Friday, November 22, 2024
Flats for sale
Homeರಾಜ್ಯಬೆಂಗಳೂರು ; ಮಂದಿರ ಕಟ್ಟಿಸಿದರೆ ಸಾವಿರ ಭಿಕ್ಷುಕರು ಹುಟ್ಟಿಕೊಳ್ಳುತ್ತಾರೆ ಎಂದು ಸರಕಾರಿ ಗ್ರಂಥಾಲಯದಲ್ಲಿ ಹಿಂದೂ ಧರ್ಮಕ್ಕೆ...

ಬೆಂಗಳೂರು ; ಮಂದಿರ ಕಟ್ಟಿಸಿದರೆ ಸಾವಿರ ಭಿಕ್ಷುಕರು ಹುಟ್ಟಿಕೊಳ್ಳುತ್ತಾರೆ ಎಂದು ಸರಕಾರಿ ಗ್ರಂಥಾಲಯದಲ್ಲಿ ಹಿಂದೂ ಧರ್ಮಕ್ಕೆ ಅವಹೇಳನ, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ.

ಬೆಂಗಳೂರು ; ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕ್ಕಾರಕ್ಕೆ ಬಂದ ನಂತರ ಹಿಂದೂಧರ್ಮಕ್ಕೆ ಅವಹೇಳನ ಮಾಡುವುದು ಹೆಚ್ಚಾಗಿದ್ದು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ‘ಒಂದು ಮಂದಿರ ಕಟ್ಟಿಸಿದರೆ ಸಾವಿರ ಭಿಕ್ಷುಕರು ಹುಟ್ಟಿಕೊಳ್ಳುತ್ತಾರೆ. ಒಂದು ಗ್ರಂಥಾಲಯ ಕಟ್ಟಿಸಿದರೆ ಲಕ್ಷಾಂತರ ವಿದ್ವಾಂಸರು ಹುಟ್ಟಿಕೊಳ್ಳುತ್ತಾರೆ’ ಎಂಬ ಗೋಡೆಬರಹ ಪ್ರಕಟಿಸಲಾಗಿದೆ ಪದೇ ಪದೇ ಕಾಂಗ್ರೆಸ್ ಸರಕಾರ ಧರ್ಮನಿಂದನೆ ಮಾಡುತ್ತಿದ್ದು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಈ ಹಿಂದೆ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ಸಾಲುಗಳನ್ನು ಬದಲಾಯಿಸಿದ್ದ ವಿಚಾರ ರಾಜ್ಯದಾದ್ಯಂತ ವಿವಾದಕ್ಕೀಡಾಗಿತ್ತು. ಇದೀಗ ಗ್ರಂಥಾಲಯಗಳಲ್ಲಿ ಹಿಂದೂ ಧರ್ಮಕ್ಕೆ ಅವಮಾನ ಮಾಡಿರುವ ಬಗ್ಗೆ ವರದಿಯಾಗಿದೆ. ಈ ಗ್ರಂಥಾಲಯ ರಾಜ್ಯ ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯದ ಗೋಡೆ ಬರಹಕ್ಕೆ ಸಾಮಾಜಿಕ ಜಾಲತಾಣ ಹಾಗೂ ಹಿಂದೂಪರ ಸಂಘಟನೆಗಳು ಗೋಡೆಬರಹಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಮಂದಿರದ ಬದಲಾಗಿ ಮಸೀದಿ ಎಂದು ಯಾಕೆ ಬಳಕೆ ಮಾಡಲ್ಲ ಎಂದು ಪ್ರಶ್ನಿಸಿವೆ.

ಈ ನಡುವೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಸಚಿವರುಗಳು ಹಿಂದೂ ಧರ್ಮಕ್ಕೆ ಅವಹೇಳನ ಮಾಡುತ್ತ ಬಂದಿದ್ದು ದಿನಕ್ಕೊಂದು ವಿಚಾರಗಳನ್ನು ಪ್ರಸ್ತಾಪಿಸುತಿದ್ದು ಶಿಕ್ಷಣ ಸಂಸ್ಥೆಗಳ ವಿಚಾರದಲ್ಲಿ ವಿವಾದಾತ್ಮಕ ನಿರ್ಧಾರಗಳನ್ನು ಕೈಗೊಂಡು ಆದೇಶ ಹೊರಡಿಸಿ ನಂತರ ಯೂಟರ್ನ್​ ತೆಗೆದುಕೊಂಡಿದ್ದ ರಾಜ್ಯ ಸರ್ಕಾರ ಇದೀಗ ಗ್ರಂಥಾಲಯ ಗೋಡೆಬರಹದ ವಿಚಾರದಲ್ಲಿಯೂ ಸಂಕಷ್ಟಕ್ಕೀಡಾಗುವ ಸಾಧ್ಯತೆಇದೆಯೆಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular