಾಯನಪುರ- ಯಲಹಂಕ ವಲಯದ ಅಧಿಕಾರಿಯಾಗಿರುವ ರಂಗನಾಥ್‌ಗೆ ಸೇರಿದ ಐದು ಸ್ಥಳಗಳಲ್ಲಿ ದಾಳಿ ನಡೆದಿದೆ.ಈ ದಾಳಿ ನಡೆಸಲು 13 ಮಂದಿ ಎಸ್ಪಿಗಳು, 12 ಮಂದಿ ಡಿವೈಎಸ್ಪಿಗಳು, 25 ಪಿಐಗಳು ಸೇರಿದಂತೆ 130 ಅಧಿಕಾರಿಗಳು ಲೋಕಾಯುಕ್ತ ದಾಳಿಗಳಲ್ಲಿ ಭಾಗಿಯಾಗಿದ್ದಾರೆ.ಬೆಂಗಳೂರು, ಬೆಳಗಾವಿ, ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡ, ವಿಜಯಪುರ ಜಿಲ್ಲೆಗಳಲ್ಲಿ ದಾಳಿ ನಡೆಸಿ ಶೋಧಕಾರ್ಯ ನಡೆಸ್ತಿದ್ದಾರೆ.

ದಾಳಿಗೊಳಗಾದ ಭ್ರಷ್ಟ ಅಧಿಕಾರಿಗಳ ವಿವರ ಇಲ್ಲಿದೆ.

ಬೀದರ್: ಏಕಕಾಲಕ್ಕೆ ನಾಲ್ಕು ಕಡೆ ದಾಳಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಕಾರಂಜಾ ಇಲಾಖೆಯ ಅಧಿಕಾರಿಯ ನಿವಾಸಗಳು, ಕಚೇರಿ ಮೇಲೆ ದಾಳಿಯಾಗಿದೆ. ಕಾರಂಜಾ ಅಧಿಕಾರಿ ಶಿವಕುಮಾರ್ ಸ್ವಾಮಿ ನಿವಾಸ ಹಾಗೂ ಕಚೇರಿ ಮೇಲೆ ದಾಳಿಯಾಗಿದೆ. ಲೋಕಾಯುಕ್ತ ಎಸ್‌ಪಿ ಆಂಟ್ಯೋನಿ ಜಾನ್ ಮಾರ್ಗದರ್ಶನದಲ್ಲಿ ಹಾಗೂ ಡಿವೈಎಸ್‌ಪಿ ಎನ್‌ಎಮ್.ಓಲೇಕಾರ್ ನೇತೃತ್ವದಲ್ಲಿ ದಾಳಿಯಾಗಿದೆ.

ಚಿಕ್ಕಬಳ್ಳಾಫುರ: ಚಿಕ್ಕಬಳ್ಳಾಫುರ ಕೆ.ಆರ್.ಡಿ.ಎಲ್ ನ ಇ.ಇ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಎಕ್ಸಿಕ್ಯೂಟೀವ್ ಇಂಜಿನಿಯರ್ ಸದಾಶಿವಯ್ಯಗೆ ಸೇರಿದ ಆಸ್ತಿ-ಪಾಸ್ತಿ ಮೇಲೆ ದಾಳಿಯಾಗಿದೆ. ಬೆಂಗಳೂರಿನ ಬಿಬಿಎಂಪಿಯ ಚೀಫ್ ಇಂಜಿನೀಯರ್ ರಂಗನಾಥ್ ಮನೆ ಮೇಲೆ ದಾಳಿಯಾಗಿದೆ. ಸದಾಶಿವನಗರದ ಮನೆಗೆ 5 ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸ್ತಿದ್ದಾರೆ.

ಮಂಡ್ಯ : ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ಲೆಕ್ಕಸಹಾಯಕನ ಮನೆ, ಕಚೇರಿ ಮೇಲೆ ದಾಳಿಯಾಗಿದೆ. ಅಗಸನಪುರ ಗ್ರಾಮ ಪಂಚಾಯತಿ ಲೆಕ್ಕಸಹಾಯಕ ಕೃಷ್ಣೇಗೌಡ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.

ಕೊಡಗು: ಕುಶಾಲನಗರದ ಎರಡು ಕಡೆಗಳಲ್ಲಿ ಲೋಕಾಯುಕ್ತ ದಾಳಿಯಾಗಿದೆ. ಸೋಮವಾರಪೇಟೆ ಇಓ ಜಯಣ್ಣ ಹಾಗೂ ಅಸಿಟೆಂಟ್ ಇಂಜಿನಿಯರ್ ಫಯಾಜ್ ಅಹಮದ್ ಮನೆ ಮೇಲೂ ಲೋಕಾಯುಕ್ತ ದಾಳಿಯಾಗಿದೆ.

ಧಾರವಾಡ: ಅರಣ್ಯ ಇಲಾಖೆ ಅಧಿಕಾರಿ ಮಹೇಶ್ ಹಿರೇಮಠ ಮನೆ ಮೇಲೆ ದಾಳಿ ನಡೆಸಿ ಶೋಧಕಾರ್ಯ ನಡೆಸ್ತಿದ್ದಾರೆ.

ಮೈಸೂರು: ಮೈಸೂರು ಲೊಕಾಯುಕ್ತ ಎಸ್.ಪಿ. ಸಜಿದ್ ಕುಮಾರ್ ನೇತೃತ್ವದಲ್ಲಿ 12 ಕಡೆ ದಾಳಿಯಾಗಿದೆ. ಬಿಡದಿಯ ಮಂಚನಾಯಕನಹಳ್ಳಿ ಗ್ರಾಮ ಪಿಡಿಒ ಯತೀಶ್ ನಿವಾಸದ ಮೇಲೆ ದಾಳಿಯಾಗಿದೆ. ಪಿಡಿಒ ಯತೀಶ್ ಅವರನ್ನು ಲೋಕಾಯುಕ್ತರು ವಶಕ್ಕೆ ಪಡೆದಿದ್ದಾರೆ. ಮೈಸೂರು, ಚನ್ನಪಟ್ಟಣದಲ್ಲಿ ಮನೆಗಳನ್ನ ಹೊಂದಿರು ಆರೋಪ ಇದೆ. ಬೆಸ್ಕಾಂ ಇಂಜಿನಿಯರ್ ಒಬ್ಬರ ನಿವಾಸದ ಮೇಲೂ ದಾಳಿಯಾಗಿದೆ ಎನ್ನಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular