Wednesday, March 4, 2026
Flats for sale
Homeರಾಜ್ಯಬೆಂಗಳೂರು : ಭೀಕರ ರಸ್ತೆ ಅಪಘಾತ : ಕಾರಿನ ಮೇಲೆ ಲಾರಿ ಬಿದ್ದು ಒಂದೇ...

ಬೆಂಗಳೂರು : ಭೀಕರ ರಸ್ತೆ ಅಪಘಾತ : ಕಾರಿನ ಮೇಲೆ ಲಾರಿ ಬಿದ್ದು ಒಂದೇ ಕುಟುಂಬದ ಆರು ಜನ ಸಾವು ..!

ಬೆಂಗಳೂರು : ನೆಲಮಂಗಲದಲ್ಲಿ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವನಪ್ಪಿದ ಘಟನೆ ನಡೆದಿದೆ.

ಮೃತರನ್ನು ಚಂದ್ರಮ್​ ಏಗಪ್ಪಗೋಳ್(46), ಪತ್ನಿ ಧೋರಾಬಾಯಿ(40), ಪುತ್ರ ಗ್ಯಾನ್‌(16), ಪುತ್ರಿಯರಾದ ದೀಕ್ಷಾ(10), ಆರ್ಯ(6) ಚಂದ್ರಮ್​ ಏಗಪ್ಪಗೋಳ್ ಸಹೋದರನ ಪತ್ನಿ ವಿಜಯಲಕ್ಷ್ಮೀ(35) ಎಂದು ತಿಳಿದುಬಂದಿದೆ .

ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಮೊರಬಗಿ ಮೂಲದವರಾದ ಚಂದ್ರಮ್ ಬೆಂಗಳೂರಿನ ಹೆಚ್‌ಎಸ್‌ಆರ್‌ ಲೇಔಟ್‌ನಲ್ಲಿ ವಾಸವಿದ್ದರು. ಐಎಎಸ್​​ಟಿ ಸಾಫ್ಟ್‌ವೇರ್‌ ಕಂಪನಿ ಮಾಲೀಕರಾಗಿದ್ದರು. ತಂದೆಗೆ ಹುಷಾರಿಲ್ಲ ಅಂತ ಕುಟುಂಬ ಸಮೇತ ವಿಜಯಪುರಕ್ಕೆ ಹೊರಟಿದ್ದರು. ಹೆದ್ದಾರಿಯಲ್ಲಿ ಯಮಸ್ವರೂಪಿಯಾಗಿ ಬಂದ ಲಾರಿಯೊಂದು ಇಡೀ ಕುಟುಂಬದ 6 ಜೀವಗಳನ್ನು ಬಲಿ ಪಡೆದಿದೆ.ತಂದೆಗೆ ಹುಷಾರಿಲ್ಲ ಅಂತ ಕುಟುಂಬ ಸಮೇತ ಊರಿಗೆ ಹೊರಟಿದ್ದವರು ಮಸಣ ಸೇರಿದ್ದಾರೆ.

ವಿಧಿಯಾಟವೇ ಹಾಗೆ, ಈಗಿದ್ದ ಜೀವ ಇನ್ನೊಂದು ಕ್ಷಣದಲ್ಲಿ ಇರುತ್ತೆ ಅಂತಾ ಹೇಳುವುದಕ್ಕೆ ಆಗಲ್ಲ. ಪ್ರಯಾಣಿಸ್ತಿದ್ದ ಕಾರಿನ ಮೇಲೆ ಬಿದ್ದಿತ್ತು. ಲಾರಿ ಬಿದ್ದ ರಭಸಕ್ಕೆ ಕಾರು ಅಪ್ಪಚ್ಚಿಯಾಗಿತ್ತು. ಕಾರಿನಲ್ಲಿದ್ದ 6 ಜೀವಗಳು ಕ್ಷಣಮಾತ್ರದಲ್ಲಿ ಮೃತಪಟ್ಟಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular